ಬೆಂಗಳೂರು : ಮಹಾಲಕ್ಷ್ಮಿ ಲೇ ಔಟ್ ವಿಧಾನ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 44 ರ ಮಾರಪ್ಪನ ಪಾಳ್ಯದ ಗಜಾನನ ಸ್ಲಂ 2 ರಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಆಶ್ರಯ ಯೋಜನೆಯಡಿ ಮೊದಲ ಹಂತದಲ್ಲಿ ಆರಂಭಿಸಿರುವ 50 ಮನೆಗಳ ಕಾಮಗಾರಿಯನ್ನು ಇದೇ ಜನವರಿ 30 ರೊಳಗೆ ಮುಗಿಸಬೇಕೆಂದು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಬಿಬಿಎಂಪಿ ಇಂಜಿನಿಯರ್ಗಳಿಗೆ ಸೂಚಿಸಿದರು.
ಇಂದು ಬೆಳಿಗ್ಗೆ ಗಜಾನನ ಸ್ಲಂ 2 ರಲ್ಲಿ ಸಾರ್ವಜನಿಕ ಸೌಲಭ್ಯ ಕುರಿತು ಪರಿವೀಕ್ಷಣೆ ನಡೆಸಿ ಈ ಸೂಚನೆ ನೀಡಿದ ಸಚಿವರು, ಮನೆಗಳ ನಿರ್ಮಾಣ ಕಾರ್ಯ ವಿಳಂಬವಾಗಿರುವುದಕ್ಕೆ ಇಂಜಿನಿಯರ್ಗಳ ವಿರುದ್ದ ಕಿಡಿಕಾರಿದರು.
ಮನೆಗಳ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಒಂದು ವೇಳೆ ಕಾಮಗಾರಿಯಲ್ಲಿ ಲೋಪ ಅಥವಾ ಕಳಪೆ ಕಾಮಗಾರಿ ಕಂಡು ಬಂದರೆ ನಿಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಂಜಿನಿಯರ್ಗಳಿಗೆ ಸಚಿವರು ಎಚ್ಚರಿಕೆ ನೀಡಿದರು.
ಇದೇ ವೇಳೆ ಶಂಕರ ಮಠ ಪಾರ್ಕ್ ನಿರ್ವಹಣೆ ಸರಿ ಇಲ್ಲದಿರುವುದನ್ನು ಗಮನಿಸಿದ ಸಚಿವರು, ಹಾಳಾಗಿರುವ ಗಿಡಗಳನ್ನು ತೆಗೆದು ಹೊಸ ಗಿಡಗಳನ್ನು ನೆಡಬೇಕು ಮತ್ತು ಅವುಗಳನ್ನು ಸರಿಯಾಗಿ ಪೋಷಣೆ ಮಾಡಬೇಕು. ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎಂ.ಮಹದೇವ್, ಪುಟ್ಟಣ್ಣ. ವೆಂಕಟೇಶಮೂರ್ತಿ ರೈಲ್ವೆ ನಾರಾಯಣ್ ವೆಂಕಟೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ