ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ವಿಧ್ವಂಸಕ ಕೃತ್ಯಗಳಿಗೆ ಸಂಚುಗಳನ್ನು ರೂಪಿಸಿ, ಸಾರ್ವಜನಿಕರ ಶಾಂತಿಗೆ ಭಂಗ, ತರುತ್ತಿದ್ದ ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಸಹಕಾರ ಸಚಿವರಾದ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.
ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಈ ಸಂಘಟನೆಗೆ ನಿಷೇಧ ಹೇರಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು.
ಈ ಸಂಘಟನೆಗಳ ನಿಷೇಧದಿಂದ ಸಮಾಜಘಾತುಕ ಶಕ್ತಿಗಳಿಗೆ ದೇಶದಲ್ಲಿ ಉಳಿಗಾಲ ಇರುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನದಂದೇ ಕೈಗೊಂಡಿರುವ ಈ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ