ವಿಶ್ವ ಛಾಯಾಗ್ರಾಹಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಇಂದು ಉಡುಪಿಯಲ್ಲಿ ವಿವಿಧ ಪತ್ರಿಕೆಗಳ ಛಾಯಾಗ್ರಾಹಕರಿಗೆ ಸನ್ಮಾನ ಮಾಡಿದರು.
ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಕೇಂದ್ರ ಸರಕಾರದ ಸರ್ವತೋಮುಖ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿಕೊಂಡರು.
ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಒಗ್ಗೂಡಿ ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಶ್ರಮಿಸುತ್ತಿವೆ. ರೈತರ ಉತ್ಪನ್ನಕ್ಕೆ ಹೆಚ್ಚಿನ ದರ ಸಿಗುವ ನಿಟ್ಟಿನಲ್ಲಿ ಪ್ತಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಸಂಸತ್ತಿಗೆ ನೂತನ ಸಚಿವರ ಪರಿಚಯ ಮಾಡಲು ವಿರೋಧ ಪಕ್ಷಗಳು ಅವಕಾಶ ಕೊಡಲಿಲ್ಲ. ಇದೇ ಕಾರಣಕ್ಕೆ ಸುಮಾರು 500ರಷ್ಟು ಸಂಸದರ ಬದಲಾಗಿ 130 ಕೋಟಿ ಜನರ ಮುಂದೆ ಹೊಸ ಸಚಿವರನ್ನು ತೆಗೆದುಕೊಂಡು ಹೋಗಲು ಮತ್ತು ಜನರಿಗೆ ನೂತನ ಸಚಿವರನ್ನು ಪರಿಚಯಿಸಲು ನಿರ್ಧರಿಸಲಾಯಿತು. ಅದೇ ಕಾರಣಕ್ಕೆ ಈ ಯಾತ್ರೆ ನಡೆಯುತ್ತಿದೆ ಎಂದು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ