og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳನ್ನೂ ಬಿಜೆಪಿ ಮೈತ್ರಿ ಗೆದ್ದರೆ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ ಸರ್ಕಾರ ಪತನದ ಸುದ್ದಿ ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರು ಗ್ಯಾರೆಂಟಿಗಳ ಬಗ್ಗೆ ಹೇಳಿದ್ದೇ ಹೇಳಿದ್ದು, ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಈಗ ಕೊಡುತ್ತಿರುವ ಐದು ಕೆಜಿ ಕೂಡ ಮೋದಿ ಸರ್ಕಾರದ್ದು, ಇದು ಜನರಿಗೆ ಮಾಡುತ್ತಿರುವ ಮೋಸ. 200 ಯುನಿಟ್ ಉಚಿತ ವಿದ್ಯುತ್ ಫ್ರೀ ಕೊಡುತ್ತೇವೆ ಹೇಳಿ ಈಗ ಅದಕ್ಕೂ ಕಂಡೀಷನ್ ಹಾಕಿದ್ದಾರೆ, ರಾಜ್ಯದಲ್ಲಿ ಒಬ್ಬರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಿರುವ ದಾಖಲೆ ಇದ್ದರೆ ಕೊಡಿ, ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
]]>ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಈ ಭಾಗಕ್ಕೆ 1,500 ಕೋಟಿ ನೀಡಿ ಅದರಡಿ ಕಾಮಗಾರಿ ನಡೆಸಿದರು. ಈ ವರ್ಷ ನಾನು 3 ಸಾವಿರ ಕೋಟಿಯ ಕ್ರಿಯಾಯೋಜನೆ ಮಾಡಿಸಿದ್ದೇನೆ. 2 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸುತ್ತಿದ್ದೇವೆ. 51 ಪಿಎಚ್‍ಸಿ ಕೇಂದ್ರ ನಿರ್ಮಿಸಲಾಗುವುದು. ಅಪ್ಪರ್ ಕೃಷ್ಣ ಯೋಜನೆಯಡಿ 5 ಸಾವಿರ ಕೋಟಿಗಿಂತ ಹೆಚ್ಚು ಅನುದಾನ ನೀಡುತ್ತೇವೆ ಎಂದರು.
ಅಪ್ಪರ್ ಕೃಷ್ಣದಡಿ ಹೆಚ್ಚುವರಿ ನೀರು ಲಭಿಸುವ ವಿಶ್ವಾಸ ಇದೆ. ಈ ಭಾಗದ ಯೋಜನೆಗಳು ಈಡೇರಿಸುವ ಸಂಕಲ್ಪ ನಮ್ಮದು. 5 ಸಾವಿರ ಕೋಟಿ ಅದಕ್ಕಾಗಿ ವಿನಿಯೋಗ ಮಾಡಲಾಗುವುದು. ಮಲ್ಲಾಬಾದ್ ಏತ ನೀರಾವರಿ ಯಾರು ಮಾಡಿದವರು ಸ್ವಾಮಿ? ಹೈಕ ಮತದಿಂದ ಗೆದ್ದು ಅಧಿಕಾರ ಪಡೆದ ಕಾಂಗ್ರೆಸ್ ನವರು ಕಲ್ಯಾಣ ಕರ್ನಾಟಕಕ್ಕಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಈ ಭಾಗದ ಜನರ ನಂಬಿಕೆ, ವಿಶ್ವಾಸ ಇಟ್ಟರೂ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಮರೀಚಿಕೆಯಾಯಿತು. ಕಾಂಗ್ರೆಸ್ ಆಡಳಿತದಲ್ಲಿ ನಂಜುಂಡಪ್ಪ ವರದಿ ದೂಳು ಹಿಡಿದಿತ್ತು. ಅದನ್ನು ಕಸದ ಬುಟ್ಟಿಗೆ ಹಾಕಿದ್ದರು ಎಂದು ಟೀಕಿಸಿದರು.
371 ಜೆ ಬಂದರೂ ಅಭಿವೃದ್ಧಿಯು ಕೇವಲ ಕಾಗದದಲ್ಲೇ ಉಳಿಯಿತು. ಜನ ಮುಗ್ಧರಿದ್ದಾರೆ; ಅವರು ಮತಬ್ಯಾಂಕ್ ಎಂದು ಕಾಂಗ್ರೆಸ್ ಭಾವಿಸಿತ್ತು. ಈಗ ಜನರು ಬುದ್ಧಿವಂತರಾಗಿದ್ದಾರೆ. ಇನ್ನು ಮುಂದೆ ಈ ಭಾಗದ ಜನತೆಗೆ ಕಾಂಗ್ರೆಸ್‍ನವರು ವಿಶ್ವಾಸದ್ರೋಹ ಮಾಡಲು ಅಸಾಧ್ಯ ಎಂದರು.
ಬಿಜೆಪಿ ಈ ಭಾಗದ ಅಭಿವೃದ್ಧಿಗೆ ಬದ್ಧವಾಗಿದೆ. ಕಾಂಗ್ರೆಸ್ ಸರಕಾರವು ಈ ಭಾಗದ ಅಭಿವೃದ್ಧಿಗೆ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಳಿದರು. ಯಾದಗಿರಿಗೆ ಮೆಡಿಕಲ್ ಕಾಲೇಜು ನೀಡಲಿದ್ದೇವೆ. ಕಾಂಗ್ರೆಸ್ ಸರಕಾರ ಯಾಕೆ ಮಾಡಿಲ್ಲ? ಇಚ್ಛಾಶಕ್ತಿ ಇರದುದು ಕಾರಣವಲ್ಲವೇ ಎಂದು ಪ್ರಶ್ನಿಸಿದರು.
ಈ ಭಾಗದ ಜನರ ಋಣದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ, ಅದು ಋಣ ತೀರಿಸಲಿಲ್ಲ. ಬಿಜೆಪಿ ನಿಮ್ಮ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಕಾಂಗ್ರೆಸ್ ಪಕ್ಷದವರ ಸಾಮಾಜಿಕ ನ್ಯಾಯ ಕೇವಲ ಭಾಷಣದಲ್ಲಿತ್ತು. ದಲಿತರು, ಹಿಂದುಳಿದವರ ಕಡೆ ತಿರುಗಿ ನೋಡಲು ಅವರಿಗೆ ಪುರುಸೊತ್ತು ಸಿಗಲಿಲ್ಲ. ಮೀಸಲಾತಿ ಬಗ್ಗೆ ತಲೆ ಕೆಡಿಸಿಕೊಳ್ಳಲೇ ಇಲ್ಲ ಎಂದು ಆಕ್ಷೇಪಿಸಿದರು.
ಬಿಜೆಪಿ, ಮೀಸಲಾತಿ ವಿಚಾರದಲ್ಲಿ ಇಚ್ಛಾಶಕ್ತಿ ಪ್ರದರ್ಶನ ಮಾಡಿದೆ. ಇದೊಂದು ಐತಿಹಾಸಿಕ ತೀರ್ಮಾನ ಎಂದು ವಿವರಿಸಿದರು. ದುಡಿಯುವ ವರ್ಗಕ್ಕೆ ಹೆಚ್ಚಿನ ಅವಕಾಶ ನೀಡಲು ಮತ್ತು ಸ್ವಾವಲಂಬಿ- ಸ್ವಾಭಿಮಾನದ ಜೀವನ ಸಾಗಿಸಲು ಈ ತೀರ್ಮಾನ ಎಂದರು. ಸಾಮಾಜಿಕ ನ್ಯಾಯ ನಮ್ಮ ಧ್ಯೇಯ- ಬದ್ಧತೆ ಎಂದು ತಿಳಿಸಿದರು.
ದೇಶ- ನಾಡಿನ ನಿರ್ಮಾಣಕ್ಕೆ ಶ್ರಮಿಕರ ಕೊಡುಗೆಯೂ ಬೇಕು ಎಂದು ಅವರು ತಿಳಿಸಿದರು. ಕಾಂಗ್ರೆಸ್ ಶಾಸಕರು ಅಭಿವೃದ್ಧಿಯ ಹಣವನ್ನು ನುಂಗಿಹಾಕಿದರು. ಚಾದರ, ದಿಂಬಿನಲ್ಲೂ ಹಣ ನುಂಗಿ ಹಾಕಿದ್ದರು. ಬೆಂಗಳೂರು ನೆಲ, ನೀರಾವರಿ, ಬಂಧುಗಳಿಗೆ ನೌಕರಿ, ಪೊಲೀಸರಿಗೆ ನೌಕರಿ ವಿಷಯದಲ್ಲೂ ಭ್ರಷ್ಟಾಚಾರ ನಡೆಸಿದ್ದರು ಎಂದು ವಿವರಿಸಿದರು.
ಕಾಗಿನೆಲೆ ಅಭಿವೃದ್ಧಿ ಮಾಡಿದ್ದೇವೆ. ಎಸ್‍ಟಿ ಸಮುದಾಯಕ್ಕೆ ನಿಗಮ ಮಾಡಿದ್ದೇವೆ. ವಾಲ್ಮೀಕಿ ಜಯಂತಿ ಆಚರಣೆಗೆ ಸೂಚಿಸಿದ್ದೇವೆ. ನಮ್ಮದು ಮಾತಿನಂತೆ ಕೃತಿಯ ಸರಕಾರ. ಕಾಂಗ್ರೆಸ್‍ನಂತೆ ಕೇವಲ ಮಾತಿನ ಸರಕಾರ ನಮ್ಮದಲ್ಲ ಎಂದು ನುಡಿದರು.
ಕೇಂದ್ರ- ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ಜನಪರ ಕಾರ್ಯಕ್ರಮಗಳನ್ನು ಗಮನಿಸಿ ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು. ರೈತ ವಿದ್ಯಾನಿಧಿ ಆರಂಭಿಸಿದ್ದನ್ನು ವಿವರಿಸಿದ ಅವರು, ರೈತ ಕೂಲಿಕಾರರು, ನೇಕಾರರು, ಮೀನುಗಾರರ ಜನಾಂಗಕ್ಕೂ ಇದನ್ನು ವಿಸ್ತರಿಸಲಾಗಿದೆ ಎಂದರು.
ಎಸ್‍ಸಿ, ಎಸ್‍ಟಿ ಜನಾಂಗಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಕೊಡಲಾಗುತ್ತಿದೆ. ಜಮೀನು ಕೊಳ್ಳಲು ಹಣವನ್ನು ಹೆಚ್ಚಿಸಿದ್ದೇವೆ. 100 ಅಂಬೇಡ್ಕರ್ ಹಾಸ್ಟೆಲ್, 50 ಕನಕದಾಸ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ ಎಂದು ವಿವರಿಸಿದರು. ರಾಯಚೂರಿಗೆ ಏರ್‍ಪೋರ್ಟ್ ಸೇರಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದರು.
ರಾಹುಲ್ ಗಾಂಧಿಗೆ ದೇಶವೂ ಗೊತ್ತಿಲ್ಲ; ಕರ್ನಾಟಕವೂ ಗೊತ್ತಿಲ್ಲ. ಸಿದ್ರಾಮಣ್ಣನವರು ಮಾಡಿದ ಭ್ರಷ್ಟಾಚಾರದ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸುವುದಾಗಿ ಹೇಳಿದ್ದೇನೆ. ರಾಹುಲ್ ಅವರು ಪ್ರಧಾನಿಯಲ್ಲ ಎಂದು ನನಗೆ ಗೊತ್ತಿದೆ. ಸಿದ್ರಾಮಣ್ಣನ ಆಡಳಿತಾವಧಿಯ ಅವ್ಯವಹಾರಗಳ ತನಿಖೆ ನಡೆದಿದೆ. ರಾಹುಲ್ ಗಾಂಧಿ ಇವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೋ ಎಂದು ಕೇಳುತ್ತೇವೆ. ದಾಖಲೆ ಕೊಟ್ಟು ಅವರ ಮೇಲೆ ಕ್ರಮಕ್ಕೆ ಕೋರಲಿದ್ದೇವೆ ಎಂದರು.
ನಾವು ಕುಂಡದ ಗಿಡಗಳಲ್ಲ; ನಾವೂ ಕರ್ನಾಟಕದ ಭೂಮಿಯಲ್ಲಿ ಹೆಮ್ಮರವಾಗಿ ಬೆಳೆದವರು ನಾವು. ಕಾಂಗ್ರೆಸ್ ಸುಳ್ಳನ್ನು ಜನರು ನಂಬುವುದಿಲ್ಲ. ಸ್ವಚ್ಛ- ದಕ್ಷ ಆಡಳಿತ, ಎಲ್ಲ ವರ್ಗಕ್ಕೆ, ಎಲ್ಲ ಪ್ರದೇಶಕ್ಕೂ ನ್ಯಾಯ ಒದಗಿಸಲು ಬಿಜೆಪಿಯನ್ನು ಗೆಲ್ಲಿಸಲು ಸಂಕಲ್ಪ ಮಾಡಿ ಎಂದು ಮನವಿ ಮಾಡಿದರು. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ ಎಂದು ತಿಳಿಸಿದರು. ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
]]>ಬೀದರ್ ಜಿಲ್ಲೆಯ ಔರಾದ್ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯ ಹಗರಣಗಳ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕೊಡಲಿದ್ದೇವೆ. 2016ರ ಶಿಕ್ಷಕರ ನೇಮಕಾತಿ ಹಗರಣ ಸೇರಿ ಎಲ್ಲ ವಿವರ ಕೊಡಲಿದ್ದೇವೆ ಎಂದು ತಿಳಿಸಿದರು. ಅರ್ಜಿ ಹಾಕದೇ ನೇಮಕಾತಿ ನಡೆದಿದೆ ಎಂದು ತಿಳಿಸಿದರು.
ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು. ಎಲ್ಲ ಹಗರಣಗಳನ್ನು ಮುಚ್ಚಿ ಹಾಕಿದ್ದರು. ಇದು ಕಾಂಗ್ರೆಸ್ ಸರಕಾರ ಎಂದು ತಿಳಿಸಿದರು. ನಮ್ಮಲ್ಲಿ ಪಿಎಸ್‍ಐ ನೇಮಕಾತಿ ಆದಾಗ ತಪ್ಪು ಮಾಡಿದ್ದವರನ್ನು ಬಂಧಿಸಿದ್ದೇವೆ. ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರೆ. ಅಬ್ಬರಿಸಿ ಬೊಬ್ಬಿರಿದರೆ ಕೇಳುವವರು ಯಾರಿಲ್ಲ ಎಂದು ಎಚ್ಚರಿಸಿದರು. ಮಾತನಾಡುತ್ತಾರೆ; ಆದರೆ, ಇವರಿಗೆ ದಮ್ಮಿದೆಯೇ ಎಂದು ಕೇಳಿದರು.
ಜನರ ಮೂಲಕ ನಾವೆಲ್ಲರೂ ಆಯ್ಕೆಯಾಗಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. 3 ವರ್ಷಗಳಿಂದ ಬಿಜೆಪಿ ಸರಕಾರವಿದೆ. ಜನಪರ ಆಡಳಿತ ಮತ್ತು ಹತ್ತು ಹಲವಾರು ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಪ್ರವಾಸ- ಕೋವಿಡ್ ನಡುವೆಯೂ ಸತತ ಅಭಿವೃದ್ಧಿಗೆ ಶ್ರಮಿಸಿದ್ದೇವೆ ಎಂದು ಪ್ರಕಟಿಸಿದರು.
ಅತಿವೃಷ್ಟಿ ಸಂಬಂಧ ಪರಿಹಾರವನ್ನು ನಾವು ಹೆಚ್ಚಿಸಿದ್ದೇವೆ. ಮನೆಗಳ ಸಂಬಂಧ ಪರಿಹಾರ ಮೊತ್ತವನ್ನೂ ಹೆಚ್ಚಿಸಿದ್ದು, ಕಾಂಗ್ರೆಸ್ ಸರಕಾರದಲ್ಲಿ ಒಂದರಿಂದ ಒಂದೂವರೆ ವರ್ಷದಲ್ಲಿ ಪರಿಹಾರ ಕೊಡುತ್ತಿತ್ತು. ಈಗ ಕೇವಲ ಒಂದು ತಿಂಗಳಿನಲ್ಲಿ ಪರಿಹಾರ ನೀಡುತ್ತಿದ್ದೇವೆ ಎಂದರು.
ತಾಂಡಾಗಳ ಅಭಿವೃದ್ಧಿ, ಬಡವರಿಗೆ ನೆರವಾಗಿದ್ದೇವೆ. 23 ಸಾವಿರ ತಾಂಡಾಗಳನ್ನು ಗ್ರಾಮಗಳನ್ನಾಗಿ ಆದೇಶ ಮಾಡಲಾಗಿದೆ. ಮನೆಗಳಿಗೆ ಹಕ್ಕಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದು ಹಲವು ದಶಕಗಳ ಬೇಡಿಕೆ ಎಂದರು. ಕಾಂಗ್ರೆಸ್ ಪಕ್ಷವು, ದೀನದಲಿತರ ಹೆಸರಿನಲ್ಲಿ ಅಧಿಕಾರ ಮಾಡಿದರೂ ಈ ಸಮುದಾಯಗಳ ಅಭಿವೃದ್ಧಿ ಆಗಲಿಲ್ಲ ಎಂದು ಟೀಕಿಸಿದರು.
ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎನ್ನಲು ಆತ್ಮಸಾಕ್ಷಿ ಬೇಕಲ್ಲವೇ ಎಂದ ಅವರು, ನಿರ್ಣಯ ತೆಗೆದುಕೊಂಡವರು ಯಾರು ಎಂದು ಪ್ರಶ್ನಿಸಿದರು. ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಟೀಕಿಸಿದರು.
ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದು, ಉಚಿತ ಪಡಿತರ ವಿತರಣೆ ಮಾಡಿದ್ದಲ್ಲದೆ ಕೋವಿಡ್ ನಡುವೆಯೂ ದೇಶ ಸರ್ವತೋಮುಖ ಅಭಿವೃದ್ಧಿ ಸಾಧಿಸಿದ್ದನ್ನು ಅವರು ವಿವರಿಸಿದರು. ರೈತ ಉಳಿದರೆ ದೇಶ ಉಳಿದೀತು ಎಂಬಂತೆ ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಹೇಳಿದರು.
ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ನೀಡಲಿದ್ದೇವೆ. ಅದಕ್ಕಾಗಿ ಕ್ರಿಯಾ ಯೋಜನೆಯನ್ನೂ ಮಾಡಿದ್ದೇವೆ. 14 ಸಾವಿರ ನೇಮಕಾತಿಗೆ ಅನುಮತಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ನೀರಾವರಿ ಯೋಜನೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ ಎಂದರು. ಪ್ರಭು ಚೌಹಾಣ್, ಭಗವಂತ ಖೂಬಾ ಅವರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮೀಸಲಾತಿ ಸೇರಿ ಜನರ ನಿರೀಕ್ಷೆಗೆ ಅನುಗುಣವಾಗಿ ನಾವು ಕೆಲಸ ಮಾಡಿದ್ದೇವೆ. ಬೀದರ್, ರಾಜ್ಯದ ಕಿರೀಟಪ್ರಾಯ ಜಿಲ್ಲೆಯಾಗಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದೇವೆ ಎಂದು ತಿಳಿಸಿದರು. ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧತೆ ತೋರಿದ್ದೇವೆ ಎಂದರು.
ಪ್ರಜಾಪ್ರಭುತ್ವದಲ್ಲಿ ಜನರ ಸಂಕಲ್ಪ ಮತ್ತು ಜನಶಕ್ತಿ ಮುಖ್ಯವಾಗಿದೆ. ನರೇಂದ್ರ ಮೋದಿಜಿ ಅವರ ಸಮರ್ಥ ನೇತೃತ್ವ ನಮ್ಮ ಜೊತೆಗಿದೆ. ಕಾಂಗ್ರೆಸ್ ಪಕ್ಷದ ಕನಸನ್ನು ಕನಸಾಗಿಯೇ ಉಳಿಸಿ, ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರೋಣ ಎಂದು ಮನವಿ ಮಾಡಿದರು.
ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮಾತನಾಡಿ, ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಈ ಭಾಗದ ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು. ಇದಕ್ಕಾಗಿ ಬೊಮ್ಮಾಯಿ ಅವರಿಗೆ ಧನ್ಯವಾದ ಸಮರ್ಪಿಸಿದರು.
ಔರಾದ್ ತಾಲ್ಲೂಕಿನ 36 ಕೋಟಿ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮಂಜೂರಾತಿ ನೀಡಿದ್ದಾರೆ. ಬೀದರ್- ನಾಂದೇಡ್ ರೈಲ್ವೆ ಮಾರ್ಗಕ್ಕೆ ಅನುದಾನದ ಬಗ್ಗೆ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸಂಕಲ್ಪ ಯಾತ್ರೆಯು ಸಂಚಲನ ಉಂಟು ಮಾಡಿದೆ ಎಂದರು.
ಕಾಂಗ್ರೆಸ್ ಪಕ್ಷದ ಶಾಸಕರು ಜಿಲ್ಲೆಯ ರೈತರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಜಿಲ್ಲೆಯಲ್ಲಿ 5ರಿಂದ 6 ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಗೆಲ್ಲಿಸಿಕೊಡಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಮೋದಿಜಿ ಮತ್ತು ಬೊಮ್ಮಾಯಿಯವರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ರಾಜ್ಯದ ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಈ ಭಾಗದ ನೀರಾವರಿಗೆ ಬಿಜೆಪಿ ಸರಕಾರ ಆದ್ಯತೆ ಕೊಟ್ಟಿದೆ ಎಂದು ತಿಳಿಸಿದರು. ಮೋದಿಜಿ, ಬೊಮ್ಮಾಯಿಯವರ ಸರಕಾರ ಮಾಡಿದ ಜನೋಪಯೋಗಿ ಕಾರ್ಯಗಳನ್ನು ವಿವರಿಸಿದರು.
ಕಾಂಗ್ರೆಸ್ ಪಕ್ಷದ ಜೋಡೋ ಯಾತ್ರೆ ಕೇವಲ ನಾಟಕವಷ್ಟೇ ಎಂದು ಟೀಕಿಸಿದರು. ಇದು ಕೇವಲ ಹಾಸ್ಯಾಸ್ಪದ ಎಂದು ಆಕ್ಷೇಪಿಸಿದರು. ಜನರು ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕರಿಸಲು ಮುಂದಾಗಿದ್ದಾರೆ ಎಂದರು. ಬಿಜೆಪಿ ಗೆಲುವಿಗೆ ಶ್ರಮಿಸಲು ವಿನಂತಿಸಿದರು.
ರಾಜ್ಯದ ಸಚಿವರಾದ ಪ್ರಭು ಚೌಹಾಣ್, ಬೈರತಿ ಬಸವರಾಜ್, ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
]]>ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ ಮಾಡಿಲ್ಲ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದವರು ದೀನ ದಲಿತರು ಮತ್ತು ಎಸ್‍ಸಿ, ಎಸ್ಟಿ ಸಮುದಾಯದವರ ವಿರೋಧಿಗಳು ಎಂದು ಆಕ್ಷೇಪಿಸಿದರು.
ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. ರೈತ ಕೃಷಿ ಕೂಲಿಕಾರರು ಸೇರಿ ಅನೇಕ ಸಮುದಾಯಗಳಿಗೆ ಇದನ್ನು ವಿಸ್ತರಿಸಲಾಗಿದೆ. ಉದ್ಯೋಗ ಹೆಚ್ಚಳಕ್ಕೆ ನಾವು ಆದ್ಯತೆ ಕೊಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ, 5 ಲಕ್ಷ ಯುವಕರಿಗೆ ಕೆಲಸ ಸಿಗುವಂತೆ ಮಾಡುತ್ತಿದ್ದೇವೆ ಎಂದು ವಿವರಿಸಿದ ಅವರು, ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯವು ಕೇವಲ ಭಾಷಣದ ಸರಕಾಗಿತ್ತು ಹಾಗೂ ಮತಬ್ಯಾಂಕ್ ಮಾಡಲು ಇದನ್ನು ಬಳಸಲಾಗುತ್ತಿತ್ತು ಎಂದು ಆಕ್ಷೇಪಿಸಿದರು. ಕನಕದಾಸರ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರಕಾರ ಅನುದಾನ ಕೊಟ್ಟಿದೆ ಎಂದರು.
ಸೋನಿಯಾ ಗಾಂಧಿ ಅವರಿಗೆ ಬಳ್ಳಾರಿ ಕ್ಷೇತ್ರವು ರಾಜಕೀಯವಾಗಿ ಮರುಜನ್ಮ ಕೊಟ್ಟಿತ್ತು. ಆಗ ಕಾಂಗ್ರೆಸ್ ಸರಕಾರವು ಈ ಭಾಗಕ್ಕೆ ಸಾವಿರಾರು ಕೋಟಿ ಅನುದಾನದ ಭರವಸೆ ಕೊಟ್ಟಿತ್ತು. ಆದರೆ, ಅದನ್ನು ಈಡೇರಿಸಲಿಲ್ಲ ಎಂದು ವಿವರಿಸಿದರು. ಈಗ ಮತ್ಯಾಕೆ ಬಂದಿದ್ದೀರಿ? ಏನು ಸುಳ್ಳು ಹೇಳಲು ಬಂದಿದ್ದೀರಿ? ಎಂದು ಪ್ರಶ್ನಿಸಿದರು. ನಾವೆಲ್ಲರೂ ಜಾಗೃತರಾಗಿದ್ದೇವೆ. ನಿಮ್ಮ ಸುಳ್ಳನ್ನು ನಂಬುವುದಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ಸಿಗರಿಗೆ ರವಾನಿಸಿ ಎಂದು ಜನರಲ್ಲಿ ಮನವಿ ಮಾಡಿದರು.
ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡಿತ್ತು. ಕಾಂಗ್ರೆಸ್ ನಾಯಕರು ಕರ್ನಾಟಕವನ್ನು ಪೇಟಿಎಂ ಮಾಡಿಕೊಂಡಿದ್ದರು. ಅದೇ ಸಂಬಂಧ ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷರು ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ನೋಡಿದರೆ ಕನಿಕರ ಎನಿಸುತ್ತದೆ; ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದ ಜನರು ಜಾಗೃತರಾಗಿದ್ದಾರೆ. ನಿಮ್ಮ ಹಳೆಯ ನಾಟಕಗಳನ್ನು ಕರ್ನಾಟಕದ ಜನರು ನಂಬುವುದಿಲ್ಲ. ನುಡಿದಂತೆ ನಡೆದವರಿಗೆ ಮಾತ್ರ ಅವಕಾಶ ಸಿಗಲಿದೆ. ಈ ಭಾಗ್ಯ ಆ ಭಾಗ್ಯ ಎಂದು ತಿಳಿಸಿದರೂ ನಿಮ್ಮನ್ನು ಜನರು ಯಾಕೆ ಮನೆಗೆ ಕಳಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಿಗೆ ಪ್ರಶ್ನೆ ಹಾಕಿದರು.
ಅನ್ನ ಭಾಗ್ಯದಲ್ಲಿ ಕನ್ನ ಭಾಗ್ಯ ಇತ್ತು. ಎಸ್‍ಸಿ, ಎಸ್‍ಟಿ ಜನಾಂಗದವರಿಗೆ ಬೋರ್‍ವೆಲ್ ವಿಚಾರದಲ್ಲೂ ಹಗರಣ ಮಾಡಿದ್ದೀರಿ. ಕಾಂಗ್ರೆಸ್ ತಪ್ಪು ಲೆಕ್ಕಾಚಾರ- ಭ್ರಷ್ಟಾಚಾರದಿಂದ ಕರ್ನಾಟಕದ ಅಭಿವೃದ್ಧಿಗೆ ಹಿನ್ನಡೆ ಆಗಿತ್ತು ಎಂದು ತಿಳಿಸಿದರು. ಇಲ್ಲಿನ ಜನಸ್ತೋಮ ನೋಡಿದಾಗ ಇಲ್ಲಿ ಕಮಲದ ಹೂವು ಅರಳುವುದು ಖಚಿತ ಎಂದು ವಿಶ್ವಾಸವಾಗಿದೆ ಎಂದು ನುಡಿದರು. ಒಗ್ಗಟ್ಟಿನಿಂದ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ನಮ್ಮ ನಾಯಕರಾದ ಯಡಿಯೂರಪ್ಪ ಅವರ ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದರು. 100 ಕೋಟಿ ರೂಪಾಯಿ ಅನುದಾನ ಕೊಟ್ಟರು. ನಾನು ಈ ನಿಗಮಕ್ಕೆ ಈ ಬಾರಿ 100 ಕೋಟಿ ನೀಡಲಿದ್ದೇನೆ ಎಂದು ತಿಳಿಸಿದರು. ಎಸ್‍ಸಿ, ಎಸ್‍ಟಿ ಸಮುದಾಯಗಳ ಅಭಿವೃದ್ಧಿಗೆ 28 ಸಾವಿರ ಕೋಟಿ ಅನುದಾನವನ್ನು ಕೊಡಲಾಗಿದೆ ಎಂದು ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆಗೆ 6 ಸಾವಿರ ಕೋಟಿ ಕೊಡಲಾಗಿದೆ ಎಂದರು.
ಹೂವಿನಹಡಗಲಿಯ ಜನರು ಹೂವಿನಂಥವರು ಎಂದು ಮೆಚ್ಚುಗೆ ಸೂಚಿಸಿದರು. ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಹೆಚ್ಚಿನ ಮಹತ್ವ ನೀಡಿದ್ದರಿಂದ ಇಲ್ಲಿನ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ವಕಾಶ ಲಭಿಸಿದೆ. ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ಬಿಜೆಪಿ ನೀಡಿದೆ ಎಂದು ವಿವರಿಸಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ.ಅರುಣಾ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
]]>ಸೂಕ್ತ ತಪಾಸಣೆ, ಪ್ರಯೋಗಾಲಯ, ಚಿಕಿತ್ಸೆ ಮತ್ತು ಔಷಧಿಗಳು ಉಚಿತವಾಗಿ ಇಲ್ಲವೇ ಕೈಗೆಟುಕುವ ದರದಲ್ಲಿ ಒಂದೇ ಕಡೆ ಲಭ್ಯವಾಗುವಂತಹ ‘ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ವು (ಸಿಯುಪಿಎಚ್‌ಸಿ) ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಇಡೀ ದೇಶದಲ್ಲೇ ವಿನೂತನವಾಗಿರುವ ಈ ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬವಾದ ಶನಿವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪ್ರಪ್ರಥಮವಾಗಿ ಬಿಬಿಎಂಪಿ ಮತ್ತು ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸ್ ಸಹಯೋಗದಲ್ಲಿ ಈ ವಿನೂತನ ಮತ್ತು ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗಿದೆ. ಇದಕ್ಕೆ ಹಲವು ಸಾರ್ವಜನಿಕರು ಕೂಡ ದೇಣಿಗೆ ನೀಡಿದ್ದಾರೆ. ಇಲ್ಲಿ ಪ್ರಯೋಗಾಲಯ, ಡಿಜಿಟಲ್ ಎಕ್ಸ್‌ರೇ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಪಿಎಫ್‌ಟಿ ಮತ್ತು ಇಸಿಜಿ ಸೌಲಭ್ಯಗಳು ಸಿಗುತ್ತವೆ. ಇದಲ್ಲದೆ, ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆ ಇಲ್ಲದಂತಹ ಕಣ್ಣಿನ ಪರೀಕ್ಷೆ, ದಂತ ಪರೀಕ್ಷೆ, ತುರ್ತು ಚಿಕಿತ್ಸಾ ಘಟಕ, ಫಿಸಿಯೋಥೆರಪಿ, ಪ್ರಧಾನಮಂತ್ರಿಗಳ ಜನೌಷಧ ಕೇಂದ್ರ ಎಲ್ಲವೂ ಇಲ್ಲಿ ಲಭ್ಯವಿರಲಿದ್ದು, ಒಳರೋಗಿಗಳ ವಿಭಾಗವೂ ಇದೆ. ಅಲ್ಲದೆ ಆಸ್ಪತ್ರೆಯಲ್ಲಿ ಇಎಂಆರ್ (ಎಲೆಕ್ಟ್ರಾನಿಕ್ ಮೆಡಿಕಲ್ ರೆಕಾರ್ಡ್) ವ್ಯವಸ್ಥೆಯೂ ಇದೆ.
ಆಸ್ಪತ್ರೆಗೆ ಬರುವವರಿಗೆ ಹೆಚ್ಚಿನ ಚಿಕಿತ್ಸೆ ಬೇಕಿದ್ದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯ ಒದಗಿಸಲಾಗುವುದು. ಇಲ್ಲಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ ಸಹಿತ ಆಕ್ಸಿಜನ್ ಜನರೇಟರ್ ಸೌಲಭ್ಯವನ್ನೂ ಅಳವಡಿಸಿಕೊಳ್ಳಲಾಗಿದೆ. ಹಾಗೆಯೇ ಪರಿಣತ ವೈದ್ಯರು ಹೊರರೋಗಿಗಳ ವಿಭಾಗದಲ್ಲಿ ನೆರವು ನೀಡಲಿದ್ದಾರೆ. ಬಿಬಿಎಂಪಿ ಮತ್ತು ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಗಳಡಿ ಈ ಆಸ್ಪತ್ರೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಬ್ಬ ವೈದ್ಯರು ರಜೆಯ ಮೇಲಿದ್ದಾಗ ಮತ್ತೊಬ್ಬ ವೈದ್ಯರು ಕರ್ತವ್ಯದ ಮೇಲಿರುತ್ತಾರೆ. ಯುನೈಟೆಡ್ ವೇ ಎನ್ನುವ ಕಂಪನಿಯವರು ಈ ಆಸ್ಪತ್ರೆಗೆ ಬೇಕಾದ ಉಪಕರಣಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ.
ದಂತ ಪರೀಕ್ಷೆ, ಕಣ್ಣಿನ ಪರೀಕ್ಷೆ, ಹೃದ್ರೋಗ ಪರೀಕ್ಷೆ, ಡಿಜಿಟಲ್ ಎಕ್ಸ್‌ರೇ, ಪ್ರಯೋಗಾಲಯಗಳು, ಮಲ, ಮೂತ್ರ, ರಕ್ತ ಮತ್ತು ಕಫ ಪರೀಕ್ಷೆ, ಪಿಎಫ್‌ಟಿ ಪರೀಕ್ಷೆ ಫಿಸಿಯೋಥೆರಪಿ, ತುರ್ತು ಚಿಕಿತ್ಸಾ ಸೌಲಭ್ಯ, ಹೊರರೋಗಿಗಳ ವಿಭಾಗ, ಒಳರೋಗಿಗಳ ವಿಭಾಗ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಇಸಿಜಿ, ವೈದ್ಯಕೀಯ ಪೈಪ್‌ಲೈನ್ ಸಹಿತ ಆಕ್ಸಿಜನ್ ಜನರೇಟರ್ ಮತ್ತು ಜನೌಷಧಿ ಕೇಂದ್ರ ಹಾಗೂ ತಜ್ಞ ವೈದ್ಯರ ಲಭ್ಯತೆ. ಮಲ್ಲೇಶ್ವರಂ ಶಾಸಕ , ಸಚಿವರೂ ಆದ ಡಾ.ಸಿಎನ್ ಅಶ್ವಥನಾರಾಯಣ್ ಅವರ ಒತ್ತಾಸೆ, ಕಾಳಜಿಯಿಂದ ಈ ಯೋಜನೆ ಜಾರಿಗೆ ಬಂದಿದೆ.
]]>ಪಕ್ಷವನ್ನು ಸದೃಢಗೊಳಿಸುವುದು ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ದೃಷ್ಟಿಯಿಂದ ನಾಲ್ಕು ತಂಡಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯುತ್ತಿದೆ ಎಂದು ಮುಖಂಡರು ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಅವರು ಮನವಿ ಮಾಡಿದರು.
ಕೇಂದ್ರಮಂತ್ರಿಗಳಾದ ಭಗವಂತ ಖೂಬಾ ರಾಜ್ಯಸಚಿವರಾದ ಹಾಲಪ್ಪ ಆಚಾರ್ ಮುರುಗೇಶ್ ನಿರಾಣಿ ಸಂಸದರಗಳಾದ ಕರಡಿ ಸಂಗಣ್ಣ ಪ್ರತಾಪ್ ಸಿಂಹ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.
]]>ಅವರು ಇಂದು ಇಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕೆ.ಆರ್.ವೃತ್ತದಲ್ಲಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ಹಾಗೂ ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಿರುವ 160ಅಡಿ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪಿರಮಿಡ್ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ನಮ್ಮ ಆರ್ಥಿಕತೆಯನ್ನು ಬೆಳೆಸುವ ಮೂಲ ಪುರುಷರು ಹಾಗೂ ತಾಯಂದಿರು. ವಿಶ್ವೇಶ್ವರಯ್ಯ ಅವರು ಈ ವರ್ಗದವರನ್ನು ಪ್ರತಿನಿಧಿಸುತ್ತಾರೆ. ವಿಶ್ವೇಶ್ವರಯ್ಯ ಅವರ ಸಾಧನೆ ಅಪಾರ. ಕೆ.ಆರ್.ಎಸ್. ಅಣೆಕಟ್ಟಿನಿಂದ ಹಿಡಿದು ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳ ನಿರ್ಮಾಣ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಹಲವಾರು ಕಾರ್ಖಾನೆಗಳು, ಮಹಿಳೆಯರಿಗೆ ಮೀಸಲಾತಿ, ಮುಂತಾದ ಕ್ರಮಗಳ ಮೂಲಕ ಅತ್ಯಂತ ಪ್ರಗತಿಪರ ಚಿಂತನೆಗಳಿಂದ ಅವರು ನಾಡು ಕಟ್ಟಿದ್ದಾರೆ. ಅಂಥ ವ್ಯಕ್ತಿಗೆ ನಮನ ಸಲ್ಲಿಸುವ ದಿನವಿದು. ನಾವೂ ಸಹ ಅವರ ಹಾದಿಯಲ್ಲಿ ನಡೆದು, ಅವರಂತೆ ನಾಡು ಕಟ್ಟಲು ಸಣ್ಣ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನವೆಂದು ನಾನು ಭಾವಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆ.ಆರ್. ವೃತ್ತದಲ್ಲಿ ವಿಶ್ವೇಶ್ವರಯ್ಯ ಪ್ಲಾಜಾ ಕಟ್ಟಲಾಗಿದೆ. ಇಲ್ಲಿ ಮಿನಿ ಗ್ರಂಥಾಲಯ ಇದೆ. ಸಾರ್ವಜನಿಕರು ಇಲ್ಲಿ ಕುಳಿತುಕೊಂಡು ಓದಬಹುದು. ಇದೇ ರೀತಿ 30 ಜಂಕ್ಷನ್ ಗಳನ್ನು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ತೀರ್ಮಾನಿಸಿದೆ. ಬೆಂಗಳೂರನ್ನು ಅಂದವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
160 ಅಡಿ ನೀರಿನ ಕಾರಂಜಿಯನ್ನು ಇದೇ ಸಂದರ್ಭದಲ್ಲಿ ಸಿಎಂ ಉದ್ಘಾಟಿಸಿದರು.
ವಿಶ್ವೇಶ್ವರಯ್ಯ ಅವರ ವಿದ್ಯುತ್ ಉತ್ಪಾದನೆ, ಶಿಕ್ಷಣ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಮರಿಸಿದರು.
ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ರಿಜ್ವಾನ್ ಅರ್ಷದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
]]>ಬೆಂಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬೆಂಗಳೂರು – ಕೋಲಾರ ಮಧ್ಯ ಭಾಗದಲ್ಲಿ ಹಾರ್ಡವೇರ್ ಪಾರ್ಕ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ದಿನಗಳ ದೆಹಲಿ ಪ್ರವಾಸ ಫಲಪ್ರದವಾಗಿದೆ ಎಂದರು.
ಕೇಂದ್ರ ಐಟಿ-ಬಿಟಿ ಮತ್ತು ಕೌಶಲ್ಯ ಅಭಿವೃದ್ಧಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ಚರ್ಚೆ ಮಾಡಿದ್ದೇನೆ. ಈ ಯೋಜನೆ ಜಾರಿಗೆ ಅವರು ಆಸಕ್ತಿ ತೋರಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್ ಸೌಲಭ್ಯ ಹಾಗೂ ಆಪ್ಟಿಕಲ್ ಫೈಬರ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಮಾತುಕತೆ ನಡೆಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಈ ಕುರಿತಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಚರ್ಚೆ ನಡೆಸಿ ಮುಂದುವರೆಯಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಸ್ಕಿಲ್ ಯುನಿವರ್ಸಿಟಿ ಪ್ರಾರಂಭ ಮಾಡುವ ಉದ್ದೇಶವನ್ನು ಕೇಂದ್ರ ಸಚಿವರು ಹೊಂದಿದ್ದಾರೆ. ಎಲ್ಲರೂ ಸೇರಿ ಈ ಕುರಿತಾಗಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸೆಟಲೈಟ್ ಟೌನ್ ರಿಂಗ್ ರೋಡ್ (ದಾಬಸ್ ಪೇಟೆಯಿಂದ ಮೈಸೂರು ರೋಡ್ ವರೆಗೂ) ನಿರ್ಮಾಣ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸದ್ಯ ಕೆಲ ತಿಂಗಳಲ್ಲಿ ಕೆಲಸ ಆರಂಭವಾಗಲಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ವಿಜಯಪುರ- ಸಂಕೇಶ್ವರ್ ಹೈವೇ ಡಿಪಿಆರ್ ಆಗುತ್ತಿದ್ದು, ಎರಡನೇ ಹಂತದ ಭಾರತ ಮಾಲಾದ ಅಡಿಯಲ್ಲಿ ಇನ್ನೂ 5 ರಸ್ತೆ ಕಾಮಗಾರಿ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಅವರು ತಿಳಿಸಿದರು.
ಶಿರಾಡಿ ಘಾಟ್ 4 ಪಥದ ರಸ್ತೆ ಬಗ್ಗೆ ಚರ್ಚೆ ನಡೆದಿದೆ. ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಸಂಬಂಧಪಟ್ಟಂತೆ ರೂ.400 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಇನ್ನು ರೂ.1500 ಕೋಟಿ ಹಣ ಬಿಡುಗಡೆ ಆಗಬೇಕಿದೆ ಎಂದು ಹೇಳಿದರು.
ರೈಲ್ವೆ ಕಾಮಗಾರಿಗಳಿಗೆ ವೇಗ
ಇದೇ ಸಮಯದಲ್ಲಿ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು ಸಬರ್ಬನ್ ಹಾಗೂ ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣ ಕಾರ್ಯ ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ತಿಳಿಸಿದೆ. ಇದಲ್ಲದೆ ರಾಜ್ಯದ ಪ್ರಮುಖ ರೈಲ್ವೆ ಮಾರ್ಗಗಗಳಾದ ತುಮಕೂರಿನಿಂದ – ದಾವಣಗೆರೆ, ಹುಬ್ಬಳ್ಳಿ ಯಿಂದ ಬೆಳಗಾವಿ, ಬೀದರ್-ಗುಲ್ಬರ್ಗ ಕಾರ್ಯ ಆರಂಭ ಮಾಡಬೇಕು ಎಂದು ಕೇಳಿಕೊಳ್ಳಲಾಗಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ನಬಾರ್ಡ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ಆಗಿದೆ. ಜಿಎಸ್ ಟಿ ಪರಿಹಾರವನ್ನು ಮುಂದುವರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
]]>
ಮೋರ್ಚಾದ ರಾಜ್ಯಾಧ್ಯಕ್ಷರಾದ ತಿಪ್ಪರಾಜು ಹವಾಲ್ದಾರ್ ಅವರು ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಎಸ್.ಟಿ. ಸಮುದಾಯಗಳ ಜನಸಂಖ್ಯೆ ಸುಮಾರು 75 ಲಕ್ಷಕ್ಕೂ ಅಧಿಕವಿದ್ದು ನಮ್ಮ ಸಮುದಾಯಕ್ಕೆ ಶೇ 3 ಮೀಸಲಾತಿ ನಿಗದಿಯಾಗಿದೆ. ಸಂವಿಧಾನದ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕಾದ ಪ್ರಮಾಣಕ್ಕಿಂತ ಇದು ಕಡಿಮೆ ಇರುತ್ತದೆ. ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸುವ ಕುರಿತು ಸಮುದಾಯದಿಂದ ರಾಜ್ಯಾದ್ಯಂತ ಬೇಡಿಕೆ ಹಾಗೂ ಹೋರಾಟ ಮಾಡಿದ್ದರಿಂದ ಅಂದು ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ನ್ಯಾಯಮೂರ್ತಿ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ್ದರು ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.
ಸದರಿ ನ್ಯಾಯಮೂರ್ತಿಗಳು ಸಲ್ಲಿಸಿರುವ ವರದಿಯು ಸರ್ಕಾರದ ಪರಿಶೀಲನೆ ಹಂತದಲ್ಲಿದೆ. ತಾವು ಈ ಸಮುದಾಯದ ಬಹುದಿನಗಳ ಬೇಡಿಕೆಯನ್ನು ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ಈ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕಾಗಿ ಮನವಿ ಕೋರಿದೆ.
ತಾವು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಪ್ರತ್ಯೇಕವಾಗಿ ಸಚಿವಾಲಯವನ್ನು ಘೋಷಣೆ ಮಾಡಿದ್ದು, ಇದರಿಂದ ಬಹುದಿನಗಳ ಈ ಸಮುದಾಯದ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ತಿಪ್ಪರಾಜು ಹವಾಲ್ದಾರ್ ಅವರು ಇನ್ನೊಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದರಿಂದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಹಾಯ ಮಾಡಿದಂತಾಗಿದೆ. ಅದಕ್ಕಾಗಿ ಈ ನಾಡಿನ ಸಮಗ್ರ ಎಸ್.ಟಿ. ಸಮುದಾಯಗಳ ಪರವಾಗಿ ಹಾಗೂ ರಾಜ್ಯ ಎಸ್.ಟಿ.ಮೋರ್ಚಾದ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ಈ ಸಮುದಾಯದ ಇನ್ನೊಂದು ಪ್ರಮುಖ ಬೇಡಿಕೆಯಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಆದಿಕವಿ ಶ್ರೀ ವಾಲ್ಮೀಕಿ ಅಧ್ಯಯನ ಪೀಠವನ್ನು ಪ್ರಾರಂಭಿಸಿದ್ದೀರಿ. ಇದರಿಂದ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಬದುಕಿನ ಅಧ್ಯಯನಕ್ಕೆ ಚಾಲನೆ ಲಭಿಸಿದೆ. ಜಗತ್ತಿನ ಮೊದಲ ಬೃಹತ್ ಆದಿ ಕಾವ್ಯವನ್ನು ರಚಿಸಿದ ಮಹಾನ್ ಮಹರ್ಷಿಗೆ ಗೌರವ ತೋರಿದ್ದೀರಿ. ಅದಕ್ಕಾಗಿ ಈ ನಾಡಿನ ಸಮಗ್ರ ವಾಲ್ಮೀಕಿ ಸಮುದಾಯಗಳ ಪರವಾಗಿ ಹಾಗೂ ರಾಜ್ಯ ಎಸ್.ಟಿ. ಮೋರ್ಚಾದ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಅವರು ತಿಳಿಸಿದ್ದಾರೆ.
ಎಸ್.ಟಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಓಲೆಕಾರ, ನರಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿಗಳಾದ ಮಹಾಂತೇಶ ನಾಯಕ, ಪದಾಧಿಕಾರಿಗಳಾದ ವಿಕ್ರಮ್ ಗಂಗಾಧರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
]]>ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ ಹೇಳಿದರು.
ಅಂಕಿತ ಅವರು ಮಡಿಕೇರಿ ಮೂಲದವರು. ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ. ಹಲವಾರು ವರ್ಷಗಳ ಬಳಿಕ ಓಲಂಪಿಕ್ ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಭೂತಪೂರ್ವ ಅಮೋಘ ಸಾಧನೆ ಮಾಡಿದೆ. ಒಟ್ಟು ಮೂರು ಜನ ಕೋಚ್ ಗಳ ಪೈಕಿ ಅಂಕಿತಾ ಒಬ್ಬರು. ಅವರು ಕನ್ನಡಿಗರು ಅಂಬುದು ಶ್ಲಾಘನೀಯ ಮತ್ತು ಹೆಮ್ಮೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟರು.
]]>