ನವದೆಹಲಿ: ದಕ್ಷಿಣಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನಕುಮಾರ್ ಕಟೀಲ್ ಅವರು ಇಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ದಿನಾಂಕ 10.01.2022 ರಂದು ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ರೂ. 2555.88 ಕೋಟಿ ವೆಚ್ಚದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಕಾಮಗಾರಿಗಳ ಪುನರ್ ಚಾಲನೆ ನೀಡಲಿರುವ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.
ಇದೇ ವೇಳೆ ಮಂಗಳೂರು ಬೆಂಗಳೂರು ನಡುವಿನ ಶಿರಾಡಿ ಘಾಟ್ ಸುರಂಗ ಮಾರ್ಗದ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಕೈಗೆತ್ತಿಕೊಳ್ಳುವಂತೆ ವಿನಂತಿಸಲಾಯಿತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಚಿವರು ಜಿಲ್ಲೆಗೆ ಅನುಕೂಲವಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸುವುದಾಗಿ ತಿಳಿಸಿದ್ದಾರೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ತಿಳಿಸಿದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ