ಬೆಂಗಳೂರು: ಕರ್ನಾಟಕದಲ್ಲಿ ಸರ್ವರಿಗೂ ನ್ಯಾಯ ಮತ್ತು ಅಭಿವೃದ್ಧಿ ಪರ್ವವು ಬಿಜೆಪಿ ಸರಕಾರದ ಮೂಲಕ ಈಡೇರುತ್ತಿದೆ ಎಂದು ರಾಜ್ಯದ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದರು.
ಬೀದರ್ ಜಿಲ್ಲೆಯ ಔರಾದ್ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪ್ರಮುಖ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ಅವರು ಕೈಗೊಂಡಿದ್ದಾರೆ. ಸುಮಾರು 4 ದಶಕಗಳಲ್ಲಿ ಈ ಬೇಡಿಕೆ ಇತ್ತು. ಅದನ್ನು ಬೊಮ್ಮಾಯಿಯವರು ಈಡೇರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ತಿಳಿಸಿದರು.
ರಾಜ್ಯವು ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಅನೇಕ ಯೋಜನೆಗಳನ್ನು ಬೊಮ್ಮಾಯಿಯವರು ಕೈಗೊಂಡಿದ್ದಾರೆ. ಮಹಿಳಾ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಗರಿಷ್ಠ ಅನುದಾನವನ್ನು ಔರಾದ್‍ಗೆ ನೀಡಿವೆ ಎಂದು ಮೆಚ್ಚುಗೆ ಸೂಚಿಸಿದರು. ಪ್ರತಿ ಮನೆಗೆ ನಳ್ಳಿ ನೀರು ಒದಗಿಸಲು ನಮ್ಮ ಸರಕಾರ ಬದ್ಧವಿದೆ ಎಂದರು.
ಕಿಸಾನ್ ಸಮ್ಮಾನ್ ಸೇರಿ ಅನೇಕ ಯೋಜನೆಗಳ ಮೂಲಕ ಕೇಂದ್ರ ಸರಕಾರವು ದೇಶದ ಎಲ್ಲ ಸಮುದಾಯದವರ ವಿಕಾಸಕ್ಕೆ ಶ್ರಮಿಸಿದೆ. ರಾಜ್ಯ ಸರಕಾರವೂ ಈ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು. ಕಾರಂಜಾದಿಂದ ಔರಾದ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿ ಕೊಡಿ ಎಂದು ಅವರು ಮನವಿ ಮಾಡಿದರು. ಪುರಸಭೆಯನ್ನಾಗಿ ಪ್ರಕಟಿಸಿ ಎಂದು ವಿನಂತಿಸಿದರು. ಮರಾಠಾ ಮೀಸಲಾತಿಯನ್ನು 2 ಎಗೆ ಬದಲಿಸಿ ಎಂದು ಮನವಿ ಮಾಡಿದರು.
ಗೋಶಾಲೆಗಳ ಸಂಬಂಧ 100 ಕೋಟಿ ಅನುದಾನ ನೀಡಲಾಗಿದೆ ಎಂದ ಅವರು ತಮ್ಮ ಸಚಿವಾಲಯದ ಮೂಲಕ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ