Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Uncategorized – I am BJP https://iambjp.in Making Bharat Vishwa Guru Tue, 01 Aug 2023 03:42:47 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Uncategorized – I am BJP https://iambjp.in 32 32 ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿಗಳ ಅಮಾನವೀಯ ಘಟನೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ https://iambjp.in/archives/2115 https://iambjp.in/archives/2115#respond Mon, 31 Jul 2023 14:42:32 +0000 https://iambjp.in/?p=2115 ಉಡುಪಿಯಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ಘಟನೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಾಗೂ ಪ್ರಕರಣದ ಸಮಗ್ರ ತನಿಖೆಗೆ ಹಕ್ಕೊತ್ತಾಯ ಮಂಡಿಸಲಾಯಿತು. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌, ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್,  ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್, ಕು. ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

]]>
https://iambjp.in/archives/2115/feed 0
ಮೇಕೆದಾಟು ಯೋಜನೆ ಬಗೆಗಿನ ಇನ್ನೊಂದು ದಾಖಲೆ ಬಿಡುಗಡೆ ಮಾಡಿದ ಸಚಿವ ಗೋವಿಂದ ಕಾರಜೋಳ https://iambjp.in/archives/773 https://iambjp.in/archives/773#respond Mon, 10 Jan 2022 07:28:59 +0000 https://iambjp.in/?p=773 ಬಾಗಲಕೋಟೆ/ಬೆಂಗಳೂರು: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಕುರಿತು 2013 ರಿಂದ 2018 ರವರೆಗೆ ಅಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪಶುಸಂಗೋಪನಾ ಮತ್ತು ಮುಜರಾಯಿ ಸಚಿವರಾಗಿದ್ದ, ಟಿ.ಬಿ.ಜಯಚಂದ್ರ ರವರು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದ ಸಕರಾತ್ಮಕ ಟಿಪ್ಪಣಿ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅನುಮೋದನೆಯ ನಂತರವೂ ಅಂದಿನ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಯಾವುದೇ ಕ್ರಮ ಕೈಗೊಳ್ಳದೇ ನಿಷ್ಕ್ರಿಯರಾಗಿದ್ದರು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಕಟುವಾಗಿ ಟೀಕಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಂದಿನ ಕಾನೂನು ಸಚಿವರು ಕಡತದ LAW 15 CWD 2013 ನಲ್ಲಿ ಮಾಡಿದ ಟಿಪ್ಪಣಿಯನ್ನು ವಿವರಿಸಿದರು.

“ಕಾವೇರಿ ನೀರು ಹಂಚಿಕೆ ವಿಷಯದ ಬಗ್ಗೆ ರಚಿತವಾಗಿರುವ ಕಾವೇರಿ ಜಲ ವಿವಾದ ನ್ಯಾಯಾಧಿಕರಣ ನೀಡಿರುವ ಆದೇಶ ತಮಗೆ ತಿಳಿದಿರುವ ವಿಷಯವಾಗಿದೆ. ಸದರಿ ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಕರ್ನಾಟಕ ರಾಜ್ಯವು ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ಸದರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇರುತ್ತದೆ. ಅದರಂತೆ ಮೇಕೆದಾಟು ಜಲವಿದ್ಯುತ್ ಸಮಸ್ಯೆಯು ಗಂಭೀರವಾಗಿರುವುದರಿಂದ ಹಾಗೂ ನಾವು ಜನತೆಗೆ ನೀಡಿರುವ ಭರವಸೆಯಂತೆ ವಿದ್ಯುತ್ ಉತ್ಪಾದನೆಯನ್ನು ಹೆಚ್ಚು ಮಾಡಲೇಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಈ ಪ್ರತಿಷ್ಟಿತ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈಗಾಗಲೇ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವಲ್ಲಿ ಸಾಕಷ್ಟು ವಿಳಂಬವಾಗಿದೆ. ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂಬಂಧ ಮೇಲ್ಕಂಡ ಕಂಡಿಕೆಗಳಲ್ಲಿ ಅಡ್ವೋಕೇಟ್ ಜನರಲ್ ರವರು ನೀಡಿರುವ ಸಕಾರಾತ್ಮಕ ಅಭಿಪ್ರಾಯ ಮತ್ತು ಇತರೆ ಮಾಹಿತಿಯನ್ನು ಅವಗಾಹಿಸಿ ಈ ಕೂಡಲೇ ಯೋಜನೆಯನ್ನು ಪ್ರಾರಂಭಿಸಲು ಸಂಬಂಧಪಟ್ಟವರಿಗೆ ಸೂಕ್ತ ಆದೇಶ ನೀಡಬೇಕಾಗಿದೆ ಕೋರಿದೆ”. ಎಂದು ವಿವರವಾದ ಮತ್ತು ಸ್ಪಷ್ಟವಾದ ಟಿಪ್ಪಣಿಯನ್ನು ಮುಖ್ಯಮಂತ್ರಿಗಳಿಗೆ ಕಡತದಲ್ಲಿ ಕಳುಹಿಸಿದ್ದಾರೆ. ಮತ್ತು ಅಂದು ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಈ ಟಿಪ್ಪಣಿಯನ್ನು ಅನುಮೋದಿಸಿ, ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ್ರಿಗೆ ಕಳುಹಿಸಿದ್ದು ಸರ್ಕಾರದ ಕಡತಗಳಲ್ಲಿ ದಾಖಲಾಗಿದೆ ಎಂದು ಗೋವಿಂದ ಕಾರಜೋಳ ರವರು ವಿವರಿಸಿದ್ದಾರೆ.

ಇಷ್ಟೆಲ್ಲಾ ಕಡತಗಳಲ್ಲಿ ಅನುಮೋದನೆ ದೊರಕಿದ ಮೇಲೆಯೂ ಸಹ ಯಾಕೆ ಕಾಮಗಾರಿಯನ್ನು ಅಂದಿನ ಕಾಂಗ್ರೆಸ್ ಸರ್ಕಾರ ಪ್ರಾರಂಭ ಮಾಡಲಿಲ್ಲ. ಈಗ ಮೇಕೆದಾಟು ಪಾದಯಾತ್ರೆ ಕೇವಲ ಒಂದು ಗಿಮಿಕ್ ಎಂದು ಸಚಿವರು ಹೇಳಿದರು. 12-11-2014 ರಂದೇ ಯೋಜನೆಗೆ ಅನುಮೋದನೆ ನೀಡಲಾಗಿದ್ದರೂ ಸಹ ಯಾಕೆ ಯೋಜನೆಯನ್ನು ಜಾರಿಗೊಳಿಸಲು ಮೀನಾಮೇಷ ಮಾಡಲಾಯಿತು ಎಂದು ಸಚಿವರು ಪ್ರಶ್ನಿಸಿದರು.

ಭಾನುವಾರ ಆರಂಭಗೊಂಡಿರುವ ಕಾಂಗ್ರೆಸ್ ನೇತೃತ್ವದ ಮೇಕೆದಾಟು ಪಾದಯಾತ್ರೆ ತನ್ನ ನಾಯಕರ ನಾಯಕತ್ವಕ್ಕಾಗಿ ನಡೆದ ಪೈಪೋಟಿಯೇ ಹೊರತು ಹೊರತು ಬೇರೇನೂ ಅಲ್ಲ. ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ರೂಪಿಸಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಟೀಕಿಸಿದರು.

ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಭಾಗವಹಿಸುವವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ಕಾಳಜಿ ಇಲ್ಲದಿರುವುದು ಕಳವಳಕಾರಿಯಾಗಿದೆ ಎಂದರು.

“ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕು. ಹಾಗಾಗಿ ನಮ್ಮ ಸರ್ಕಾರ ಅವರನ್ನು ನಿರ್ಬಂಧಿಸಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಜನಸಂದಣಿ ಮತ್ತು 100 ಪ್ರತಿಶತ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸುವಂತೆ ನಾನು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸುತ್ತೇನೆ. ಈ ಪಾದಯಾತ್ರೆಯು ರಾಜ್ಯದ ಹಿತದೃಷ್ಟಿಯಿಂದ ಅಲ್ಲ. ಕಾಂಗ್ರೆಸ್‌ ನಾಯಕರ ನಾ ಮೇಲೂ ತಾ ಮೇಲೂ ಎಂಬ ಪೈಪೋಟಿಗೆ ಕಾರಣವಾಗಿದೆ ಎಂದರು.

ಪಾದಯಾತ್ರೆಯಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಸರ್ಕಾರವು ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಳಿದಾಗ, ಕಾರಜೋಳ ಹೇಳಿದರು: “ಕಾನೂನು ಎಲ್ಲರಿಗೂ ಒಂದೇ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಎಂ ಬಿ ಪಾಟೀಲ್ ವಿಶ್ವಮಾನವ:
ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ಕಾರಜೋಳ ಅವರು ಅಸಮರ್ಥರು, ಅನರ್ಹರು ಎಂಬ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಪಾಟೀಲ್ ಅವರೊಂದಿಗೆ ನನ್ನನ್ನು ಹೋಲಿಕೆ ಮಾಡಿಕೊಳ್ಳುತ್ತಿಲ್ಲ. ನಾನು ಸಾಮಾನ್ಯ ಹಿನ್ನೆಲೆಯಿಂದ ಬಂದಿದ್ದೇನೆ ಮತ್ತು ವಿಧಾನಸೌಧದವರೆಗೂ ತಲುಪಿದ್ದೇನೆ. ಎಂ.ಬಿ.ಪಾಟೀಲರು ವಿಶ್ವಮಾನವ, ವಿಶ್ವರೂಪಿ, ಬ್ರಹ್ಮಜ್ಞಾನಿ.ಇತರರ ಬಗ್ಗೆ ಮಾತನಾಡುವಾಗ ನಿಮ್ಮ ನಾಲಗೆಯ ಮೇಲೆ ಹಿಡಿತವಿರಲಿ ಎಂದು ಸಚಿವರು ಟೀಕಿಸಿದರು. ವಿಜಯಪುರ-ಬಾಗಲಕೋಟದಿಂದ ಬರುವ ನನ್ನಂತಹ ಸಾಮಾನ್ಯ ವ್ಯಕ್ತಿ ಜಲಸಂಪನ್ಮೂಲ ಸಚಿವನಾಗಿದ್ದಾನೆ ಎಂದು ನಿಮಗೆ ಮತ್ಸರ ಉಂಟಾಗಿರಬಹುದು ಎಂದು ಹೇಳಿದರು. 2013ರ ಕೂಡಲ ಸಂಗಮ ಪಾದಯಾತ್ರೆಯ ಫಲಿತಾಂಶವೇನು?ಆಲಮಟ್ಟಿಗೆ ಐದು ವರ್ಷಗಳಲ್ಲಿ 2670 ಕೋಟಿ ಮಾತ್ರ ಖರ್ಚು ಮಾಡಿದ್ದೀರಿ, ಇದಕ್ಕಾಗಿ ನಾಚಿಕೆಪಡಬೇಕು ಎಂದು ಹೇಳಿದ ಅವರು ಇದೀಗ ಮಾಡುತ್ತಿರುವ ಮೇಕೆದಾಟು ಪಾದಯಾತ್ರೆ ನೆಪಮಾತ್ರಕ್ಕೆ ಆಗಿದೆ ಎಂದು ಸಚಿವರು ವಿವರಿಸಿದರು.

]]>
https://iambjp.in/archives/773/feed 0
ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್ ತೆರೆಯಲು ಆದ್ಯತೆ – ಸಚಿವ ಸುನೀಲ್‍ ಕುಮಾರ್ https://iambjp.in/archives/529 https://iambjp.in/archives/529#respond Tue, 07 Sep 2021 09:10:27 +0000 https://iambjp.in/?p=529 ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್‍ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲ್ಲ ಜಿಲ್ಲಾ ಕೇಂದ್ರಗಳು, ಪ್ರವಾಸೋದ್ಯಮ ಕೇಂದ್ರಗಳಲ್ಲಿ ರಿಚಾರ್ಜ್ ಸೆಂಟರ್ ತೆರೆಯಲು ಬೇರೆ ಬೇರೆ ಎಸ್ಕಾಂಗಳಿಗೆ ಗುರಿ ನೀಡಲಾಗುವುದು. ರಾಜ್ಯದ ಸರಕಾರಿ ಕಛೇರಿಗಳಲ್ಲಿ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಉತ್ತರ ಕರ್ನಾಟಕದಲ್ಲಿ ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಬೇಕೆಂಬ ಬೇಡಿಕೆ ಇತ್ತು. ಇದಕ್ಕಾಗಿ ವಿವಿಧೆಡೆ 60ಕ್ಕೂ ಹೆಚ್ಚು ಸಬ್ ಸ್ಟೇಷನ್‍ಗಳನ್ನು ಇನ್ನು 100 ದಿನಗಳ ಒಳಗೆ ಕೆಪಿಟಿಸಿಎಲ್ ಮೂಲಕ ನಿರ್ಮಿಸಲಾಗುವುದು. ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಇದರಿಂದ ಸಾಧ್ಯವಾಗಲಿದೆ ಎಂದು ವಿವರಿಸಿದರು.

ಜೆಇ, ಲೈನ್‍ಮ್ಯಾನ್ ನೇಮಕಾತಿ, ಜೆಇ ಹುದ್ದೆಗೆ ಬಡ್ತಿ ಸಮಸ್ಯೆಯನ್ನೂ ಬಗೆಹರಿಸಲಾಗುವುದು. ವರ್ಗಾವಣೆ ದಂಧೆಯನ್ನು ಯಾವುದೇ ಅಧಿಕಾರಿಗಳು ಮಾಡುವಂತಿಲ್ಲ. ವರ್ಷಪೂರ್ತಿ ವರ್ಗಾವಣೆ ಇರುವುದಿಲ್ಲ ಎಂದು ತಿಳಿಸಿದರು.

ಎರಡೂ ಇಲಾಖೆಗಳಲ್ಲಿ 100 ದಿನಗಳ ಕಾರ್ಯಕ್ರಮ ಯೋಜಿಸಿದ್ದೇವೆ. ಈ 100 ದಿನಗಳಲ್ಲಿ ಗ್ರಾಮಾಂತರದಲ್ಲಿ ಮನೆಗಳನ್ನು ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗದ ಮನೆಯವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇದನ್ನು ಮುಖ್ಯಮಂತ್ರಿಗಳ ಆಶಯದಂತೆ “ಬೆಳಕು” ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಅತ್ಯಂತ ನಾದರುಸ್ತಿ ಸ್ಥಿತಿಯಲ್ಲಿರುವ ಟ್ರಾನ್ಸ್‍ಫಾರ್ಮರ್ ಬದಲಾವಣೆಗೆ ಟ್ರಾನ್ಸ್‍ಫಾರ್ಮರ್ ಬ್ಯಾಂಕ್ ಸ್ಥಾಪಿಸಲಾಗುವುದು. ಕೇವಲ 24 ಗಂಟೆಗಳಲ್ಲಿ ಹಾಳಾದ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಬದಲಾವಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಗಂಗಾಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆದಿದ್ದು, ತುಂಬಾ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ವಿಳಂಬವಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಬೋರ್‍ವೆಲ್ ಸಿದ್ಧವಾದ 30 ದಿನಗಳ ಒಳಗಾಗಿ ವಿದ್ಯುತ್ ಸಂಪರ್ಕ ನೀಡಲಾಗುವುದು. ಅನಗತ್ಯವಾಗಿ ರೈತರ ಓಡಾಟವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಗಾಗಿ ಅರ್ಜಿ ಹಾಕುವುದು ನಿಧಾನವಾಗಿ ಕಡಿಮೆ ಆಗಬೇಕೆಂಬ ಚಿಂತನೆ ಇದೆ. ಸಾಧಕರನ್ನು ಗುರುತಿಸುವ ಪರಂಪರೆ ನಾಡಿನಾದ್ಯಂತ ನಿರ್ಮಾಣವಾಗಬೇಕು. ಎಲೆಯ ಮರೆ, ತೆರೆಯ ಮರೆಯಲ್ಲಿರುವ ಸಾಧಕರನ್ನು ಗುರುತಿಸುವ ಯೋಜನೆ ಇದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸಾವಿರಾರು ಕಲಾವಿದರಿದ್ದಾರೆ. ಕೆಲವು ಕಲಾವಿದರು ಮಂತ್ರಿಗಳ ವರೆಗೆ ಬಂದರೆ, ಇನ್ನೂ ಕೆಲವರು ಅಧಿಕಾರಿಗಳವರೆಗೆ ಬರುತ್ತಾರೆ. ಇನ್ನೂ ಕೆಲವರು ಬೆಂಗಳೂರಿಗೆ ಬರುತ್ತಾರೆ. ಯಾವುದೇ ಶಕ್ತಿ ಇಲ್ಲದ ನೂರಾರು ಕಲಾವಿದರು ಗ್ರಾಮೀಣ ಪ್ರದೇಶದಲ್ಲಿ ಉಳಿದಿದ್ದಾರೆ. ಹಾಗಾಗಿ ಕಲಾವಿದರ ಡಾಟಾ ಬ್ಯಾಂಕ್ ಹೊಂದಬೇಕೆಂಬ ಯೋಜನೆ ಇದೆ. ಈ ವಿವರ ಸಂಗ್ರಹ ಕಾರ್ಯ ಮುಂದಿನ 100 ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಚೆನ್ನಾಗಿ ಆಗಬೇಕು. ಸ್ವಾತಂತ್ರ್ಯ ಚಳವಳಿಗೆ ಕರ್ನಾಟಕದ ಕೊಡುಗೆ ಎಲ್ಲರಿಗೂ ತಿಳಿಯಬೇಕು. ನೂರಾರು ಜನರ ಬಲಿದಾನ ಆಗಿದ್ದು, ನೂರಾರು ಗ್ರಾಮಗಳು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮದೇ ಆದ ಶೌರ್ಯ ಪ್ರದರ್ಶನ ಮಾಡಿವೆ. ಇಂಥ ಗ್ರಾಮಗಳನ್ನು ಗುರುತಿಸಿ ಅದನ್ನು ನಾಡಿಗೆ ಪರಿಚಯಿಸಲಾಗುವುದು ಎಂದರು.

]]>
https://iambjp.in/archives/529/feed 0