ಬೆಂಗಳೂರು : ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ವಾರ ಯುವ ಸಪ್ತಾಹ ಹಮ್ಮಿಕೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು.
ಜನವರಿ 12 ರಿಂದ 18 ವರೆಗೂ ಯುವ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಇಂದು ಸಚಿವ ಡಾ.ನಾರಾಯಣಗೌಡ ಅವರು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಯುವ ಸಪ್ತಾಹವನ್ನು ಯಶಸ್ವಿಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜನವರಿ 12- ಎಲ್ಲಾ ಶಾಲೆಗಳು-ಕಾಲೇಜುಗಳಲ್ಲಿ ‘ಯುವ ಸಂಸದ್’ ಮತ್ತು ಗ್ರಾಮ ಮಟ್ಟದಲ್ಲಿ ಯುವ ಗ್ರಾಮ ಸಭೆಗಳನ್ನು ನಡೆಸುವುದು.
ಜನವರಿ-13: ಸ್ವಾಮಿ ವಿವೇಕಾನಂದರ ವಿಚಾರಧಾರೆ, ಉದ್ದೇಶಗಳು ಮತ್ತು ತಾತ್ವಿಕ ಆಶಯಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ.
ಜನವರಿ 14: ಪೌಷ್ಟಿಕಾಂಶ ಮತ್ತು ಆರೋಗ್ಯ ಶಿಬಿರಗಳು, ರಸ್ತೆ ಸುರಕ್ಷತೆ ಕುರಿತು ಜಾಗೃತಿ.
ಜನವರಿ15: ಸ್ಥಳೀಯ ಗ್ರಾಮೀಣ ಕ್ರೀಡಾ ಉತ್ಸವ.
ಜನವರಿ 16: ಮಾದಕ ವ್ಯವನ, ಮಹಿಳಾ ದೌರ್ಜನ್ಯ ಮತ್ತು ಸೈಬರ್ ಅಪರಾಧಗಳ ತಡೆಗಟ್ಟುವ ಬಗ್ಗೆ ಜಾಗೃತಿ.
ಜನವರಿ 17: ಕಾನೂನು ನೆರವು ಸೇವೆಗಳ ಬಗ್ಗೆ ಜಾಗೃತಿ.
ಜನವರಿ 18: ಕೌಶಲ್ಯ ಕರ್ನಾಟಕದ ಅಡಿಯಲ್ಲಿ ಘನತ್ಯಾಜ್ಯ ನಿರ್ವಹಣೆ ತಂತ್ರಜ್ಞಾನ , ಉದ್ಯಮಶೀಲತರ ಅಭಿವೃದ್ಧಿ ಮತ್ತು ಸಾಫ್ಟ್ ಸ್ಕಿಲ್ ತರಬೇತಿ ಕುರಿತು ಕೌಶಲ್ಯ ಅಭಿವೃದ್ಧಿ ಕುರಿತು ತರಬೇತಿ.
ಯುವ ಸಪ್ತಾಹದ ಹಿನ್ನೆಲೆಯಲ್ಲಿ ಜನವರಿ 12 ರಿಂದ 18 ರವರೆಗೂ ಯುವ ಗ್ರಾಮ ಸಭೆ, ಯುವ ಸಂಸದ್, ಸ್ವಾಮಿ ವಿವೇಕಾನಂದರ ವಿಚಾರಧಾರೆ, ಉದ್ದೇಶಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಪ್ರತಿದಿನ ಒಂದೊಂದು ರೀತಿಯ ಕಾರ್ಯಕ್ರಮ, ಜಾಗೃತಿ ಅಭಿಯಾನ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇವತ್ತು ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಲಾಗಿದೆ. ಯುವ ಸಪ್ತಾಹವನ್ನು ಯಶಸ್ವಿಗೊಳಿಸಲಾಗುತ್ತದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಸರ್ಕಾರದಿಂದ ಸಾವಿರಾರು ಯೋಜನೆಗಳಿದ್ದು ಇದರಲ್ಲಿ 540 ಯೋಜನೆಗಳು ಯುವ ಸಮುದಾಯದ ಯೋಜನೆಗಳಿವೆ. ಆದರೆ ಅವುಗಳ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ಯುವ ಸಪ್ತಾಹ ಅಭಿಯಾನದ ಸಂದರ್ಭದಲ್ಲಿ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಇಲಾಖೆಗಳು ಕೈಜೋಡಿಸಿದರೆ ಯಶಸ್ವಿಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ