Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121
75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ಎನ್. ರವಿಕುಮಾರ್ – I am BJP
May 6, 2025

75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ಎನ್. ರವಿಕುಮಾರ್

ಬೆಂಗಳೂರು: ಸ್ವಾತಂತ್ರ್ಯದ ಅಮೃತೋತ್ಸವ ವರ್ಷದ ಹಿನ್ನೆಲೆಯಲ್ಲಿ ಆಗಸ್ಟ್ 13ರ ಸೂರ್ಯೋದಯದಿಂದ 15ರ ಸೂರ್ಯಾಸ್ತದ ವರೆಗೆ ರಾಜ್ಯದ ಕನಿಷ್ಠ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸುವ ಗುರಿಯನ್ನು ಕರ್ನಾಟಕ ಬಿಜೆಪಿ ಹೊಂದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ ತಲಾ 35,000 ಮನೆಗಳ ಮೇಲೆ ಅಂದರೆ 75 ಲಕ್ಷಕ್ಕೂ ಹೆಚ್ಚು ಮನೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಯಲಿದೆ ಎಂದು ತಿಳಿಸಿದರು.

ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದಲ್ಲಿ 20 ಕೋಟಿಗಿಂತ ಹೆಚ್ಚು ಮನೆಗಳಲ್ಲಿ ಧ್ವಜಾರೋಹಣ ಮಾಡಲು ಕರೆ ಕೊಟ್ಟಿದ್ದಾರೆ. 75ನೇ ಸ್ವಾತಂತ್ರ್ಯದ ಹಬ್ಬವನ್ನು ಸಂಭ್ರಮದಿಂದ ಪ್ರಜಾಪ್ರಭುತ್ವದ ಅತ್ಯಂತ ದೊಡ್ಡ ರಾಷ್ಟ್ರೀಯ ಹಬ್ಬವಾಗಿ ಬೃಹತ್ ಪ್ರಮಾಣದಲ್ಲಿ ಆಚರಿಸಲು ಪ್ರಧಾನಿಯವರು ಕರೆ ಕೊಟ್ಟಿದ್ದಾರೆ ಎಂದರು.

ನಮ್ಮ 58 ಸಾವಿರ ಬೂತ್‍ಗಳು, 311 ಮಂಡಲಗಳು, 2500 ಶಕ್ತಿ ಕೇಂದ್ರಗಳು, ಮಹಾಶಕ್ತಿ ಕೇಂದ್ರಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್‍ಗಳಲ್ಲಿ ಸಭೆಗಳನ್ನು ಏರ್ಪಡಿಸಲಾಗುತ್ತಿದೆ. ಪೂರ್ವ ತಯಾರಿ ನಡೆದಿದೆ. ಪೂರ್ವ ಯೋಜನೆ, ಪೂರ್ಣ ಯೋಜನೆ ಯಶಸ್ವಿ ಕಾರ್ಯ ಯೋಜನೆ ಎಂಬ ಪರಿವಾರದ ಮಾತಿನಂತೆ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ತಿಳಿಸಿದರು.

ಆಗಸ್ಟ್ 4, 5, 6 ಈ ಮೂರು ದಿನಗಳಲ್ಲಿ ರಾಜ್ಯದ 58 ಸಾವಿರಕ್ಕೂ ಮಿಕ್ಕಿ ಬೂತ್‍ಗಳಲ್ಲಿ ಪಕ್ಷದ ಬೂತ್ ಸಮಿತಿಗಳ ಸಭೆ, ಹಾಗೆಯೇ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲ ಹಾಗೂ ಜಿಲ್ಲಾ ಮಟ್ಟಗಳಲ್ಲಿ ವಿವಿಧ ಮೋರ್ಚಾ-ಪ್ರಕೋಷ್ಠಗಳು, ಪಕ್ಷದ ಶಾಸಕರು ಹಾಗೂ ಸಂಸದರ ನೇತೃತ್ವದಲ್ಲಿ ಸಭೆಗಳನ್ನು ನಡೆಸಿ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಪೂರ್ವ ತಯಾರಿಯನ್ನು ಮಾಡಲಾಗುವುದು ಎಂದು ವಿವರಿಸಿದರು.

ಧ್ವಜದ ಜೊತೆ ಕೋಲನ್ನು ಹೊಂದಿಸಿಕೊಳ್ಳುವುದು, ಧ್ವಜವನ್ನು ಸರಿಯಾಗಿ ಹಾರಿಸಲು ತರಬೇತಿಯನ್ನು ಪ್ರತಿ ಮಂಡಲದಲ್ಲಿ ಏರ್ಪಡಿಸಲು ಸೂಚಿಸಲಾಗಿದೆ. ಧ್ವಜ ಗೌರವವನ್ನು ಕಾಪಾಡಲು ಎಲ್ಲ ಮಂಡಲಗಳಲ್ಲಿ ಧ್ವಜದ ಶ್ರೇಷ್ಠತೆ ಕುರಿತು ಕಾರ್ಯಕರ್ತರಿಗೆ ತಿಳಿಸಲಾಗುತ್ತಿದೆ ಎಂದರು.

75 ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ತ್ರಿವರ್ಣ ಧ್ವಜ ಯಾತ್ರೆ ನೆರವೇರಲಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. 175 ಕಡೆಗಳಲ್ಲಿ ಸೈಕಲ್ ಜಾಥಾ / ಬೈಕ್ ಜಾಥಾವನ್ನು ಯುವ ಮೋರ್ಚಾ ವತಿಯಿಂದ ನಡೆಸಲಾಗುವುದು. ರೈತ ಮೋರ್ಚಾ ವತಿಯಿಂದ 75 ಕಡೆಗಳಲ್ಲಿ ಅಲಂಕೃತ ಎತ್ತಿನ ಬಂಡಿಯಲ್ಲಿ ತ್ರಿವರ್ಣ ಧ್ವಜಯಾತ್ರೆಯು ನಡೆಯಲಿದೆ. ಮಹಿಳಾ ಮೋರ್ಚಾ ನೇತೃತ್ವದಲ್ಲಿ 175 ಕಡೆಗಳಲ್ಲಿ ಕಿತ್ತೂರ ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಒನಕೆ ಓಬವ್ವ ಮತ್ತಿತರರ ಭಾವಚಿತ್ರದೊಂದಿಗೆ ತ್ರಿವರ್ಣ ಧ್ವಜದ ಮಹಿಳಾ ಜಾಥಾ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ವಿಶೇಷವಾಗಿ ಬೆಳಗಾವಿ, ಚಿತ್ರದುರ್ಗ, ವಿದುರಾಶ್ವತ್ಥ, ಮಂಗಳೂರು, ಕಲಬುರ್ಗಿಯ ಸುರಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಕಾರ್ಯಕ್ರಮವನ್ನು ಸಂಭ್ರಮದಿಂದ ವಿಶಿಷ್ಟವಾಗಿ ಹಮ್ಮಿಕೊಳ್ಳಲಾಗುವುದು. ಅಲ್ಲಿ ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುವ ತಮಟೆ ಮತ್ತಿತರ ವಾದ್ಯಗಳ ನಾದದೊಂದಿಗೆ ಬೃಹತ್ ತ್ರಿವರ್ಣಧ್ವಜ ಯಾತ್ರೆ ನಡೆಸಲಿದ್ದೇವೆ ಎಂದು ವಿವರ ನೀಡಿದರು. ಈ ಸ್ಥಳಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಂಬಂಧಿಗಳ ಮನೆಗಳÀನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದರು.

ಖಾದಿ, ಕಾಟನ್, ಸ್ವದೇಶಿ ಉಡುಪುಗಳನ್ನು ಧರಿಸಿ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದು ಸ್ವದೇಶಿ ಚಳವಳಿ, ಆರ್ಥಿಕತೆಗೆ ಬಲ ತುಂಬಲಿದೆ ಎಂದು ನುಡಿದರು.

ಆಗಸ್ಟ್ 10, 11, 12ರಂದು ಪಥ ಸಂಚಲನ, ಪ್ರಭಾತ್ ಪೇರಿ, ಮ್ಯಾರಥಾನ್, ವಾಕಥಾನ್, ಸೈಕ್ಲೋಥಾನ್, ಭಾರತ್ ಮಾತಾ ಪೂಜನಾ ನಡೆಯಲಿದೆ. ನಗರ ಹಾಗೂ ಹಳ್ಳಿಗಳಲ್ಲಿನ ಸರ್ಕಲ್‍ಗಳ ಅಲಂಕಾರ, ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ, ಪುತ್ಥಳಿಗಳ ಸ್ವಚ್ಛತೆ ಹಾಗೂ ಮಾಲಾರ್ಪಣೆ ನಡೆಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಸರಕಾರ “ಅಮೃತ ಭಾರತಿಗೆ ಕನ್ನಡದಾರತಿ” ಅಡಿಯಲ್ಲಿ ಬಿಡುಗಡೆಗೊಳಿಸಿದ ಸ್ವಾತಂತ್ರ್ಯದ ಹೋರಾಟ ಕುರಿತ 75 ಪುಸ್ತಕಗಳನ್ನು ಶಿಕ್ಷಣ ಸಂಸ್ಥೆಗಳು, ಜನರಿಗೆ ತಲುಪಿಸಲು ಯೋಜಿಸಲಾಗಿದೆ. ಪುಸ್ತಕ ಬಿಡುಗಡೆ ಶ್ಲಾಘನೀಯ ಯೋಜನೆ ಎಂದು ಮೆಚ್ಚುಗೆ ಸೂಚಿಸಿದರು.

ಇಂದಿನಿಂದ ಯುವಕ ಸಂಘಗಳು, ಮಹಿಳಾ ಮಂಡಳಿಗಳು ಹಾಗೂ ಸ್ವಸಹಾಯ ಗುಂಪುಗಳು, ಶಿಕ್ಷಣ ಸಂಸ್ಥೆಗಳು (ಶಾಲಾ-ಕಾಲೇಜುಗಳು), ಗಣಪತಿ ಉತ್ಸವ ಸಮಿತಿಗಳು, ಧಾರ್ಮಿಕ ಸಮಿತಿಗಳು, ಕಾರ್ಮಿಕ ಸಂಘ ಸಂಸ್ಥೆಗಳು, ಬಡಾವಣೆ ನಿವಾಸಿ ಸಂಘಗಳು, ಅಪಾರ್ಟ್‍ಮೆಂಟ್, ಫ್ಲಾಟ್ ಸಂಘಗಳನ್ನು ಸಂಪರ್ಕಿಸಿ ಧ್ವಜಾರೋಹಣ ನೆರವೇರಿಸಲು ಮನವಿ ಮಾಡಲಾಗುವುದು. ಇದು ಗಿನ್ನಿಸ್ ದಾಖಲೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಂದಿನ 25 ವರ್ಷಗಳಲ್ಲಿ ನಮ್ಮ ದೇಶದ ಮುನ್ನಡೆಯುವಿಕೆ ಹಾಗೂ ಪ್ರಪಂಚದಲ್ಲಿ ಭಾರತ ಮೊದಲು ಎಂಬ ಸ್ಥಾನ ಪಡೆಯುವ ಕುರಿತಂತೆ ತಿಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಮತ್ತು ಜಿಲ್ಲಾ ಪ್ರಭಾರಿ ವಿಕಾಸ್ ಕುಮಾರ್ ಪಿ. ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *