ಬೆಂಗಳೂರು: ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಮತ್ತು ಎನ್‍ಎಸ್‍ಯುಐ ಕಾರ್ಯಕರ್ತರು ದಾಳಿ ಮಾಡಲು ಮುಂದಾದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಎನ್‍ಎಸ್‍ಯುಐ, ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿದೆ. ಕಾಂಗ್ರೆಸ್ ಹಾಗೂ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಮನೆಗೆ ದಾಳಿ ಮಾಡಿದಲ್ಲದೇ ಬೆಂಕಿ ಹಚ್ಚುವ ಪ್ರಯತ್ನಕ್ಕೆ ಮುಂದಾಗಿದ್ದರು. ಇದನ್ನು ಪೊಲೀಸರು ತಕ್ಷಣ ತಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಮೂಲಕ ಕಾಂಗ್ರೆಸ್‍ನವರ ಹತಾಶ ಮನೋಭಾವನೆ ಅನಾವರಣಗೊಂಡಿದೆ. ಸೈದ್ಧಾಂತಿಕವಾಗಿ ಜನರ ನಡುವೆ ನಿಂತು ತಮ್ಮ ವಿಚಾರ ಹೇಳುವಲ್ಲಿ ಕಾಂಗ್ರೆಸ್‍ನವರು ವಿಫಲರಾಗಿದ್ದಾರೆ. ಕಾಂಗ್ರೆಸ್ ಮುಖಂಡರು ಹಿಂದಿನಿಂದಲೂ ಗಲಾಟೆ ಮಾಡುವ ಪ್ರವೃತ್ತಿಯನ್ನೇ ತನ್ನದಾಗಿಸಿಕೊಂಡಿದ್ದಾರೆ. ಕೋಮುಗಲಭೆ, ಹಿಂಸೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಾಕುವುದು ಸಹಜ ಗುಣವಾಗಿದೆ. ಡಿ.ಜೆ ಹಳ್ಳಿ, ಕೆ.ಜೆ. ಹಳ್ಳಿ ಗಲಭೆಯಲ್ಲಿ ತಮ್ಮ ಪಕ್ಷದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಚ್ಚುವ ವಿಚಾರದಲ್ಲೂ ಕಾಂಗ್ರೆಸ್ ಮುಖಂಡರೇ ಕುಮ್ಮಕ್ಕು ನೀಡಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ದೇಶದಾದ್ಯಂತ ತಿರಸ್ಕರಿಸಿದ್ದಾರೆ. ಮುಂದಿನ ದಿನದಲ್ಲಿ ಕರ್ನಾಟಕದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ದುಷ್ಕೃತ್ಯದಲ್ಲಿ ಭಾಗವಹಿಸಿದ ಎಲ್ಲರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಮತ್ತು ರಾಜ್ಯದ ಗೃಹ ಸಚಿವರನ್ನು ವಿನಂತಿಸಿರುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ