ಸುರತ್ಕಲ್ ಕಾನ ರಸ್ತೆಯನ್ನು 10 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.
ಮನಪಾ ವ್ಯಾಪ್ತಿಯ ಸುರತ್ಕಲ್ ವಾರ್ಡ್ 2 ರಲ್ಲಿ ಸುಮಾರು 1.30 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಂಕ್ರಟೀಕರಣ ಕಾಮಗಾರಿ ಉದ್ಘಾಟನೆ ಹಾಗೂ ಮೂರು ಹೊಸ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಅವರು ಸೋಮವಾರ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಮಾತನಾಡಿದ ಅವರು ಕೊರೊನಾ ಸಮಸ್ಯೆ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ ಬಂದ ಅನುದಾನದಲ್ಲಿ ನಿರಂತರವಾಗಿ ಕೆಲಸ ಕಾರ್ಯಗಳು ನಡೆಯುತ್ತಿವೆ. ವಾರ್ಡ್ 2ರಲ್ಲಿ ಈಗಾಗಲೇ ಜಲಸಿರಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದು ಇದೀಗ ಒಳ ಚರಂಡಿ, ಮಳೆ ನೀರು ಹರಿಯುವ ತೋಡಿನ ಕೆಲಸ, ರಸ್ತೆಗಳನ್ನು ಸುಸಜ್ಜಿತಗೊಳಿಸುವತ್ತಾ ಗಮನ ಹರಿಸಿದ್ದೇವೆ. ಸರಕಾರದಿಂದ ಬರುವ ವಿವಿಧ ಇಲಾಖೆಗಳ ಅನುದಾನವನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಮನಾಪ ಸದಸ್ಯೆ ಶ್ವೇತಾ ಪೂಜಾರಿ, ಶಕ್ತಿ ಕೇಂದ್ರ ಪ್ರಮುಖರಾದ ಸುರೇಂದ್ರ ಸುವರ್ಣ,,ಸಹ ಪ್ರಮುಖರಾದ ರಾಕೇಶ್, ಬೂತ್ ಅಧ್ಯಕ್ಷರಾದ ಸಂತೋಷ್ ತಡಂಬೈಲ್, ಸಜಿತ್ ರಾಜ್, ರೇಖಾ, ವಿಠಲ್ ದಾಸ್ , ಜಗನ್ನಾಥ ಶೆಟ್ಟಿ, ಪಕ್ಷದ ಪ್ರಮುಖರಾದ ಸುಧಾಕರ್, ಅರುಣ, ಪ್ರಶಾಂತ್ ಶೆಟ್ಟಿ, ಲೋಕನಾಥ್, ಪದ್ಮನಾಭ, ವರು ಶೆಟ್ಟಿಗಾರ್, ಹಿತೇಶ್, ಪ್ರವೀಣ್, ಧನು, ಕಾರ್ಯಕರ್ತರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ