ಇಂದಿನಿಂದ ಶಾಲಾ ಕಾಲೇಜು ತರಗತಿಗಳು ಆರಂಭವಾಗುತ್ತಿರುವ ಕಾರಣ ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ತಮ್ಮ ಸ್ಥಳೀಯ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಕರಲ್ಲಿ ಆತ್ಮವಿಶ್ವಾಸ ಮೂಡಿಸಿದರು.
ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರ ಪಟ್ಟಣದ ಕಾಳಮ್ಮನಗರದ ಸರಕಾರಿ ಪ್ರೌಢಶಾಲಾ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಸುರಕ್ಷತೆಗಾಗಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪ್ರೋತ್ಸಾಹ ನೀಡಿದರು.
ವಿಧಾನ ಪರಿಷತ್ ಶಾಸಕರಾದ ಶ್ರೀ ಚಿದಾನಂದ್ ಎಂ ಗೌಡ ಅವರು ಸಿರಾ ತಾಲ್ಲೂಕು ಬರಗೂರು ಪ್ರೌಢ ಶಾಲೆಗೆ ಭೇಟಿ ನೀಡಿ, ಶಾಲೆಗಳಲ್ಲಿ ಕೈಗೊಂಡ ಮುಂಜಾಗ್ರತಾ ಕಾರ್ಯಕ್ರಮಗಳನ್ನು ಪರಿಶೀಲಿಸಿದರು. ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು 800 ವಿದ್ಯಾರ್ಥಿಗಳಿಗೆ ನೋಟ್ ಬುಕ್ಗಳನ್ನು ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ತಮ್ಮ ಕೆ.ಅರ್. ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ರಾಮಮೂರ್ತಿ ನಗರದ ಅಂಬೇಡ್ಕರ್ ಪ್ರೌಢ ಶಾಲೆ, ಕಲ್ಕೆರೆ ಸರ್ಕಾರಿ ಪ್ರೌಢ ಶಾಲೆ, ಐಟಿಐ ವಿಧ್ಯಾ ಮಂದಿರ, ಕೆ.ಅರ್.ಪುರ ಸರ್ಕಾರಿ ಪ್ರೌಢ ಶಾಲೆಗಳಿಗೆ ಭೇಟಿ ನೀಡಿದರು.
ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ. ಪಾಟೀಲ ಅವರು ಇಂದು ಬೆಂಗಳೂರಿನ ಹೆಬ್ಬಾಳದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಮತ್ತು ಮಲ್ಲೇಶ್ವರದಲ್ಲಿರುವ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆಗೆ ಭೇಟಿ ನೀಡಿ ತರಗತಿಗಳ ಪ್ರಾರಂಭಕ್ಕೆ ಚಾಲನೆ ನೀಡಿದ್ದಲ್ಲದೆ, ವಿದ್ಯಾರ್ಥಿಗಳಿಗೆ ಅಲ್ಲಿ ನೀಡಲಾಗಿರುವ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ, ಶಿಕ್ಷಕರೊಂದಿಗೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಖುದ್ದಾಗಿ ಚರ್ಚೆ ನಡೆಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹಿರೇಕೆರೂರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಕೌರವ ಶಿಕ್ಷಣ ಸಂಸ್ಥೆ ಬಾಳೆಂಬಿಡ, ಸಿಇಸ್ ವಿದ್ಯಾ ಸಂಸ್ಥೆಗೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಭೇಟಿ ನೀಡಿ ಶಾಲಾ ಸಿದ್ಧತೆ, ಮಕ್ಕಳ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದರು.
ಬಿಜೆಪಿ ಜನಪ್ರತಿನಿಧಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪಾಲಕ – ಪೋಷಕರಲ್ಲಿ ವಿಶ್ವಾಸ ಮೂಡಿಸುತ್ತಿರುವುದು ಉತ್ತಮ ನಡೆಯಾಗಿದೆ. ಮಕ್ಕಳು ಮತ್ತು ಪಾಲಕರು ಸಹ ಕೋವಿಡ್ ಮಾರ್ಗಸೂಚನೆಯನ್ನು ಅನುಸರಿಸಿ, ಯಾವುದೇ ಆತಂಕ ಇಲ್ಲದೆ ಸರ್ಕಾರದ ಜೊತೆ ಸಹಕರಿಸಿ ಎಂಬುದು ನಮ್ಮ ಮನವಿಯಾಗಿದೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ