ಬೆಂಗಳೂರು : ಅರಣ್ಯ ಇಲಾಖೆಯ ಬೆಂಗಳೂರು ವೃತ್ತಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಇಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಉಮೇಶ ವಿ. ಕತ್ತಿಯವರು ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಅರಣ್ಯ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹಲವು ಕಾರ್ಯಗಳ ಕುರಿತಂತೆ ಸುದೀರ್ಘವಾಗಿ ಚರ್ಚಿಸಲಾಯಿತು. ಮುಖ್ಯವಾಗಿ ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಉದ್ಯಾನ ನಗರಿಯಲ್ಲಿ ಮತ್ತೇ ಹಚ್ಚ ಹಸಿರಿನ ಗತ ವೈಭವ ನಿರ್ಮಾಣವಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ನಿಟ್ಟಿನಲ್ಲಿ ನಗರದಾದ್ಯಂತ ಒಂದು ಲಕ್ಷ ಇಪ್ಪತ್ತು ಸಾವಿರ ಸಸಿಗಳನ್ನ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ತಿಳಿಸಿದರು. ಇದರಲ್ಲಿಯೂ ಒಂದು ವೈಶಿಷ್ಟ್ಯತೆಯನ್ನ ಪಾಲನೆ ಮಾಡುವಂತೆ ಸಚಿವರು ತಿಳಿಸಿದ್ದು, ಶೇ.10ರಷ್ಟು ಹಣ್ಣಿನ ಮರಗಳನ್ನ ನೆಡುವ ಕಾರ್ಯವಾಗಬೇಕೆಂದು ತಿಳಿಸಿದರು. ಇವು ವಿದ್ಯಾರ್ಥಿಗಳಿಗೆ ವಿವಿಧ ಹಣ್ಣಿನ ಮರಗಳ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ನೆರವಾಗಬೇಕು ಎಂದು ಸೂಚಿಸಿದ್ದಾರೆ. ಇಂದಿನ ಪೀಳಿಗೆಯ ಮಕ್ಕಳಿಗೆ ವಿವಿಧ ಹಣ್ಣಿನ ಮರಗಳ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ. ಹೀಗಾಗಿ ಇವುಗಳು ಮಕ್ಕಳಲ್ಲಿ ಆ ಕುರಿತು ಜಾಗೃತಿ ಮೂಡಿಸಲು ನೆರವಾಗಬೇಕು ಮತ್ತು ಪಕ್ಷಿಗಳಿಗೂ ಆಹಾರ ದೊರಕುವಂತಾಗಬೇಕು ಎಂಬುದು ಅರಣ್ಯ ಸಚಿವರಾದ ಶ್ರೀ ಉಮೇಶ.ವಿ. ಕತ್ತಿಯವರ ಆಶಯವಾಗಿದೆ.
ಹಾಗೆಯೇ ಅರಣ್ಯ ಇಲಾಖೆಯು ಇನ್ನು ಮುಂದೆ ರೈತರಿಗೆ ಹೆಚ್ಚಿನ ಬೇಡಿಕೆ ಇರುವ ಸಸಿಗಳ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ, ಮುಖ್ಯಸ್ಥರು ಅರಣ್ಯ ಪಡೆ, ಕಾರ್ಯದರ್ಶಿ ಅರಣ್ಯ ಇಲಾಖೆ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ