ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚು ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ತಿನ ಚುನಾವಣೆಯಲ್ಲೂ ಬಿಜೆಪಿಯ ಅತ್ಯಧಿಕ ಸದಸ್ಯರು ಆಯ್ಕೆ ಆಗುವಂತೆ ನೋಡಿಕೊಳ್ಳಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಇಂದು ಜನಸ್ವರಾಜ್ ಯಾತ್ರೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಪಕ್ಷ ಹೆಚ್ಚು ಸ್ಥಾನ ಗೆದ್ದು ಅಧಿಕಾರ ನಡೆಸುವಂತಾಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಬೇಕು. ಲೋಕಸಭಾ ಚುನಾವಣೆಯ ನಂತರ ಮತ್ತೊಮ್ಮೆ ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿ ಅವರನ್ನು ನಾವು ಕಾಣಬೇಕು ಎಂದು ಆಶಿಸಿದರು.
ದೇಶ- ರಾಜ್ಯದಲ್ಲಿ ಆಗಿರುವ ಬಿಜೆಪಿ ಸರಕಾರಗಳ ನೇತೃತ್ವದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಎಲ್ಲರೂ ಬಿಜೆಪಿ ಬೆಂಬಲಿಸುವ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಯೋಜನೆ, ರಸ್ತೆ ಸೌಕರ್ಯ ಸೇರಿ ಮೂಲಸೌಕರ್ಯಕ್ಕೆ ನಮ್ಮ ಸರಕಾರಗಳು ಆದ್ಯತೆ ನೀಡಿವೆ ಎಂದು ತಿಳಿಸಿದರು. ಕೇಂದ್ರದ ಕಾಂಗ್ರೆಸ್ ಸರಕಾರಗಳು 70 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನೂ ಮೀರುವಂತೆ ನರೇಂದ್ರ ಮೋದಿಯವರ ಸರಕಾರ ಕಳೆದ ಏಳು ವರ್ಷಗಳಲ್ಲಿ ಕೆಲಸ ಮಾಡಿದೆ ಎಂದು ವಿವರಿಸಿದರು. ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರದಲ್ಲಿ ನಿರತವಾದರೂ ನಮ್ಮ ಸರಕಾರ ಅದನ್ನು ನಿಯಂತ್ರಿಸುವಲ್ಲಿ ಮಹತ್ವದ ಕಾರ್ಯ ಮಾಡಿದೆ ಎಂದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಕಾಂಗ್ರೆಸ್ ಅವಧಿ ಮತ್ತು ಬಿಜೆಪಿ ಅವಧಿಯ ಸಾಧನೆಗಳನ್ನು ತುಲನೆ ಮಾಡುವಂತೆ ಮನವಿ ಮಾಡಿದರು. ಗ್ರಾಮ ಪಂಚಾಯಿತಿಗೆ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ಕೊಟ್ಟ ಅನುದಾನ ಮತ್ತು ಈಗಿನ ಕೊಡುಗೆಯನ್ನು ಹೋಲಿಸಿ ನೋಡಿ ಎಂದು ತಿಳಿಸಿದರು. ಎಲ್ಲ ಹಳ್ಳಿಗಳಿಗೆ ವಿದ್ಯುತ್, ಮಹಿಳೆಯರ ಗೌರವ ಹೆಚ್ಚಿಸಲು ಶೌಚಾಲಯಗಳ ನಿರ್ಮಾಣ ಸೇರಿದಂತೆ ಎಲ್ಲ ಯೋಜನೆಗಳು ಭ್ರಷ್ಟಾಚಾರರಹಿತವಾಗಿ ಕಾರ್ಯಗತಗೊಳಿಸುತ್ತಿವೆ ಎಂದರು. ಮೋದಿಯವರ – ಬಿಜೆಪಿ ರಾಜ್ಯ ಸರಕಾರದ ಕಾರ್ಯಗಳನ್ನು ಗಮನಿಸಿ ವಿಧಾನಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ ಎಲ್ಲ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿನಂತಿಸಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಗೆ ಬಿಜೆಪಿ ಎಲ್ಲ ಕೊಡುಗೆಗಳನ್ನು ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕೇಂದ್ರ ಸಚಿವ ಸ್ಥಾನ, ವಿಧಾನ ಪರಿಷತ್ ಉಪ ಸಭಾಪತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸೇರಿ ಹಲವು ಪ್ರಮುಖ ಸ್ಥಾನಗಳನ್ನು ನೀಡಿದೆ. ಚಿಕ್ಕಮಗಳೂರು ಜಿಲ್ಲೆ ಬಿಜೆಪಿ ತಂಡ ಅತ್ಯಂತ ಬಲಿಷ್ಠವಾಗಿದೆ. ಇದೇ ರೀತಿಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ವಿನಂತಿಸಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ರಾಜ್ಯದ ಸಚಿವರಾದ ಆರ್. ಅಶೋಕ್, ಎಸ್.ಟಿ. ಸೋಮಶೇಖರ್, ಜಿಲ್ಲಾಧ್ಯಕ್ಷರಾದ ಕಲ್ಮರುಡಪ್ಪ, ವಿಧಾನ ಪರಿಷತ್ ಉಪ ಸಭಾಪತಿಗಳಾದ ಪ್ರಾಣೇಶ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ ಶಂಕರಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವಥ್‍ನಾರಾಯಣ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಶಾಸಕರಾದ ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್, ಎಂ.ಪಿ. ಕುಮಾರಸ್ವಾಮಿ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಜೀವರಾಜ್ ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ