ನೂತನ ಗೃಹಸಚಿವರಾದ ಅರಗ ಜ್ಞಾನೇಂದ್ರ ಅವರ ಸಚಿವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಭಾಗಿಯಾದರು. ಈ ವೇಳೆ ಬೆಳ್ತಂಗಡಿ ಮಂಡಲದ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಜೊತೆಗಿದ್ದರು.
ಕರಾವಳಿ ಭಾಗದಲ್ಲಿ ಮತಾಂಧರ ಅಟ್ಟಹಾಸಕ್ಕೆ ಎದೆಯೊಡ್ಡಿ ತನ್ನದೇ ರೀತಿಯಲ್ಲಿ ತೀಕ್ಷ್ಣ ಮಾತುಗಳ ಮೂಲಕ ಎಚ್ಚರಿಕೆ ನೀಡಿದ್ದ ಹರೀಶ್ ಪೂಂಜಾ ಅವರು ಗೃಹ ಸಚಿವರನ್ನು ಭೇಟಿ ಮಾಡಿರುವುದರಿಂದ ಮತಾಂಧರ ಮಟ್ಟಹಾಕಲು ಪೊಲೀಸರಿಗೆ ಇನ್ನಷ್ಟು ಬಲಸಿಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
ಕೆಲವು ಸಮಯದ ಹಿಂದೆ ಬಹಿರಂಗ ಸಭೆಯಲ್ಲಿ ಎಸ್‌ಡಿಪಿಐ ಮುಖಂಡರ ವಿರುದ್ಧ ಬೆಂಕಿಯ ಮಾತುಗಳನ್ನಾಡಿದ್ದ ಹರೀಶ್ ಪೂಂಜಾ ಅವರು ಸಮಾಜ ಘಾತುಕ ಶಕ್ತಿಗಳನ್ನು ಮಟ್ಟಹಾಕಲು ಪೊಲೀಸರಿಗೆ ಪೂರ್ಣ ಪ್ರಮಾಣದ ಸ್ವಾತಂತ್ರ್ಯ ನೀಡಲು ಗೃಹ ಸಚಿವರಿಗೆ ಮನವಿ ಮಾಡಿದ್ದರೆನ್ನಲಾಗಿದೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ