ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ ಅವರು ಇಂದು ಜನಾಶೀರ್ವಾದ ಯಾತ್ರೆಯ ಭಾಗವಾಗಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ನಗರದ ನ್ಯಾಯಬೆಲೆ ಅಂಗಡಿ ಹಾಗೂ ಗೊಬ್ಬರದ ಅಂಗಡಿ ಭೇಟಿ ನೀಡಿದರು.
ಸಂಸದರಾದ ಶ್ರೀ ಶಿವಕುಮಾರ್ ಉದಾಸಿ, ಶಾಸಕರಾದ ಶ್ರೀ ಅರುಣ್ ಕುಮಾರ್ ಪೂಜಾರ್, ಜಿಲ್ಲಾಧ್ಯಕ್ಷರಾದ ಶ್ರೀ ಸಿದ್ದರಾಜ ಕಲಕೋಟಿ, ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಕೆ.ಎಸ್ ನವೀನ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಯಾವತ್ತೂ ಮೀಸಲಾತಿ ಪರವಾಗಿದೆ ಎಂದು ಅವರು ಬಳಿಕ ನಡೆದ ಸಭೆಯಲ್ಲಿ ತಿಳಿಸಿದರು.
ಡಾ. ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ ಪಕ್ಷದವರು ಬಿಜೆಪಿ ಮೀಸಲಾತಿ ವಿರೋಧಿ ಎಂದು ಟೀಕಿಸುತ್ತಾರೆ. ಆದರೆ, ಜನರಿಗೆ ಎಲ್ಲವೂ ತಿಳಿದಿದೆ ಎಂದು ಹೇಳಿದರು.
ಗರಿಷ್ಠ ಸಂಖ್ಯೆಯ ದಲಿತ ಸಚಿವರು ಹಾಗೂ ಹಿಂದುಳಿದ ಸಮುದಾಯಗಳ ಸಚಿವರನ್ನು ಸಂಸತ್ತಿಗೆ ಪರಿಚಯಿಸಲು ಅವಕಾಶ ಕೊಡದ ಕಾಂಗ್ರೆಸ್ ವರ್ತನೆ ಖಂಡನೀಯ ಎಂದರು. ಸಚಿವರನ್ನು ಜನರಿಗೆ ಪರಿಚಯಿಸಲು ಮತ್ತು ಕೇಂದ್ರದ ಸಾಧನೆಗಳ ಕುರಿತು ತಿಳಿಸಲು ಜನಾಶೀರ್ವಾದ ಯಾತ್ರೆ ಮಾಡಲಾಗುತ್ತಿದೆ. ಕಾಂಗ್ರೆಸ್‍ಗೆ ಅಭಿವೃದ್ಧಿ ಬೇಕಾಗಿಲ್ಲ ಎಂದು ಅವರು ಆಕ್ಷೇಪಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ