ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದಿವ್ಯಾಂಗರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು, ಸಾಧನ ಸಲಕರಣೆಗಳನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಯವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ನಂತರ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಹೊಸಬೆಟ್ಟು ತಾವರೆಕೊಳ ಬಡಾವಣೆಯಲ್ಲಿ 78 ಲಕ್ಷ ರೂ ವೆಚ್ಚದಲ್ಲಿ 4 ಹೊಸ ಕಿರು ಸೇತುವೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಕೆಲ ಸಮಯದಿಂದ ಈ ಭಾಗದಲ್ಲಿ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದ್ದು, ಬೈಲಾರೆ ತಾವರೆಕೊಳ ಪ್ರದೇಶಗಳು ಮಳೆ ನೀರು ನಿಲ್ಲುವ ಪ್ರದೇಶವಾಗಿದ್ದು 15 ನೇಯ ಹಣಕಾಸು ಅನುದಾನದಡಿ ಸುಸಜ್ಜಿತ ಕಿರು ಸೇತುವೆ ಮಾಡಲಾಗುವುದು ಎಂದರು. ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದೆ. 2, 3 ತಿಂಗಳಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಉಪಮೇಯರ್ ವೇದಾವತಿ, ಕಾರ್ಪೋರೇಟರ್ ನಯನ ಆರ್ ಕೋಟ್ಯಾನ್, ಕಾರ್ಪೋರೇಟರ್ ವರುಣ್ ಚೌಟ, ಬಿಜೆಪಿ ಮುಖಂಡರಾದ ವಿಠ್ಠಲ್ ಸಾಲ್ಯಾನ್, ರಾಘವೇಂದ್ರ ಶೆಣೈ, ಸತೀಶ್ ದೇವಾಡಿಗ, ಶಂಕರ್ ಶೆಟ್ಟಿ, ಜಯಂತ ಕರ್ಕೇರ, ಸುರೇಶ್ ಸಾಲ್ಯಾನ್, ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ