ಬೆಂಗಳೂರು : ರಾಜ್ಯದಲ್ಲಿ ಎನ್‌ಎಸ್ಎಸ್ ಸ್ವಯಂ ಸೇವಕರನ್ನು 10 ಲಕ್ಷಕ್ಕೇರಿಸುವ ಹೊಂದಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಇಂದು ವಿಕಾಸಸೌಧದಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಎನ್.ಎಸ್‌ಎಸ್ ಸಂಯೋಜಕರ ಜೊತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ರಾಜ್ಯದಲ್ಲಿ 2,78,200 ಸಾವಿರ ಸ್ವಯಂ ಸೇವಕರನ್ನು ನೋಂದಾಣಿ ಮಾಡಿಸುವ ಗುರಿ ನೀಡಲಾಗಿತ್ತು. ಆದರೆ, ಈಗಾಗಲೇ ರಾಜ್ಯದಲ್ಲಿ 5 ಲಕ್ಷ ಸ್ವಯಂ ಸೇವಕರು ನೋಂದಣಿ ಮಾಡಿಕೊಂಡಿದ್ದಾರೆ. ನೂತನ ಶಿಕ್ಷಣ ನೀತಿಯಲ್ಲಿ ಪ್ರತಿ ಕಾಲೇಜಿನಲ್ಲಿ ಎನ್‌ಎಸ್ಎಸ್ ಪಠ್ಯದ ಭಾಗವಾಗಿದೆ. ಹಾಗಾಗಿ, ಎನ್ ಎಸ್ ಎಸ್ ನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸ್ವಯಂಸೇವಕರನ್ನು 10 ಲಕ್ಷಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ.
ರಾಜ್ಯದಲ್ಲಿ NSS ಸ್ವಯಂ ಸೇವಕರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. NSS ಸ್ವಯಂ ಸೇವಕರು ಶ್ರಮದಾನದ ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿ, ಸೈಬರ್ ಸೇಫ್ ಕರ್ನಾಟಕ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. NSS ಸ್ವಯಂ ಸೇವಕರ ಸಂಖ್ಯೆ ಹೆಚ್ಚಿಸುವುದರಿಂದ ಹೆಚ್ಚಿನ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಲಿದೆ. 10 ಲಕ್ಷ NSS ಸ್ವಯಂ ಸೇವಕರು ನೋಂದಣಿಯಾದರೇ ದೇಶದಲ್ಲಿ ಕರ್ನಾಟಕ ಅತಿ ಹೆಚ್ಚು ಸ್ವಯಂ ಸೇವಕರು ಹೊಂದಿದ ಮೊದಲ ರಾಜ್ಯ ಎಂಬ ಖ್ಯಾತಿ ಪಡೆಯಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಶಿಕ್ಷಣದದಲ್ಲಿ ಕ್ರಾಂತಿ ಮಾಡಲು ಎನ್‌ಎಸ್‌ಎಸ್ ಕೂಡ ಮಹತ್ವದ ಪಾತ್ರವಹಿಸಲಿದೆ. ಪ್ರತಿಯೊಬ್ಬರು ಇದನ್ನು ಗಂಭೀರವಾಗಿ ತೆಗೆದುಕೊಂಡು ಯಶಸ್ವಿಗೊಳಿಸಬೇಕು. ಎಲ್ಲಾ ಕಾಲೇಜುಗಳು ಇದರಲ್ಲಿ ಪಾಲ್ಗೊಳ್ಳಬೇಕು. ಶಿಕ್ಷಣದಲ್ಲಿ ಮಾರ್ಕ್ಸ್‌ಗೆ ಸೀಮಿತವಾಗಿ ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಳ್ಳಬೇಕು. ಇದರ ಉದ್ದೇಶ ಸರಿಯಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ನೋಂದಣಿ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಪ್ರಾಜೆಕ್ಟ್‌ಗಳನ್ನು ಎನ್‌ಎಸ್ಎಸ್ ಮುಖಾಂತರವಾಗಿಯೇ ಮಾಡಲಿ. ಇದೊಂದು ಉತ್ತಮ ವೇದಿಕೆಯಾಗಿದ್ದು, ಎಲ್ಲರೂ ಸದ್ಬಳಕೆ ಮಾಡಿಕೊಳ್ಳಿ ಎಂದು ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಅವರು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ