ಬೆಂಗಳೂರು : ವಿಕಾಸಸೌಧದಲ್ಲಿ ವಿಶ್ವ ಪರಂಪರಿಕ ಪ್ರವಾಸಿ ತಾಣವಾದ ಹಂಪಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಹಂಪಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಯಿತು.
ಹಂಪಿಯಲ್ಲಿ ಚಲನಚಿತ್ರ ಚಿತ್ರೀಕರಣಕ್ಕಾಗಿ ಅವಕಾಶ ನೀಡುವ ಕುರಿತು ನಿಯಮಗಳನ್ನು ಸರಳಿಕರಣ ಮಾಡಿದರೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವರು ಈ ಸಂಬಂಧ ಚಲನಚಿತ್ರ ನಿರ್ದೇಶಕರನ್ನು ಸೇರಿಸಿ ಸಭೆ ನಡೆಸಲಾಗುತ್ತದೆ. ಹಂಪಿಯ 5 ಕಡೆ ಶೌಚಾಲಯವನ್ನು ಉನ್ನತಿಕರಣ ಮಾಡಲು ಸೂಚಿಸಿದ ಸಚಿವ ಆನಂದ್ ಸಿಂಗ್.
ಹಂಪಿ ನೋಡಲು ಬಂದ ಪ್ರವಾಸಿಗರಿಗೆ ಆನ್ ಲೈನ್ ಟಿಕೆಟ್ ಜೊತೆಗೆ ಮ್ಯಾನ್ಯುಯಲ್ ಟಿಕೆಟ್ ಸಹ ದೊರೆಯಬೇಕು ಹಾಗೂ ನೆಟ್ವರ್ಕ್ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ 3 ಟವರ್ ಸ್ಥಾಪನೆ ಅನುಮತಿ.
ದಕ್ಷಿಣ ಭಾರತದ ಎಲ್ಲಾ ರಾಜ್ಯದ ಪ್ರವಾಸೋದ್ಯಮ ಸಚಿವರ ಸಭೆಯನ್ನು ಅಕ್ಟೋಬರ್ 17/18/19 ರಂದು ಹಂಪಿಯಲ್ಲಿ ಸಭೆ ಹಿನ್ನಲೆ ಅಗತ್ಯ ವ್ಯವಸ್ಥೆ ಕುರಿತು ಮಾಹಿತಿ ಪಡೆದ ಸಚಿವರು ಉತ್ತಮ ವ್ಯವಸ್ಥೆ ಮಾಡುವುದಕ್ಕೆ ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಸಿಂಧೂ ಬಿ ರೂಪೇಶ್, ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಅರಣ್ಯ ವಸತಿ ವಿಹಾರ ಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಜಯ ಶರ್ಮ ಮತ್ತು ಭಾರತೀಯ ಪುರತತ್ವ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ