ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ (ಬೈರತಿ) ಅವರು ದಿನಾಂಕ 5-9-2021 ರಂದು ದಾವಣಗೆರೆ ನಗರದ ವಿದ್ಯಾ ನಗರದ ರಸ್ತೆಯಲ್ಲಿ ಇರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಕನ್ನಡ ಭವನದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ ನೀಡಿದರು.
ಇದೇ ವೇಳೆ ದಾವಣಗೆರೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪಡೆದ ಪುರಸ್ಕೃತರನ್ನು ಸನ್ಮಾನಿಸಿ, ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನಲು ಉತ್ತಮ ಶಿಕ್ಷಕ-ಶಿಕ್ಷಕಿಯನ್ನು ಜಿಲ್ಲಾಡಳಿತ ಪ್ರತಿವರ್ಷ ಗುರುತಿಸಿ ಪಟ್ಟಿ ನೀಡಿದರೆ, ಅವರಿಗೆ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಈ ಕಾರ್ಯ ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿನಾಗಿರುವ ತನಕ ಮಾಡುತ್ತೇನೆ ಎಂದು ಭರವಸೆ ನೀಡುವ ಮೂಲಕ ಶಿಕ್ಷಕರಲ್ಲಿ ಅತ್ಮಸ್ಥೈರ್ಯ ತುಂಬಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಶ್ರೀ ಎಸ.ಎ.ರವೀಂದ್ರನಾಥ ವಹಿಸಿದ್ದರು. ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ