og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಹೈಕೋರ್ಟಿನಲ್ಲಿ ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿದ್ದರು. ಆ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಅದರ ಅರ್ಥ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ ಎಂದು ವಿವರಿಸಿದರು.
ಸಿದ್ದರಾಮಯ್ಯನವರನ್ನು ಆರೋಪಮುಕ್ತರನ್ನಾಗಿ ಹೈಕೋರ್ಟ್ ಮಾಡಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪನ್ನು ರಾಜ್ಯ ಹೈಕೋರ್ಟ್ ಹೇಳಿದೆ ಎಂದು ತಿಳಿಸಿದರು. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ ಕುರಿತ ಬಿಜೆಪಿ ಹೋರಾಟ ಮತ್ತು ಪಾದಯಾತ್ರೆಗೆ ಹಿನ್ನಡೆ ಆಗಿಲ್ಲ ಎಂದು ಅವರು ನುಡಿದರು.
ಲೋಕಾಯುಕ್ತ ಮತ್ತು ಇ.ಡಿ. ತನಿಖೆ ನಡೆಯುತ್ತಿದೆ. ಮುಂದೇನಾಗುತ್ತದೆ ಕಾದು ನೋಡೋಣ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಿಎಂ ಕುಟುಂಬ ನಿರಪರಾಧಿಗಳೆಂದು ಹೇಳಿದೆಯೇ ಎಂದೂ ಅವರು ಪ್ರಶ್ನಿಸಿದರು. ಮುಡಾ ಹಗರಣದಲ್ಲಿ ಸಿಎಂ ಕುಟುಂಬ ಭಾಗಿ ಆಗಿರುವುದು ಮತ್ತು ಸಾವಿರಾರು ಕೋಟಿ ರೂಪಾಯಿ ಲೂಟಿ ಆದುದನ್ನು ತಿಳಿಸಿ ನಾವು ಹೋರಾಟ ಮಾಡಿದ್ದೆವು. ನಮ್ಮ ಆರೋಪಕ್ಕೆ ಇವತ್ತಿಗೂ ನಾವು ಬದ್ಧರಾಗಿದ್ದೇವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಲೋಕಾಯುಕ್ತ ತನಿಖೆ, ಅವರ ವರದಿ ಬಂದ ಬಳಿಕ ನಾವು ಮಾತನಾಡುತ್ತೇವೆ ಎಂದ ಅವರು, ಇವತ್ತಿನ ಹೈಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿಗಳು, ಅವರ ಕುಟುಂಬ ನಿರಪರಾಧಿ ಎಂದು ಹೇಳಿಲ್ಲ ಎಂದು ಪುನರುಚ್ಚರಿಸಿದರು. ಲೋಕಾಯುಕ್ತದ ವರದಿಯನ್ನು ಕಾದು ನೋಡೋಣ ಎಂದು ಹೇಳಿದರು.
ಯಡಿಯೂರಪ್ಪ ಅವರ ವಿರುದ್ಧ ಇದ್ದ ಪೋಕ್ಸೊ ಕೇಸಿನಲ್ಲಿ ಕೆಳಹಂತದ ಕೋರ್ಟಿನ ಸಮನ್ಸ್ ಅನ್ನು ರಾಜ್ಯ ಹೈಕೋರ್ಟ್ ಬದಿಗಿರಿಸಿದೆ. ರಾಜ್ಯ ಹೈಕೋರ್ಟ್‍ನಲ್ಲಿ ಈ ಕುರಿತು ಬಹಳ ದಿನ ವಾದವಿವಾದ ನಡೆದಿದೆ. ಅದರ ಆಧಾರದಲ್ಲಿ ನಮ್ಮ ಅರ್ಜಿಯನ್ನೂ ಪುರಸ್ಕರಿಸಿ, ಕೆಳಹಂತದ ಕೋರ್ಟಿನ ಸಮನ್ಸ್ ರದ್ದು ಮಾಡಿ ಮರು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
]]>ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರಕಾರವು ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆತನಕ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಿಗ್ಗೆ 10ರಿಂದ 5ಗಂಟೆವರೆಗೆ ಹೋಗಿ ಎಂಬ ಮಾತನ್ನು ರಾಜ್ಯ ಸರಕಾರ ಹೇಳುತ್ತಿರುವುದು ದುರ್ದೈವ ಎಂದು ಟೀಕಿಸಿದರು. ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ; ಆಲ್ ಈಸ್ ವೆಲ್ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವ್ಯೂಹಕ್ಕೆ ಬಡವರು ಸಿಲುಕಿದ್ದಾರೆ. ರಾಜ್ಯ ಸರಕಾರವು ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ- ರೈತರ ರಕ್ಷಣೆಗೆ ಧಾವಿಸಲು ಅವರು ಆಗ್ರಹಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಅನುದಾನ ಇಲ್ಲದೇ ಶಾಸಕರು ಅಭಿವೃದ್ಧಿರಹಿತ ಕ್ಷೇತ್ರದೊಂದಿಗೆ ಕೈಕಟ್ಟಿ ಕುಳಿತಿರುವ ದಾರುಣ ಪರಿಸ್ಥಿತಿ ಇದೆ. ರೈತರ ಗೋಳು ಸರಕಾರ ಕೇಳುತ್ತಿಲ್ಲ; ಹಗಲು ದರೋಡೆ, ಕೊಲೆ, ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ. ಇದಲ್ಲದೇ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಚುನಾಯಿತ ಸರಕಾರ, ಮುಖ್ಯಮಂತ್ರಿಗಳು ಇದ್ದಾರಾ ಎಂದು ಜನರು ಪ್ರಶ್ನಿಸುವಂತಾಗಿದೆ. ಸರಕಾರ ರಾಜ್ಯದ ಅಭಿವೃದ್ಧಿ ಸೇರಿ ಎಲ್ಲವನ್ನೂ ಮರೆತಿದೆ. ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿದೆ ಎಂದು ಆಕ್ಷೇಪಿಸಿದರು.
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯ ಕುರಿತು ಬಹಳಷ್ಟು ಚರ್ಚೆ ಆಗುತ್ತಿದೆ. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ವಸೂಲಾತಿ ದೌರ್ಜನ್ಯದಿಂದ ಭಯಭೀತರಾಗಿ ಹಣ ಮರುಪಾವತಿ ಮಾಡಲು ಸಾಧ್ಯವಾಗದೆ ಪ್ರಾಣ ಕಳಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ದೆಹಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ವಿಶ್ವಾಸ
ದೆಹಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಏರುವ ವಿಶ್ವಾಸವಿದೆ. ದೆಹಲಿ ರಾಜ್ಯದ ಚುನಾವಣೆ ನಿನ್ನೆ ನಡೆದಿದೆ. 9-10 ಸಮೀಕ್ಷೆಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದಂತೆ 27 ವರ್ಷಗಳ ನಂತರ ದೆಹಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಗ್ಯಾರಂಟಿಗಳ ಭ್ರಮೆಯಲ್ಲಿದ್ದ ಆಮ್ ಆದ್ಮಿ ಪಾರ್ಟಿಗೆ ತಕ್ಕ ಪಾಠವನ್ನು ಆ ರಾಜ್ಯದ ಜನರು ಕಲಿಸುತ್ತಾರೆ. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ, ರಾಜ್ಯದ ಚುಕ್ಕಾಣಿ ಹಿಡಿದ ಆಮ್ ಆದ್ಮಿ ಪಾರ್ಟಿಗೆ ತಕ್ಕ ಉತ್ತರವನ್ನು ನಿನ್ನೆ ನೀಡಿದ್ದಾರೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗಿದೆ ಎಂದು ಹೇಳಿದರು.
ಕೇಂದ್ರ ಸರಕಾರದ ಅತ್ಯುತ್ತಮ ಬಜೆಟ್
ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ಕನಸು ನನಸಾಗುವ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾದ, ಬಡವರು, ರೈತರು, ಯುವಕರು, ಮಹಿಳೆಯರ ಪರವಾಗಿ ಒಂದು ಅತ್ಯುತ್ತಮ ಬಜೆಟ್ ಅನ್ನು ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
12 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟುವಂತಿಲ್ಲ ಎಂಬ ನಿರ್ಧಾರದಿಂದ ಮಧ್ಯಮ ವರ್ಗದವರಿಗೆ ಬಹಳಷ್ಟು ಅನುಕೂಲವಾಗಿದೆ; ಜನರ ಬಹುವರ್ಷಗಳ ನಿರೀಕ್ಷೆಗೆ ತಕ್ಕಂತೆ ಬಜೆಟ್ ಮಂಡಿಸಿದ್ದು, ಪ್ರತಿಯೊಬ್ಬರೂ ಸಂತಸ ಪಡುವ ವಿಚಾರ ಎಂದರು.
ಸಿದ್ದರಾಮಯ್ಯನವರಿಂದ ಕೇಂದ್ರದ ಬಜೆಟ್ ಬಗ್ಗೆ ಒಳ್ಳೆಯ ಮಾತು ಕೇಳಲು ಸಾಧ್ಯವಿಲ್ಲ; ಸಹಜವಾಗಿ ಅವರು ಟೀಕೆಗಳನ್ನು ಮಾಡಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ಪ್ರತಿಯೊಂದು ರಾಜ್ಯದಲ್ಲೂ ಸಹ ಈ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು ನುಡಿದರು.
ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಶಾಸಕ ಶೈಲೇಂದ್ರ ಬೆಲ್ದಾಳೆ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್ ಅವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
]]>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು 8ನೇ ಕೇಂದ್ರ ಬಜೆಟ್ ಮಂಡಿಸಿದರು. ಸರ್ವಸಾಮಾನ್ಯವಾಗಿ ಕೃಷಿ, ಎಂಎಸ್‍ಎಂಇ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಉತ್ಪಾದನಾ ಕ್ಷೇತ್ರ, ಸಂಶೋಧನೆ, ರಫ್ತು, ಎಫ್‍ಡಿಐ ಸೇರಿ ಪ್ರತಿಯೊಂದು ಕ್ಷೇತ್ರಕ್ಕೂ ಎಲ್ಲ ರಾಜ್ಯಗಳಿಗೂ ಅನುದಾನ ಕೊಡಲಾಗಿದೆ ಎಂದು ವಿವರಿಸಿದರು.
ಕೃಷಿಗೆ 1,37,757 ಕೋಟಿ ಮೊತ್ತ ಮೀಸಲಿಟ್ಟಿದ್ದು, ಕರ್ನಾಟಕವೂ ಸೇರಿ ದೇಶದ 7.7 ಕೋಟಿ ಜನ ರೈತರಿಗೆ ಕಿಸಾನ್ ಕಾರ್ಡಿನಿಂದ ಪ್ರಯೋಜನ ಸಿಗಲಿದೆ. ಇದರ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು. ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆಯಡಿ ಎಲ್ಲ ರಾಜ್ಯಗಳ ಜೊತೆ ಭಾಗೀದಾರಿಕೆಯಲ್ಲಿ 100 ಜಿಲ್ಲೆಗಳಲ್ಲಿ 2 ಕೋಟಿ ರೈತರಿಗೆ ಅನುದಾನ ಸಿಗಲಿದೆ ಎಂದರು.
ಸಾಲ ಪಡೆಯುವವರಿಗೆ ನೆರವಾಗುವ ಸಿಬಿಲ್ ಸ್ಕೋರ್ ಮಾದರಿಯಲ್ಲಿ ಗ್ರಾಮೀಣ ಕ್ರೆಡಿಟ್ ಸ್ಕೋರ್ ಆರಂಭಿಸಿದ್ದು, ಸ್ವಸಹಾಯ ಸಂಘÀಗಳಿಗೆ ಪ್ರಯೋಜನ ಆಗುವಂತೆ ಮಾಡಿದ್ದಾರೆ. ಎಂಎಸ್‍ಎಂಇ ಮಿತಿಯನ್ನು 1 ಕೋಟಿಯಿಂದ 2.5 ಕೋಟಿಗೆ ಹೆಚ್ಚಿಸಿ ಮೈಕ್ರೋ ವ್ಯಾಪ್ತಿಯಡಿ ತಂದಿದ್ದಾರೆ. 25 ಕೋಟಿ ವ್ಯವಹಾರ ಇರುವವರನ್ನು ಸಣ್ಣ ಉದ್ಯಮವಾಗಿ, 125 ಕೋಟಿ ವ್ಯವಹಾರ ಇರುವವರನ್ನು ಮಧ್ಯಮ ಗಾತ್ರದ ಉದ್ಯಮ ಎಂದು ಪರಿಗಣಿಸಲು ಮುಂದಾಗಿದ್ದಾರೆ. ಸಾಲದ ಮಿತಿಯನ್ನೂ ಹೆಚ್ಚಿಸಿದ್ದಾರೆ. ಇದರಿಂದ ಗರಿಷ್ಠ ಪ್ರಯೋಜನ ಸಿಗಲಿದೆ ಎಂದು ತಿಳಿಸಿದರು.
ಮೊದಲ ಬಾರಿ ಉದ್ಯಮಿಗಳಾಗುವ ಅದರಲ್ಲೂ ವಿಶೇóಷವಾಗಿ 5 ಲಕ್ಷ ಮಹಿಳೆಯರಿಗೆ, ಅದರಲ್ಲೂ ಎಸ್‍ಸಿಎಸ್‍ಟಿ ಮಹಿಳೆಯರಿಗೆ 2 ಕೋಟಿ ರೂ. ಸಾಲ ಮುಂದಿನ 5 ವರ್ಷ ಲಭಿಸಲಿದೆ. ಶಿಕ್ಷಣ ಕ್ಷೇತ್ರದಡಿ ಈ ವರ್ಷ 10 ಸಾವಿರಕ್ಕಿಂತ ಹೆಚ್ಚು ವೈದ್ಯಕೀಯ ಸೀಟುಗಳು ಸೇರ್ಪಡೆ ಆಗಲಿವೆ. 75 ಸಾವಿರ ಸೀಟುಗಳು ಮುಂದಿನ 5 ವರ್ಷಗಳಲ್ಲಿ ಸೇರಲಿವೆ ಎಂದು ಹೇಳಿದರು.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೆಂಟರ್ ಸ್ಥಾಪನೆಗೆ 500 ಕೋಟಿ ಮೀಸಲಿಟ್ಟಿದ್ದಾರೆ. ಕರ್ನಾಟಕವೂ ಸೇರಿ ದೇಶಾದ್ಯಂತ ಪ್ರತಿಯೊಂದು ಶಾಲೆಗೂ ಬ್ರಾಡ್‍ಬ್ಯಾಂಡ್ ಸಂಪರ್ಕ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೋಂ ಸ್ಟೇಗಳನ್ನು ಮುದ್ರಾ ಯೋಜನೆಯಡಿ ತಂದು ಮುದ್ರಾ ಸಾಲ ಕೊಡಲಿದ್ದಾರೆ. ಉಡಾಣ್ ಯೋಜನೆಯಡಿ 120 ಕಡೆ ವಿಮಾನನಿಲ್ದಾಣ (ಏರ್ ಫೆಸಿಲಿಟಿ) ಸಿಗಲಿದೆ ಎಂದು ಮಾಹಿತಿ ನೀಡಿದರು. 4 ಕೋಟಿಗಿಂತ ಹೆಚ್ಚು ಜನರಿಗೆ ಪ್ರಯೋಜನ ಲಭಿಸಲಿದೆ ಎಂದರು.
50 ಪ್ರವಾಸೋದ್ಯಮ ಕೇಂದ್ರಗಳ ಅಭಿವೃದ್ಧಿ ನಡೆಯಲಿದೆ. ಅರ್ಬನ್ ಚಾಲೆಂಜ್ ಫಂಡಿನಡಿ 1 ಲಕ್ಷ ಕೋಟಿ ಬಜೆಟ್ ಮೊತ್ತ ಇದೆ. 2025-26ಕ್ಕೆ 10 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಸ್ವಾಮಿ ಫಂಡಿನಡಿ 1 ಲಕ್ಷ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದೆ ಎಂದರು.
ಸಂಶೋಧನೆ, ಇನೊವೇಶನ್, ತಂತ್ರಜ್ಞಾನ ಕ್ಷೇತ್ರಕ್ಕೆ ಪ್ರಧಾನಮಂತ್ರಿ ರಿಸರ್ಚ್ ಫೆಲೋಶಿಪ್ ಯೋಜನೆಯಡಿ 10 ಸಾವಿರ ಮಕ್ಕಳಿಗೆ ಐಐಟಿ, ಐಐಎಸ್‍ಸಿನಡಿ ಸಂಶೋಧನೆಗೆ ಅವಕಾಶ ಕೊಡುತ್ತಿದ್ದಾರೆ. 20 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ ಎಂದು ನುಡಿದರು.
ಕೃಷಿ ವಿಕಾಸ್ ಯೋಜನೆಗೆ 8,500 ಕೋಟಿ, ಸಮಗ್ರ ಶಿಕ್ಷಾ ಯೋಜನೆಗೆ 41,250 ಕೋಟಿ, ಮತ್ಸ್ಯ ಸಂಪದಕ್ಕೆ 2,465 ಕೋಟಿ, ಆಯುಷ್ಮಾನ್ ಭಾರತ್- 4200 ಕೋಟಿ, ಆವಾಸ್ ಯೋಜನೆಗೆ 19,794 ಕೋಟಿ, ವಿಶೇóಷವಾಗಿ ರೈಲ್ವೆಸ್‍ಗೆ ಹೊಸ ಲೈನ್‍ಗಳಿಗೆ 32,235 ಕೋಟಿ ನೀಡಿದ್ದು, ಅದರಲ್ಲಿ ಕರ್ನಾಟಕಕ್ಕೆ 7564 ಕೋಟಿ ಸಿಕ್ಕಿದೆ ಎಂದು ತಿಳಿಸಿದರು.
ಹೊಸ ಉದ್ಯೋಗ ಸೃಷ್ಟಿಗೆ 20 ಸಾವಿರ ಕೋಟಿ ಮೀಸಲಿಟ್ಟಿದ್ದು, ಇದರಿಂದ ಯುವಜನರಿಗೆ ಉದ್ಯೋಗ ಲಭಿಸಲಿದೆ ಎಂದರು. ರಾಜ್ಯ ವಕ್ತಾರ ಮೋಹನ್ ವಿಶ್ವ ಅವರು ಮಾತನಾಡಿ, ತೆರಿಗೆ ಮಿತಿ 7 ಲಕ್ಷದಿಂದ 12 ಲಕ್ಷಕ್ಕೆ ಹೆಚ್ಚಳವಾಗಿದ್ದು, ಅದರ ಬಗ್ಗೆಯೂ ಕಾಂಗ್ರೆಸ್ ಪಕ್ಷವು ಅಪಪ್ರಚಾರ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸುಳ್ಳನ್ನು ನಿಜ ಮಾಡುವ ಕೆಲಸಕ್ಕೆ ಕಾಂಗ್ರೆಸ್ಸಿಗರು ಮುಂದಾಗಿದ್ದಾರೆ. ವೇತನ ಮೊತ್ತ 12.75 ಲಕ್ಷ ಇದ್ದರೆ ಒಂದು ರೂಪಾಯಿ ತೆರಿಗೆ ಕಟ್ಟಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯನವರ ಭಾಷೆಯಲ್ಲಿ ಹೇಳುವುದಾದರೆ ಕಾಕಾ ಪಾಟೀಲ- ಮಹದೇವಪ್ಪರಿಗೆ 12.75 ಲಕ್ಷ ಇದ್ದಲ್ಲಿ ತೆರಿಗೆ ಕಟ್ಟಬೇಕಾಗಿಲ್ಲ ಎಂದರು. ಈ ಮಿತಿಯಿಂದ ಹೆಚ್ಚಾದರೆ ಮಾತ್ರ ಸ್ಲ್ಯಾಬ್ ಜಾರಿಗೊಳ್ಳಲಿದೆ ಎಂದು ತಿಳಿಸಿದರು. 1 ಕೋಟಿ ಜನರು ತೆರಿಗೆ ವ್ಯಾಪ್ತಿಯಿಂದ ಹೊರಕ್ಕೆ ಬರಲಿದ್ದಾರೆ ಎಂದರು. ಇದು ತೆರಿಗೆ ವಿಷಯದಲ್ಲಿ ಕ್ರಾಂತಿ ಎಂದು ತಿಳಿಸಿದರು.
2014ರಲ್ಲಿ ಅಂದರೆ 10 ವರ್ಷದ ಹಿಂದೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತಿಂಗಳಿಗೆ 17 ಸಾವಿರ ವೇತನವಿದ್ದರೆ ಆದಾಯ ತೆರಿಗೆ ಸಂಗ್ರಹಿಸಲಾಗುತ್ತಿತ್ತು. ಇವತ್ತು ತಿಂಗಳಿಗೆ 1.06 ಲಕ್ಷ ವೇತನ ಬಂದರೂ ಟಿಡಿಎಸ್ ಆಗುವುದಿಲ್ಲ ಎಂದು ಮಾಹಿತಿ ಕೊಟ್ಟರು. ವರ್ಷಕ್ಕೆ 83 ಸಾವಿರ ಉಳಿತಾಯದ ಅವಕಾಶ ಸಿಕ್ಕಿದೆ ಎಂದರು. ಎಲ್ಲ ವರ್ಗದ ಜನರನ್ನು ಮನಸ್ಸಿನಲ್ಲಿಟ್ಟ ಅತ್ಯುತ್ತಮ ಕೇಂದ್ರ ಬಜೆಟ್ ಇದು ಎಂದು ವಿಶ್ಲೇಷಿಸಿದರು.
ರಾಜ್ಯ ವಕ್ತಾರ ನರೇಂದ್ರ ರಂಗಪ್ಪ ಅವರು ಮಾತನಾಡಿ, ಆರೋಗ್ಯದ ಕುರಿತು ಕಾಳಜಿ ವಹಿಸಿದ ಪ್ರಧಾನಿಯವರು 1 ಲಕ್ಷ ಕೋಟಿ ಮೊತ್ತವನ್ನು ಈ ಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಶೇ 191 ರಷ್ಟು ಮೊತ್ತ ಹೆಚ್ಚಳವಾಗಿದೆ ಎಂದು ತಿಳಿಸಿದರು.
200 ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಜಿಲ್ಲೆಗಳಲ್ಲಿ ತೆರೆಯಲು ವಿಶೇಷ ನಿಧಿ ಮೀಸಲಿಟ್ಟಿದ್ದಾರೆ. ನ್ಯಾಷನಲ್ ಹೆಲ್ತ್ ಮಿಷನ್‍ಗೆ 37 ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಗಳ ಡಿಜಿಟಲೀಕರಣ- ಟೆಲಿ ಹೆಲ್ತ್ ಕಡೆ ಗಮನ ಕೊಟ್ಟಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
]]>ಶುಕ್ರವಾರ (ಜ.31) ಬೆಳಗ್ಗೆ 11 ಗಂಟೆಗೆ ಬೆಂಗಳೂರು ಕೇಂದ್ರ ಲಾಲ್ ಬಾಗ್ ವ್ಯಾಪ್ತಿಯ ಹಾಪ್ ಕಾಮ್ಸ್ ಕೇಂದ್ರ ಕಚೇರಿಗೆ ರಾಜ್ಯ ರೈತ ಮೋರ್ಚಾದ ವತಿಯಿಂದ ಮುತ್ತಿಗೆ ಹಮ್ಮಿಕೊಳ್ಳಲಾಗಿತ್ತು. ಈ ಮುತ್ತಿಗೆಗೆ ಅವಕಾಶ ನೀಡದ ಪೊಲೀಸರು ರೈತ ಮೋರ್ಚಾದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳನ್ನು ಬಂಧಿಸಿ ಸಿದ್ದಾಪುರ ಠಾಣೆಗೆ ಕರೆದೊಯ್ದರು. ಪ್ರಜಾಸತ್ತಾತ್ಮಕವಾಗಿ ನಡೆಯುವ ಪ್ರತಿಭಟನೆಗಳಿಗೆ ಅವಕಾಶ ನೀಡದ ಇಲಾಖೆಯ ವಿರುದ್ಧ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟಿಸಲಾಯಿತು. ರೈತ ವಿರೋಧಿ ಹಾಪ್ ಕಾಮ್ಸ್‌ಗೆ ಧಿಕ್ಕಾರ ಎಂದು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಎಲ್ಲೆಲ್ಲಿ ಪ್ರತಿಭಟನೆ?
ಬೆಂಗಳೂರು ಹಾಪ್ ಕಾಮ್ಸ್ನ ಕೇಂದ್ರ ಕಚೇರಿ ಎದುರುಗಡೆ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಕಚೇರಿಗಳ ಮುಂಭಾಗದಲ್ಲಿ ರೈತರ ಮತ್ತು ಗ್ರಾಹಕರ ಪರವಾಗಿ ಹಾಪ್ ಕಾಮ್ಸ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಈ ಜಿಲ್ಲೆಗಳ ರೈತ ಮೋರ್ಚಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಈ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತರಕಾರಿ ಬೆಳೆಗಾರರು ಮತ್ತು ಬೆಳೆಗಳನ್ನು ಬೆಳೆಯುವ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಾಪ್ ಕಾಮ್ಸ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿ, ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು. ಹಾಪ್ ಕಾಮ್ಸ್‌ಗೆ ನಷ್ಟವಾಗಲು ಯಾರು ಕಾರಣರು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರೈತಮೋರ್ಚಾ ಆಗ್ರಹಿಸಿದೆ.
ರಾಜ್ಯ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಡಾ.ನವೀನ್ ಕುಮಾರ್ ಬಿ.ಸಿ., ಅವರ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು.
ರಾಜ್ಯ ಕಾರ್ಯದರ್ಶಿ ಸತೀಶ್ ಕಡತಲಮನೆ, ರೈತ ಮೋರ್ಚಾ ಉಪಾಧ್ಯಕ್ಷ ರುದ್ರೇಶ್ ಮತ್ತು ಐದು ಜಿಲ್ಲೆಗಳ ರೈತ ಮೋರ್ಚಾ ಜಿಲ್ಲಾಧ್ಯಕ್ಷರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
]]>ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ; ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅನೇಕರ ಮಾರಣಹೋಮ ಆದ ಬಳಿಕ ಸರಕಾರವು ಎಚ್ಚತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ ನಡೆಸಿದೆ. ಹೊಸ ಕಾನೂನು ತರುವ ಮತ್ತು ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುವುದಾಗಿ ತಿಳಿಸಿದೆ ಎಂದರು.
ಮೈಕ್ರೋ ಫೈನಾನ್ಸ್‍ಗಳ ಸಮಸ್ಯೆ ಕುರಿತು ಅನೇಕ ಮುಖಂಡರು ಗಮನ ಸೆಳೆದರೂ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿತ್ತು. ಕೊನೆಗೂ ಇವತ್ತು ಒಂದು ತೀರ್ಮಾನಕ್ಕೆ ಬಂದಿದೆ. ಫೈನಾನ್ಸ್ ವಸೂಲಿಗೆ ತೊಂದರೆ ಕೊಟ್ಟರೆ, ಗೂಂಡಾಗಳನ್ನು ಕಳುಹಿಸಿದರೆ ಅವರನ್ನು ಬಂಧಿಸುವುದಾಗಿ ಹೇಳಿದ್ದಾರೆ. ಜನರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹ; ಕಾಂಗ್ರೆಸ್ ಸರಕಾರದ ಹಿತದೃಷ್ಟಿಯಿಂದ ಅಲ್ಲ ಎಂದು ತಿಳಿಸಿದರು.
ಮಂತ್ರಿಗಳು, ಶಾಸಕರಿಂದ ಆನ್‍ಲೈನ್ ಗೇಮ್ಸ್ ಕಂಪೆನಿ
ಮೈಕ್ರೋ ಫೈನಾನ್ಸ್‍ನಲ್ಲಿ ಆಗುವ ಅನಾಹುತಕ್ಕಿಂತ 10ರಷ್ಟು ಅನಾಹುತಗಳು ಆನ್‍ಲೈನ್ ಗೇಮ್ಸ್ ಮೂಲಕ ಆಗುತ್ತಿದೆ ಎಂದು ಅವರು ತಿಳಿಸಿದರು. ಸರಕಾರದ ಕೆಲವು ಮಂತ್ರಿಗಳು, ಶಾಸಕರು ಆನ್‍ಲೈನ್ ಗೇಮ್ಸ್ ಕಂಪೆನಿಗಳನ್ನು ಮಾಡಿಕೊಂಡು ಜನರಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅನೇಕ ಯುವಕರು ಬೀದಿಪಾಲಾಗುತ್ತಿದ್ದಾರೆ. ರಮ್ಮಿ ಆಟದ ಮೂಲಕ ಸುಲಭದಲ್ಲಿ ಹಣ ಬರುವ ಸಾಮಾಜಿಕ ಜಾಲತಾಣದ ಜಾಹೀರಾತುಗಳನ್ನು ನಂಬಿ ಜನರ ಪ್ರಾಣ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಜನರು ಗೇಮ್‍ನಲ್ಲಿ ಸೋತ ಬಳಿಕ ಕಳ್ಳತನ ಮಾಡಿ ಆ ದುಡ್ಡು ಕಟ್ಟುತ್ತಾರೆ. ಇವತ್ತು ದರೋಡೆಗಳು, ಕಳ್ಳತನಗಳು ಇದೇ ಕಾರಣಕ್ಕಾಗಿ ಆಗುತ್ತಿವೆ ಎಂದು ತಿಳಿಸಿದರು.
ಇದರ ಬೇರು ಹುಡುಕಬೇಕಿದೆ. ಆನ್‍ಲೈನ್ ಗೇಮ್ ಕಾರಣದಿಂದ ಕಳ್ಳತನ, ದರೋಡೆ ಆಗುತ್ತಿದೆÉಂದು ವಿಶ್ಲೇಷಿಸಿದರು. ಅನೇಕರು ಕೆಲಸ ಬಿಟ್ಟು ಈ ಗೇಮ್ ಆಡುತ್ತಿದ್ದಾರೆ. ಇನ್ನೂ ಅನೇಕರು ಹೆಚ್ಚು ಸಾಲ ಮಾಡಿಕೊಂಡು ಕಟ್ಟಲಾಗದೆ ಪ್ರಾಣತ್ಯಾಗ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಇದರ ಬಗ್ಗೆಯೂ ತೀಕ್ಷ್ಣ ಕ್ರಮ ಕೈಗೊಳ್ಳುವಂತೆ ಕೋರಿದರು. ಆನ್‍ಲೈನ್ ಗೇಮ್‍ನಲ್ಲಿ ಇರುವವರ ರಕ್ಷಣೆ ಮಾಡುತ್ತಿದ್ದಾರೆ ಎಂದು ದೂರಿದರು.
ಇದು ಹಗೆತನದ ರಾಜಕೀಯವಲ್ಲವೇ?
ಯದುವೀರ್ ಅವರು ಬಿಜೆಪಿ ಸಂಸದರಾಗಿದ್ದು, ಅವರ ಆಸ್ತಿಗಳ ಮೇಲೆ ಕಾಂಗ್ರೆಸ್ ಸರಕಾರ ಕಣ್ಣು ಹಾಕಿದೆ. ಒಂದು ಕಡೆ ಚಾಮುಂಡೇಶ್ವರಿ ಬೆಟ್ಟಕ್ಕೆ, ಅಲ್ಲಿನ ಆಸ್ತಿಗಳ ಮೇಲೆ ಕಣ್ಣು ಹಾಕಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನ ಅರಮನೆ ಮೇಲೆ ಕೂಡ ಕಣ್ಣು ಹಾಕಿದ್ದಾರೆ ಎಂದು ಆರೋಪಿಸಿದರು. ಅವರು ಕಾಂಗ್ರೆಸ್ಸಿನ ಸಂಸದರಾಗಿದ್ದರೆ ಅವರ ಆಸ್ತಿಗಳ ಮೇಲೆ ಕಣ್ಣು ಹಾಕುತ್ತಿರಲಿಲ್ಲ ಎಂದು ನುಡಿದರು. ಇದು ಹಗೆತನದ ರಾಜಕಾರಣವಲ್ಲವೇ ಎಂದು ಕೇಳಿದರು.
ಇದಕ್ಕೆ ಸುಗ್ರೀವಾಜ್ಞೆ ಬೇಕಿತ್ತೇ? ಸದಾಶಿವನಗರದಲ್ಲಿ ಒಂದಡಿ ಜಾಗಕ್ಕೆ ಒಂದು ಲಕ್ಷ ಇರಬಹುದು. ಇಂಥ ಪರಿಸ್ಥಿತಿಯಲ್ಲಿ ನೀವು ಯಾರ ಆಸ್ತಿಗೆ ಕಣ್ಣು ಹಾಕುತ್ತಿದ್ದೀರಿ? ಇದು ಹಗೆತನದ ಪರಮಾವಧಿಯ ರಾಜಕಾರಣ ಎಂದು ಟೀಕಿಸಿದರು.
]]>ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, 7 ಲಕ್ಷದ 80 ಸಾವಿರಕ್ಕೂ ಹೆಚ್ಚು ದೂರುಗಳು ಬರುವವರೆಗೂ ನೀವು ಬಾಳೆಹಣ್ಣು ತಿನ್ನುತ್ತಾ ಇದ್ರಾ? ಎಷ್ಟು ಕ್ರಮ ಕೈಗೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಪ್ರಶ್ನಿಸಿದರು.
ಬೆಳಗಾವಿ ಒಂದೇ ಜಿಲ್ಲೆಯಲ್ಲಿ ಗರಿಷ್ಠ ಅಂದರೆ 2,71,466 ದೂರುಗಳು, ಬಾಗಲಕೋಟೆ ಜಿಲ್ಲೆಯಲ್ಲಿ 89,087, ಬಿಜಾಪುರ-75 ಸಾವಿರ, ಮಂಡ್ಯ ಜಿಲ್ಲೆಯಲ್ಲಿ 42,500,- ಹೀಗೆ ಕರ್ನಾಟಕದಾದ್ಯಂತ ಜನರು ನಮ್ಮನ್ನು ಶೋಷಿಸುತ್ತಿದ್ದಾರೆ; ದೌರ್ಜನ್ಯ ನಡೆದಿದೆ ಎಂದು ದೂರು ಕೊಟ್ಟಿದ್ದಾರೆ. ಮನೆ ಖಾಲಿ ಮಾಡಿಸಿದ, ಮನೆಗೆ ಬೀಗ ಹಾಕಿದ ದೂರುಗಳೂ ಇವೆ ಎಂದು ವಿವರಿಸಿದರು.
ಮೀಟರ್ ಬಡ್ಡಿ ಹಾವಳಿಯಿಂದ ಬಡವರು ಮನೆಗಳು, ಹಳ್ಳಿಗಳನ್ನು ಖಾಲಿ ಮಾಡಿ ತೆರಳುತ್ತಿದ್ದಾರೆ. ಬಡ್ಡಿ ವ್ಯವಹಾರ ಮಾಡುವವರು ದೌರ್ಜನ್ಯ ಮಾಡಿ, ಬಾರುಕೋಲಿನಿಂದ ಹೊಡೆದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಶೋಷಣೆ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ; ಅವರೂ ಶಾಮೀಲಾಗಿದ್ದಾರೆ ಎಂದು ಆಕ್ಷೇಪಿಸಿದರು.
ಸಮರ್ಪಕ ಕ್ರಮ ಕೈಗೊಳ್ಳದೆ ಇದ್ದರೆ ಎರಡ್ಮೂರು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಳಿಕ ಪ್ರಶ್ನೆಗೆ ಉತ್ತರಿಸಿದ ಅವರು, ಅಂಬೇಡ್ಕರರ ವಿಚಾರಗಳನ್ನು ಜಾರಿ ಮಾಡುತ್ತೇವೆ; ಬಾಪೂ ಭಾರತ ಕಟ್ಟುತ್ತೇವೆ ಎಂದಿದ್ದಾರೆ. ಇದು ಬಾಪು ಭಾರತವೇ ಎಂದು ಕೇಳಿದರು.
ಮಹಿಳೆಯರು ನಿಮಗೆ ತಾಳಿ ಕಳಿಸಿಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಸಚಿವರಿಗೆ ನಾಚಿಕೆ ಆಗಬೇಕಲ್ಲವೇ? ಏನು ಕ್ರಮ ತೆಗೆದುಕೊಂಡಿದ್ದೀರಿ? ಬಡ್ಡಿ, ಮೀಟರ್ ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆ ಒಂದೆಡೆ ಆಗಿದ್ದರೆ ಮತ್ತೊಂದೆಡೆ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವು, ಸಾವಿರಾರು ಮಕ್ಕಳ ಸಾವು ಸಂಭವಿಸುತ್ತಿದೆ. ಆಸ್ಪತ್ರೆಗಳು ಸರಿ ಇಲ್ಲ; ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸರಿ ಇಲ್ಲ; ಬ್ಯಾಂಕ್‍ಗಳು ಲೂಟಿ ಆಗುತ್ತಿವೆ. ಈ ಸರಕಾರಕ್ಕೆ ಜೀವವೇ ಇಲ್ಲ ಎಂದು ಟೀಕಿಸಿದರು.
ಈ ಸರಕಾರಕ್ಕೆ ಆಮ್ಲಜನಕ ನೀಡಬೇಕಿದೆ. ಒಂದು ರೀತಿಯ ಶವದ ವ್ಯವಸ್ಥೆಯಲ್ಲಿ ಈ ಸರಕಾರ ಇದೆ ಎಂದು ಆರೋಪಿಸಿದರು. ಈ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ಛೀಮಾರಿ ಹಾಕಿದರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‍ಗಳ ಹಾವಳಿಯು ಸಂಪೂರ್ಣ ಹಳಿ ತಪ್ಪಿದೆ. ಪರಿಣಾಮವಾಗಿ ರಾಜ್ಯದಲ್ಲಿ ಸಾಲ ತೆಗೆದುಕೊಳ್ಳುವ ಬಡವರ ಜೀವನವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
]]>ಬೆಂಗಳೂರು: ವಿಶ್ವವಿದ್ಯಾಲಯಗಳ ಒಟ್ಟು ಪಠ್ಯಕ್ರಮವನ್ನು ಪರಿಶೀಲಿಸುವ ನಿಟ್ಟಿನಲ್ಲಿ ಮಾನ್ಯ ರಾಜ್ಯಪಾಲರು ಇದರ ಕುರಿತು ವರದಿ ತರಿಸಿಕೊಳ್ಳಬೇಕು; ಎಲ್ಲ ವಿಶ್ವವಿದ್ಯಾಲಯಗಳ ಪಠ್ಯಕ್ರಮವನ್ನು ಪರಿಶೀಲಿಸಬೇಕು ಎಂದು ವಿಧಾನಪರಿಷತ್ತಿನ ಮಾಜಿ ಸದಸ್ಯ ಅರುಣ್ ಶಹಾಪುರ ಅವರು ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಪರಿಷತ್, ವಿವಾದಿತ ಅಂಶವಿರುವ ಪಠ್ಯಗಳ ಕುರಿತು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ವಿವಾದಿತ ಅಂಶಗಳನ್ನು ಒಳಗೊಂಡ ಪಠ್ಯದ ಮೂಲಕ ಸಮಾಜವನ್ನು ವಿಭಜಿಸುವ ಮಾನಸಿಕತೆಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು; ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಆಗ್ರಹಿಸಿದರು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಎ. ಪ್ರಥಮ ಸೆಮಿಸ್ಟರ್‍ನ ಬೆಳಗು ಲೇಖನಗಳ ಸಂಗ್ರಹದ ಕನ್ನಡ ಪಠ್ಯಪುಸ್ತಕದಲ್ಲಿ ರಾಮಲಿಂಗಪ್ಪ ಟಿ.ಬೇಗೂರು ಅವರ ಬರಹದಲ್ಲಿ ರಾಷ್ಟ್ರವಾದದ ಆಚರಣೆಯ ಸುತ್ತಮುತ್ತ ಎಂಬ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಅದರಲ್ಲಿ ಅತ್ಯಂತ ವಿವಾದಾತ್ಮಕ ಅಂಶಗಳಿವೆ ಎಂದು ಗಮನ ಸೆಳೆದರು.
ಬರಹಗಾರರ ಬಹಳ ಪೂರ್ವಾಗ್ರಹ ಪೀಡಿತ ವಿಚಾರಗಳನ್ನು ಇದರಲ್ಲಿ ಸೇರಿಸಿದ್ದಾರೆ. ರಾಷ್ಟ್ರವಾದದ ಆಚರಣೆಯ ಸುತ್ತಮುತ್ತ ಎಂಬ ವಿಷಯದಡಿ ರಾಷ್ಟ್ರವಾದವನ್ನೇ ಹೀಗಳೆಯುವ ಕೆಲಸ ಮಾಡಿದ್ದಾರೆ. ಹಿಂದೂ ಬಗ್ಗೆ ಕೆಟ್ಟದಾಗಿ ಚಿತ್ರಿಸಿದ್ದು, ಭಾರತ ಮಾತೆ ಎಂಬುದು ಕಲ್ಪನೆ ಎಂದಿದ್ದಾರೆ. ಈಕೆ ಹಿಂದೂ ಎಂಬ ಕಲ್ಪಿತ ಮಾತೆ ಎಂದು ತಿಳಿಸಿದ್ದನ್ನೂ ವಿವರಿಸಿದರು. ಬೋಲೋ ಭಾರತ್ ಮಾತಾಕಿ ಜೈ ಎಂಬುದನ್ನೂ ವಿರೋಧಿಸಿದ್ದಾರೆ ಎಂದು ಟೀಕಿಸಿದರು.
ವಿಶ್ವವಿದ್ಯಾಲಯ ಪಠ್ಯಪುಸ್ತಕ ವಾಪಸ್ ಪಡೆಯಲಿ
ವಿಶ್ವವಿದ್ಯಾಲಯದಲ್ಲಿ ಇದು ಬೌದ್ಧಿಕ ಭಯೋತ್ಪಾದಕತೆ ಎಂದ ಅರುಣ್ ಶಹಾಪುರ ಅವರು, ಇಲ್ಲಿನವರೆಗೆ ಪೊಲೀಸರು ಈ ವಿಷಯದಲ್ಲಿ ಯಾಕೆ ಮೊಕದ್ದಮೆ ಹೂಡಿಲ್ಲ? ಎಂದು ಕೇಳಿದರು. ಅವರ ಮೇಲೆ ಕ್ರಮ ಕೈಗೊಳ್ಳಿ; ಪಠ್ಯಪುಸ್ತಕವನ್ನು ವಾಪಸ್ ಪಡೆಯುವ ಕೆಲಸವನ್ನು ವಿಶ್ವವಿದ್ಯಾಲಯ ಮಾಡಬೇಕು ಎಂದು ಒತ್ತಾಯಿಸಿದರು.
ಸರಕಾರ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮಾನ್ಯ ಕುಲಾಧಿಪತಿಗಳಾದ ರಾಜ್ಯಪಾಲರು ಕ್ರಮ ಕೈಗೊಳ್ಳಲಿ ಎಂದು ಮನವಿ ಮಾಡಿದರು.
ಸಂವಿಧಾನದ ಆಶಯಕ್ಕೆ ವಿರೋಧವಾಗಿ ಹಲವಾರು ವಿಷಯಗಳನ್ನು ಅವರು ಹೇಳಿದ್ದಾರೆ. ಭಾರತ ಮಾತೆ, ತಾಯಿ ಭುವನೇಶ್ವರಿ (ಕನ್ನಡಮ್ಮನ) ಕುರಿತಂತೆ ಕೆಟ್ಟದಾಗಿ ಮಾತನಾಡಿದ್ದಾರೆ. ಇದು ಒಂದು ಮತೀಯವಾದ ಎಂದು ಬಿಂಬಿಸಿದ್ದಾರೆ. ಒಂದು ಪಠ್ಯಪುಸ್ತಕವನ್ನು ಒಂದು ವಿಶ್ವವಿದ್ಯಾಲಯವು ದುರುಪಯೋಗ ಪಡಿಸಲಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದರು.
ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಈಗ ಇರುವ ಪಠ್ಯಗಳನ್ನು ಪರಿಶೀಲಿಸಬೇಕು. ರಾಜ್ಯದಲ್ಲಿ ಉನ್ನತ ಶಿಕ್ಷಣ ಪರಿಷತ್ ಇದ್ದು, ಅದು ಯಾಕೆ ವಿವಾದಾತ್ಮಕ ಅಂಶಗಳಿರುವ ಪಠ್ಯದ ಕುರಿತು ಪ್ರತಿಕ್ರಿಯಿಸಿಲ್ಲ ಎಂದು ಕೇಳಿದರು. ಶಿಕ್ಷಣದ ಇಂಥ ವಿಕೃತಿಯನ್ನು ಎಳೆಯ ಮನಸ್ಸುಗಳಿಗೆ ತುಂಬುತ್ತಿದ್ದು, ಇದು ಅಪಾಯಕಾರಿ ಎಂದು ತಿಳಿಸಿದರು.
ಭಾಷಾವಾರು ಪ್ರಾಂತ್ಯಗಳ ರಚನೆಯನ್ನು ಇದರಲ್ಲಿ ಪ್ರಶ್ನಿಸಲಾಗಿದೆ. ವಿಘಟಕ ವಿಷಯಗಳಿಗೆ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಭಾರತದಲ್ಲಿ ಮುಸ್ಲಿಮರು ಈಚೆಗೆ ಕರ್ಮಠರಾಗಲು ಹಿಂದೂ ಎಂಬ ಕಲ್ಪಿತ ರಾಷ್ಟ್ರೀಯ ಯಜಮಾನಿಕೆಯೂ ಕಾರಣವಾಗಿದೆ ಎಂದು ಹೇಳಿದ್ದು, ಯುವ ಮನಸ್ಸುಗಳಿಗೆ ಇದನ್ನು ತುಂಬುವ ಕೆಲಸ ಮಾಡಿದ್ದಾರೆ ಎಂದು ದೂರಿದರು. ಇವರ ಮೇಲೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಮಾತನಾಡಿ, ಈ ಪಠ್ಯದ ಮೇಲಿನ ಲೇಖನವು ಪ್ರತ್ಯೇಕತೆ ಮತ್ತು ದ್ವೇಷದ ಭಾವನೆಯನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಲೇಖಕರ ಮೇಲೆ ಕ್ರಮ ಕೈಗೊಳ್ಳಬೇಕು. ಲೇಖನವನ್ನು ಅತ್ಯಂತ ಶೀಘ್ರವಾಗಿ ಆ ಪಠ್ಯಕ್ರಮದಿಂದ ತೆಗೆದುಹಾಕಬೇಕೆಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ತಿನ ಸದಸ್ಯ ಹನುಮಂತ ನಿರಾಣಿ ಅವರು ಹಾಜರಿದ್ದರು.
]]>ಮಂಗಳೂರು ಕೋಟೆಕಾರು ವ್ಯವಸಾಯ ಬ್ಯಾಂಕ್ನಲ್ಲಿ ಹಗಲು ಹೊತ್ತು ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಲೂಟಿ ಮಾಡಲಾಗಿದೆ. ಹುಬ್ಬಳ್ಳಿ, ಬೀದರ್, ಕಲ್ಬುರ್ಗಿ ಸೇರಿದಂತೆ ರಾಜ್ಯದ ಹಲವು ಕಡೆ ಒಂದೇ ದಿನ ದರೋಡೆ ಪ್ರಕರಣಗಳು ದಾಖಲಾಗಿರುವುದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಸ್ಪಷ್ಟವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಯೂ ದರೋಡೆ ಪ್ರಕರಣ, ಗೋ ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು ಜಿಲ್ಲಾ ಪೊಲೀಸ್, ಆಡಳಿತ ವ್ಯವಸ್ಥೆ ಇದನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಒಟ್ಟಾರೆಯಾಗಿ ರಾಜ್ಯದ ಗೃಹ ಇಲಾಖೆ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಶಾಸಕರು ಕಿಡಿ ಕಾರಿದ್ದಾರೆ.
]]>ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾದಂತೆ ಲೋಕಾಯುಕ್ತ ತನಿಖಾ ಸಂಸ್ಥೆಯು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದೇ ಆದರೆ, ಲೋಕಾಯುಕ್ತ ತನಿಖೆ ಸರಿಯಾಗಿ ಆಗುತ್ತಿಲ್ಲ; ಸಿಎಂ ಒತ್ತಡಕ್ಕೆ ಮಣಿದಿದ್ದಾರೆ ಎಂದು ಬಿಜೆಪಿ ಹಲವು ದಿನಗಳಿಂದ ವ್ಯಕ್ತಪಡಿಸಿದ ಅನುಮಾನಗಳು ಸತ್ಯವಾದಂತೆ ಎಂದು ವಿಶ್ಲೇಷಿಸಿದರು.
ಮೊನ್ನೆ ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರೆಸ್ ನೋಟನ್ನೂ ಬಿಡುಗಡೆ ಮಾಡಿದೆ. ಮುಡಾದಲ್ಲಿ ಎಷ್ಟು ಕೋಟಿ ಹಗರಣ ನಡೆದಿದೆ ಎಂಬುದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮತ್ತೊಂದು ಕಡೆ ರಾಜ್ಯ ಹೈಕೋರ್ಟ್ ಕೂಡ ಮೈಸೂರಿನ ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಇದರ ನಡುವೆ ಮುಖ್ಯಮಂತ್ರಿಗಳೂ ಸೇರಿ ರಾಜ್ಯ ಸರಕಾರವು ಮಾನ್ಯ ರಾಜ್ಯಪಾಲರನ್ನು ಅವಹೇಳನಕಾರಿಯಾಗಿ ನಿಂದಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಹೈಕೋರ್ಟ್ ತೀರ್ಪು ಬರುವ ಸಂದರ್ಭದಲ್ಲೇ ಲೋಕಾಯುಕ್ತ ವರದಿ ನೀಡಿದ್ದು ಸತ್ಯವಾದರೆ, ಇದು ಖಂಡಿತ ಸರಿಯಲ್ಲ. ಇದಕ್ಕೆ ಯಾವುದೇ ರೀತಿಯ ಪಾವಿತ್ರ್ಯತೆ ಇರುವುದಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ ಎಂಬುದು ನಮ್ಮೆಲ್ಲರ ಸ್ಪಷ್ಟ ಅಭಿಪ್ರಾಯ ಎಂದು ನುಡಿದರು.
ಪ್ರಶ್ನೆಗೆ ಉತ್ತರಿಸಿದ ಅವರು, ಇ.ಡಿ. ಆಧಾರರಹಿತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಲು ಸಾಧ್ಯವಿಲ್ಲ; ಮುಡಾ ಹಗರಣ ಆಗಿದೆ ಎಂದಿದ್ದರೆ ಅದಕ್ಕೆ ಆಧಾರಗಳಿರುತ್ತವೆ. ಇ.ಡಿ. ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆತುರಾತುರವಾಗಿ ಕ್ಲೀನ್ ಚಿಟ್ ಪಡೆಯುವ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ರಾಜ್ಯಾಧ್ಯಕ್ಷರ ವಿಚಾರಕ್ಕೆ ಬಂದರೆ, ಯಾರೋ ಒಂದಾರು ಜನ ಪ್ರಮುಖರು ನನ್ನ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದ ಉಸ್ತುವಾರಿಗಳೂ ಆದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್, ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಪೊನ್ನು ರಾಧಾಕೃಷ್ಣ ಅವರು ಮೊನ್ನೆ ಸಭೆಯಲ್ಲಿದ್ದರು. 55- 60 ಜನ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಇದ್ದ ಸಭೆ ಅದಾಗಿತ್ತು. ಶೇ 80- 90 ಜನರು ರಾಜ್ಯದ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ; ವಿಜಯೇಂದ್ರರನ್ನು ಮುಂದುವರೆಸಬೇಕೆಂದು ಅಭಿಪ್ರಾಯ ನೀಡಿದ್ದಾಗಿ ಪತ್ರಿಕೆಗಳಲ್ಲೂ ಬಂದಿದೆ; ಮಾಧ್ಯಮಗಳಲ್ಲೂ ಬಂದಿದೆ ಎಂದು ಗಮನ ಸೆಳೆದರು.
ಕಾರ್ಯಕರ್ತರು ನನ್ನ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಅಸಮಾಧಾನ ವ್ಯಕ್ತಪಡಿಸುವುದು ಸಹಜ. ಅವರ ಅಸಮಾಧಾನ ಇರುವುದು ಅಧ್ಯಕ್ಷಗಿರಿ ಬಗ್ಗೆ ಅಲ್ಲ. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ; ಜಿಲ್ಲಾಧ್ಯಕ್ಷರ ಚುನಾವಣೆಗಳು ಈಗಾಗಲೇ ನಡೆಯುತ್ತಿವೆ. ರಾಜ್ಯದ ಅಧ್ಯಕ್ಷರ ಹುದ್ದೆಗೂ ಚುನಾವಣೆ ನಡೆಯಲಿದೆ; ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಸಮರ್ಪಕ ಉತ್ತರ ಲಭಿಸುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಸ್ಥಳೀಯ ಚುನಾವಣೆಗಳು ಬರುವ ಮುಂಚಿತವಾಗಿ ಪಕ್ಷದ ವರಿಷ್ಠರು ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಗಮನಿಸಬೇಕೆಂಬ ಅಪೇಕ್ಷೆ ನನ್ನದು ಮತ್ತು ಕಾರ್ಯಕರ್ತರದು. ಬಿಜೆಪಿಯೊಳಗಿನ ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿಗಳು, ಹೋರಾಟಗಾರ ಯಡಿಯೂರಪ್ಪನವರ ಬಗ್ಗೆ ಕೆಲವು ಮುಖಂಡರು ಅಪಮಾನ ಮಾಡುವ ರೀತಿಯಲ್ಲಿ ಒಂದು ವರ್ಷದಿಂದ ಹೇಳಿಕೆ ಕೊಡುತ್ತಿದ್ದಾರೆ. ಕಾರ್ಯಕರ್ತರು ಇದರಿಂದ ನೊಂದಿದ್ದಾರೆ ಎಂದು ತಿಳಿಸಿದರು. ಎಲ್ಲ ವಿಷಯಗಳನ್ನು ಸರಿಪಡಿಸುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುವುದಾಗಿ ಹೇಳಿದರು.
ಶ್ರೀರಾಮುಲು ಅವರ ವಿಚಾರದಲ್ಲಿ ಮೊನ್ನೆ ಕೋರ್ ಕಮಿಟಿಯಲ್ಲಿ ಏನು ಚರ್ಚೆ ಆಗಿದೆಯೋ ಅದರ ಕುರಿತ ಶ್ರೀರಾಮುಲು ಅವರ ಮಾತುಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಶ್ರೀರಾಮುಲು ಅವರು ಹಿರಿಯರಿದ್ದು ಅವರ ಬಗ್ಗೆ ಗೌರವವಿದೆ. ಒಳಗಡೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅವರ ಉಪಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕೆಂಬ ಚರ್ಚೆ ನಡೆದಿದೆ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಬೇಕೆಂಬ ದೃಷ್ಟಿಯಿಂದ ಕೆಲವೊಂದು ಚರ್ಚೆಗಳು ನಡೆದಿವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅದನ್ನು ನಾವು ಬಹಿರಂಗವಾಗಿ ಮಾತನಾಡುವುದಿಲ್ಲ. ಶ್ರೀರಾಮುಲು ಅವರು ಕೂಡ ಅಪಾರ್ಥಕ್ಕೆ ಅವಕಾಶ ಮಾಡಿಕೊಡಬಾರದು; ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದರು.
]]>ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಇರುವ ನಿಗಮಗಳಲ್ಲಿ ಅನುಷ್ಠಾನಗೊಳ್ಳುವ ಸಾಲ ಸೌಲಭ್ಯ ಯೋಜನೆಗಳು ಅರ್ಹತೆ ಇದ್ದ ಎಲ್ಲರಿಗೂ ತಲುಪಲು ವಿಫಲವಾಗಿದೆ. ಪ್ರತಿಯೊಂದು ಯೋಜನೆಯಡಿ ನೂರಾರು ಅರ್ಜಿಗಳು ಆನ್ ಲೈನ್ ನಲ್ಲಿ ದಾಖಲಾಗಿದ್ದರೂ ಕೇವಲ 01 ಅಥವಾ 02 ಬೆರಳೆಣಿಕೆಯ ಗುರಿ ನಿಗದಿಪಡಿಸುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯ ಫಲನುಭವಿಗಳನ್ನು ಆಯ್ಕೆ ಮಾಡಲು ಸಮಿತಿಗೆ ಸಾಧ್ಯವಾಗುತ್ತಿಲ್ಲ. ನೂರಾರು ಅರ್ಜಿಗಳಿಗೆ ಒಂದಂಕಿಯ ಗುರಿ ನಿಗದಿ ಪಡಿಸುವುದು ಅವೈಜ್ಞಾನಿಕ. ಇಂತಹ ಪರಿಸ್ಥಿತಿ ಇರುವಾಗ ಆಯ್ಕೆ ಸಮಿತಿಯೇ ಅಪ್ರಸ್ತುತ ಎಂದು ಕಿಡಿಕಾರಿದರು.
ಅರ್ಹರಿಗೆ ಯೋಜನೆಯ ಪ್ರಯೋಜನ ತಲುಪಿಸಿ, ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಂಭೀರವಾಗಿ ಯೋಚಿಸಬೇಕು ಹಾಗೂ ಮೇಲಧಿಕಾರಿಗಳಿಗೆ ವರದಿ ಮಾಡಬೇಕು. ಇಂತಹ ಯೋಜನೆಗಳಲ್ಲಿ ಪ್ರತಿ ಯೋಜನೆಯಡಿಯಲ್ಲಿ ವರ್ಷಕ್ಕೆ ಕನಿಷ್ಠ 10 ಫಲಾನುಭವಿಗಳ ಆಯ್ಕೆಗೆ ಅವಕಾಶ ನೀಡಬೇಕು ಇಲ್ಲದಿದ್ದರೆ ಆ ಯೋಜನೆಯನ್ನೇ ಸರಕಾರ ರದ್ದು ಪಡಿಸುವುದು ಉತ್ತಮ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿವರ್ಷ ಹೊಸದಾಗಿ ಅರ್ಜಿ ಸಲ್ಲಿಸುವ ಬದಲು ಈ ಹಿಂದೆ ನಿರ್ದಿಷ್ಟ ಯೋಜನೆಯಡಿ ಅರ್ಜಿ ಹಾಕಿ ಸೌಲಭ್ಯ ದೊರಕದೇ ಇರುವವರ ಅರ್ಜಿಗಳು ಮುಂದಿನ ವರ್ಷಗಳಲ್ಲಿ ಪರಿಗಣನೆಗೆ ಬರುವ ಹಾಗೆ ಆನ್ ಲೈನ್ ತಂತ್ರಾoಶದಲ್ಲಿ ಅಗತ್ಯ ಬದಲಾವಣೆ ಮಾಡಲು ಕ್ರಮ ವಹಿಸುವುದರ ಮೂಲಕ ಅರ್ಜಿದಾರರ ಹಣ ಹಾಗೂ ಶ್ರಮ ವ್ಯರ್ಥವಾಗುವುದನ್ನು ತಪ್ಪಿಸುವಂತಾಗಬೇಕು ಎಂದರು.
ಸಭೆಯಲ್ಲಿ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ನಿಗಮ ಹಾಗೂ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳು ಹಾಗೂ ಆಯ್ಕೆ ಸಮಿತಿಯ ಸದಸ್ಯರುಗಳು ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
]]>