ಬೆಂಗಳೂರು: ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠವನ್ನು ನಂಬುವ ಎಲ್ಲರಿಗೂ ಶುಭ ವಿಚಾರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ. ಯಾವತ್ತೂ ಸತ್ಯಕ್ಕೆ ಜಯ ಖಚಿತ ಎಂಬುದು ಇದರಿಂದ ಋಜುವಾತಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದುಗಳ ಪವಿತ್ರ ಸ್ಥಾನ ಚಿಕ್ಕಮಗಳೂರು ಜಿಲ್ಲೆಯ ‘ಬಾಬಾ ಬುಡನ್‍ಗಿರಿ” ಶ್ರೀ ಗುರು ದತ್ತಾತ್ರೇಯ ಪೀಠದ ಪೂಜೆಗೆ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018ರ ಮಾರ್ಚ್ 19ರಂದು ಆದೇಶ ಹೊರಡಿಸಿದ್ದರು. ಮೌಲ್ವಿ ನೇಮಕ ಆದೇಶ ರದ್ದು ಮಾಡಿ ಇಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮಹತ್ವದ ತೀರ್ಪನ್ನು ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಮೌಲ್ವಿ ನೇಮಿಸುವ ಕುರಿತ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನಿಂದ ಹಿಂದೂಗಳೆಲ್ಲರಿಗೂ ಸಂತೋಷ ಉಂಟಾಗಿದೆ ಎಂದು ಶ್ರೀ ನಳಿನ್‍ಕುಮಾರ್ ಅವರು ತಿಳಿಸಿದ್ದಾರೆ.
ಗೌರವಾನ್ವಿತ ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನ್ಯಾಯಪೀಠದಿಂದ ಆದೇಶ ಬಂದಿದ್ದು, ಸಮಸ್ತ ಹಿಂದುಗಳ ಧಾರ್ಮಿಕ ಭಾವನೆಗಳ ಗೌರವವನ್ನು ಎತ್ತಿಹಿಡಿದಂತಾಗಿದೆ. ಸಚಿವ ಸಂಪುಟ ಉಪ ಸಮಿತಿ ನೇಮಕ ಮಾಡಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್, ಹಂಪಿ ಕನ್ನಡ ವಿವಿಯ ರಹಮತ್ ತರೀಕೆರೆ, ಇತಿಹಾಸ ತಜ್ಞ ಷ.ಷಟ್ಟರ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯೇ ಕಾನೂನುಬಾಹಿರವಾಗಿತ್ತು. ನಾಗಮೋನಹನ್ ದಾಸ್ ಸಮಿತಿ ವರದಿಯನ್ನು ವಜಾಗೊಳಿಸಿ ವಿಶ್ವಹಿಂದೂ ಪರಿಷತ್ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ ಎಂದು ಅವರು ತಿಳಿಸಿದ್ದಾರೆ.
ದತ್ತಾತ್ರೇಯ ಪೀಠಕ್ಕೆ ಮೌಲ್ವಿಯನ್ನು ನೇಮಿಸಿದ್ದು ಸಮರ್ಪಕ ಕ್ರಮವಾಗಿರಲಿಲ್ಲ. ಹೀಗಾಗಿ ಈ ನೇಮಕವನ್ನು ಪ್ರಶ್ನಿಸಿದ ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿಗೆ ಇಂದು ಹೈಕೋರ್ಟ್ನಿಂದ ನ್ಯಾಯ ಸಿಕ್ಕಿದೆ. ಇದರಿಂದ ನ್ಯಾಯಾಂಗದ ಮೇಲಿನ ಭರವಸೆಯೂ ಹೆಚ್ಚಾಗಿದೆ. ಈ ತೀರ್ಪನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಶ್ರೀ ನಳಿನ್‍ಕುಮಾರ್ ಅವರು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ