ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಗರಿಷ್ಠ ಶಾಸಕರÀನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ 150 ಬಿಜೆಪಿ ಶಾಸಕರು ಗೆದ್ದು ಅಧಿಕಾರ ಪಡೆಯುವಂತಾಗಲು ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ರಾಜ್ಯದ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.
ಬೀದರ್ ಜಿಲ್ಲೆಯ ಔರಾದ್ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಗೋವುಗಳ ಸಂರಕ್ಷಣೆಗಾಗಿ 30 ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣದ ಕೆಲಸ ಮಾಡಿದ್ದಾರೆ. ಇದು ಅತ್ಯಂತ ಶ್ಲಾಘನಾರ್ಹ ಎಂದರು. ಗೋವುಗಳಿಗಾಗಿ ಮೊಬೈಲ್ ಕ್ಲಿನಿಕ್ ತೆರೆದಿದ್ದಾರೆ. ಇದು ಮೆಚ್ಚತಕ್ಕ ಕೆಲಸ ಎಂದರು.
ವಿಜಯ ಸಂಕಲ್ಪಕ್ಕಾಗಿ ಬಿಜೆಪಿ ಯಾತ್ರೆಗಳನ್ನು ನಡೆಸುತ್ತಿದೆ. ಇವತ್ತು ಬೀದರ್ ಜಿಲ್ಲೆಯ ಬಸವಣ್ಣನ ಜನ್ಮಭೂಮಿ- ಕಲ್ಯಾಣ ಭೂಮಿಯಲ್ಲಿ ಪ್ರವಾಸ ಮುಂದುವರಿದಿದೆ. 1.20 ಲಕ್ಷ ಲಂಬಾಣಿ ಹಟ್ಟಿಗಳು, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮವನ್ನಾಗಿ ಸಿಎಂ ಮತ್ತು ಕಂದಾಯ ಸಚಿವರು ಘೋಷಿಸಿದ್ದಾರೆ. ಇದು ಅಭಿವೃದ್ಧಿಗೆ ಪೂರಕ ಎಂದು ನುಡಿದರು.
ಕಲ್ಯಾಣ ಕರ್ನಾಟಕದಲ್ಲಿ 1600 ಹೊಸ ಬಸ್ ಖರೀದಿಸಿ ಓಡಾಟಕ್ಕೆ ಅವಕಾಶ ಮಾಡಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ನಮ್ಮ ಸಿಎಂ ಬಸವರಾಜ ಬೊಮ್ಮಾಯಿಯವರು ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನವನ್ನು ಹೆಚ್ಚಿಸಿ ನೆರವಾಗಿದ್ದಾರೆ ಎಂದು ಪ್ರಶಂಸಿಸಿದರು.
ಬಿಜೆಪಿಯ ಕೇಂದ್ರ- ರಾಜ್ಯ ಸರಕಾರಗಳು ದೇಶದ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಾಂಗ್ರೆಸ್ ಸರಕಾರವು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕನಿಷ್ಠ ಅನುದಾನವನ್ನು ನೀಡಿದ್ದರೆ, ನಮ್ಮ ಸರಕಾರವು ಈ ಅನುದಾನವನ್ನು ದ್ವಿಗುಣಗೊಳಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.
ರಾಜ್ಯದಲ್ಲಿ ಮತ್ತೆ ಗೆಲುವಿನ ವಿಶ್ವಾಸ- ಬೈರತಿ ಬಸವರಾಜ್
ಕೇಂದ್ರದ ನರೇಂದ್ರ ಮೋದಿಜಿ ಅವರ ನೇತೃತ್ವದ ಬಿಜೆಪಿ ಸರಕಾರ ಮತ್ತು ರಾಜ್ಯದ ಬೊಮ್ಮಾಯಿಯವರ ಸರಕಾರದಿಂದ ದೇಶ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗಿದೆ. ಇದನ್ನು ಗಮನಿಸಿ ಜನತೆ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ರಾಜ್ಯದ ಸಚಿವ ಬೈರತಿ ಬಸವರಾಜ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಸವಣ್ಣನ ಪುಣ್ಯಭೂಮಿಯಿಂದ ಹೊರಟ ವಿಜಯ ಯಾತ್ರೆ: ಶಂಕರ ಪಾಟೀಲ ಮುನೇನಕೊಪ್ಪ
ರಾಜ್ಯದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಮಾತನಾಡಿ, ಇದು ಜನಸಂಕಲ್ಪ ಯಾತ್ರೆಯಾಗಿಲ್ಲ; ಬಸವಣ್ಣನ ಪುಣ್ಯಭೂಮಿಯಿಂದ ಹೊರಟ ಚಾಮರಾಜನಗರದ ವರೆಗೆ ನಡೆಯುವ ವಿಜಯ ಯಾತ್ರೆಯಂತಿದೆ ಎಂದು ತಿಳಿಸಿದರು. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಅನುಭವ ಮಂಟಪದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದಾರೆ ಎಂದು ವಿವರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
You may also like
-
ರಾಜ್ಯ ಹೈಕೋರ್ಟ್ ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ
-
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ – ವಿಜಯೇಂದ್ರ
-
ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಬಜೆಟ್ : ಮೋಹನ್ ವಿಶ್ವ
-
ಹಾಪ್ ಕಾಮ್ಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
-
ಕಾಂಗ್ರೆಸ್ ಸರಕಾರದ ಹಗೆತನದ ಪರಮಾವಧಿಯ ರಾಜಕಾರಣಕ್ಕೆ ಬಿಜೆಪಿ ಆಕ್ಷೇಪ