ಕಲಬುರಗಿ : ಕಲಬುರಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಕಡಗಂಚಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಮಣ್ಣನವರ ಪ್ರತಿಮೆಯನ್ನು ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜ ಅವರು ಪುಷ್ಪ ನಮನ ಸಲ್ಲಿಸಿ ಅನಾವರಣ ಮಾಡಿದರು.
ಇದಕ್ಕೂ ಮುನ್ನ ಕಡಗಂಚಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೃಹತ್ ಬೈಕ್ ಜಾಥಾಕ್ಕೆ ಚಾಲನೆ ನೀಡಿದರು.
ನವದೆಹಲಿಯ ಜೈ ಭಾರತ ಮಾತ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಹವಾ ಮಲ್ಲಿನಾಥ ಮಹಾರಾಜ ದಿವ್ಯ ಸಾನಿಧ್ಯ ವಹಿಸಿದ್ದರು.
ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅಳಂದ ಶಾಸಕರಾದ ಶ್ರೀ ಸುಭಾಷ್ ಗುತ್ತೇದಾರ್ ಪೂಜೆ ಸಲ್ಲಿಸಿದರು. ಧ್ವಜಾರೋಹಣವನ್ನು ಕಲಬುರಗಿ ಗ್ರಾಮೀಣ ಶಾಸಕರಾದ ಶ್ರೀ ಬಸವರಾಜ ಮತ್ತಿಮೂಡ ನೆರವೇರಿಸಿದರು.
ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಧರ್ಮಣ ಧೊಡಮನಿ, ಕಲಬುರಗಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಶ್ರೀ ಗುರುನಾಥ ಎನ್ ಪೂಜಾರಿ ಸೇರಿದಂತೆ ಸಮಾಜದ ಅನೇಕ ಹಿರಿಯ ಮುಖಂಡರು, ಕಡಗಂಚಿ ಗ್ರಾಮಸ್ಥರು ಸಮಾರಂಭದಲ್ಲಿ ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ