ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ಅವರು ಹಾಗೂ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಉಪಯೋಗವಾಗಲಿದೆ.
ಆ ನಿಟ್ಟಿನಲ್ಲಿ ಸಾರ್ವಜನಿಕ ವಲಯದ ಮನವಿಯ ಪ್ರಕಾರ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೈಜೋಡಿಸುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ