2014ರ ಫೆಬ್ರವರಿಯಲ್ಲಿ ಪಾಣೆಮಂಗಳೂರು ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬರಿಮಾರು ಗ್ರಾಮದ 4 ಜನ ಮೃತಪಟ್ಟು ತನ್ನ ಪೋಷಕರನ್ನು ಕಳೆದುಕೊಂಡು ಗಂಭೀರ ಗಾಯಗೊಂಡಿದ್ದ ಬಾಲಕ ನಿಶಾನ್ ಪೂಜಾರಿ ಬದುಕುಳಿದ ನತದೃಷ್ಟನಾಗಿದ್ದ. ಈ ದುರ್ಘಟನೆಯ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು (ಆ ಸಮಯದಲ್ಲಿ ಶಾಸಕರಾಗಿರಲಿಲ್ಲ) ಪುಟ್ಟ ಪೋರನನ್ನು ವಿದ್ಯಾಭ್ಯಾಸಕ್ಕಾಗಿ ದತ್ತು ತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೆ ಈ ಘಟನೆಯಲ್ಲಿ ಪೋಷಕರನ್ನು ಕಳೆದುಕೊಂಡ ಉಳಿದ ಮಕ್ಕಳ ಪಾಲನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
ಅಪಘಾತದಲ್ಲಿ ಕಾಲನ್ನು ಕಳೆದುಕೊಂಡಿದ್ದ ನಿಶಾನ್ ಪೂಜಾರಿಯವರಿಗೆ ಸಂಸದ ನಳಿನ್ ಕುಮಾರ್ ಕಟೀಲು ಇವರ ಸಂಸದರ ನಿಧಿಯಿಂದ ಮತ್ತು ತನ್ನ ವೈಯುಕ್ತಿಕ ಸಹಾಯ ಸೇರಿ ಸುಮಾರು 5 ಲಕ್ಷ ವೆಚ್ಚದಲ್ಲಿ ಕೃತಕ ಕಾಲು ಅಳವಡಿಸಲಾಗಿತ್ತು. ನಂತರ ಬಂಟ್ವಾಳ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿಶಾನ್‌ಗೆ ವಿದ್ಯಾಭ್ಯಾಸದ ವ್ಯವಸ್ಥೆ ಕಲ್ಪಿಸಿದ ರಾಜೇಶ್ ನಾಯ್ಕ್ ಅವರು ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವನ್ನು ಭರಿಸುತ್ತಿದ್ದಾರೆ.
ತನಗಾದ ಕಹಿ ಘಟನೆ ಮರೆತು ನಿಶಾನ್ ಪೂಜಾರಿ ತನಗೆ ಮರುಜನ್ಮ ನೀಡಿದ ಬಂಟ್ವಾಳದ ಮಾಣಿಕ್ಯ ರಾಜೇಶಣ್ಣನೊಂದಿಗೆ ಪ್ರತಿವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಬಾಲಕ ನಿಶಾನ್ ಅವರ ಜನ್ಮದಿನದಂದು ಶುಭಾಶಯ ತಿಳಿಸಿ ಮನತುಂಬಿ ಹರಸಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ನಿಶಾನ್ ಜೊತೆಗಿನ ಫೋಟೋ ಹಾಕಿ ಪೊಳಲಿ ಶ್ರೀ ರಾಜರಾಜೇಶ್ವರಿ ತಾಯಿ ಹರಸಲಿ ಎಂದು ಪ್ರಾರ್ಥಿಸಿಕೊಂಡಿದ್ಧಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ