og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಬೀದರ್ನಲ್ಲಿ ಇಂದು ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ ಫಾರ್ಮ ಪಾರ್ಕ್ ಅನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಜಮೀನು ಹೊರತುಪಡಿಸಿ ಇತರ ಮೂಲಸೌಕರ್ಯಕ್ಕೆ ಒಂದು ಸಾವಿರ ಕೋಟಿ ರೂಪಾಯಿ ಹೂಡಿಕೆ ಇರುವ ಯೋಜನೆ ಇದಾಗಿದೆ. ರಾಜ್ಯ ಸರಕಾರ ಜಮೀನು ನೀಡಬೇಕಾಗುವುದು. ಹೂಡಿಕೆದಾರರಿಗೆ ರಾಜ್ಯ ಸರಕಾರದಿಂದ ಕಡಿಮೆ ದರದಲ್ಲಿ ವಿದ್ಯುತ್, ನೀರು, ಜಮೀನು, ಟ್ರೀಟ್‍ಮೆಂಟ್ ಪ್ಲಾಂಟ್ ನೀಡಬೇಕಾಗುತ್ತದೆ. ಬಹುತೇಕ ನಮ್ಮ ರಾಜ್ಯಕ್ಕೆ ಇದು ಸಿಗುವ ಅವಕಾಶವಿದೆ ಎಂದರು.
ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಮಂಗಳೂರು ಮತ್ತು ಯಾದಗಿರಿಯಿಂದ ಪ್ರಸ್ತಾವನೆ ಬಂದಿದೆ. ಕೆಮಿಕಲ್ ಇಂಡಸ್ಟ್ರಿಗಳಿರುವ ಕಾರಣ ಮಂಗಳೂರಿನಲ್ಲಿ ಇದು ಸ್ಥಾಪನೆ ಆಗುವ ಸಾಧ್ಯತೆ ಹೆಚ್ಚು. ಮೂಲಸೌಕರ್ಯಕ್ಕೆ 100 ಕೋಟಿ ಹೂಡಿಕೆ ಇರುತ್ತದೆ ಎಂದು ತಿಳಿಸಿದರು.ರಾಜ್ಯ ಸರಕಾರ ಹೆಚ್ಚು ಮುತುವರ್ಜಿ – ಹಣದ ಸಹಕಾರ ವಹಿಸಿದಾಗ ಯೋಜನೆ ಸಿಗಲು ಸಾಧ್ಯವಾಗುತ್ತದೆ. ಬೀದರ್ ಜಿಲ್ಲೆಗೆ ಬರಬೇಕಿದ್ದ ಯೋಜನೆಗಳು ಹಿಂದೆ ಕಾಂಗ್ರೆಸ್ ರಾಜ್ಯ ಸರಕಾರದ ಅಸಹಕಾರ, ಜಮೀನು ಸಿಗದ ಕಾರಣದಿಂದ ಅನುಷ್ಠಾನಗೊಂಡಿರಲಿಲ್ಲ ಎಂದು ಅವರು ವಿವರಿಸಿದರು. ಈಗ ಕೇಂದ್ರ- ರಾಜ್ಯ ಸರಕಾರಗಳೆರಡೂ ಬಿಜೆಪಿಯದ್ದೇ ಇವೆ. ಆದ್ದರಿಂದ ಸಮಸ್ಯೆ ಆಗಲಾರದು ಎಂದರು.
ಪ್ರಧಾನಿಯವರ ಜನಪ್ರಿಯತೆ ಹೆಚ್ಚಳದ ಆತಂಕದಿಂದ ಬಿಜೆಪಿಯೇತರ ರಾಜ್ಯ ಸರಕಾರಗಳು ಕಡಿಮೆ ಬೆಲೆಯ ಔಷಧಿ ನೀಡುವ ಜನೌಷಧಿ ಕೇಂದ್ರಗಳನ್ನು ತೆರೆದಿಲ್ಲ. ಅಂಥ ರಾಜ್ಯಗಳಲ್ಲಿ ತಮ್ಮ ಖಾತೆ ವತಿಯಿಂದ ಜನೌಷಧಿ ಕೇಂದ್ರಗಳನ್ನು ತೆರೆದು ವಹಿವಾಟು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.
ಬೀದರ್‍ನಲ್ಲಿ ಮುನ್ಸಿಪಾಲಿಟಿ ಜೊತೆ ಸಹಭಾಗಿತ್ವದಲ್ಲಿ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಯಾರಾದರೂ ಹೂಡಿಕೆದಾರರು ಮುಂದಾದರೆ ಅವಕಾಶ ನೀಡಲಾಗುವುದು ಎಂದರು. ಒಂದು ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ 3.75 ಕೋಟಿಯಿಂದ 4 ಕೋಟಿ ಹೂಡಿಕೆ ಅಗತ್ಯವಿದೆ. ರಾಜಸ್ಥಾನ, ಗುಜರಾತ್ ರಾಜ್ಯಗಳಲ್ಲಿ 4ರಿಂದ 5 ಹೂಡಿಕೆದಾರರು ಖಾಸಗಿ- ಸಾರ್ವಜನಿಕ ರಂಗದ ಸಹಭಾಗಿತ್ವದಡಿ ವಿದ್ಯುತ್ ಉತ್ಪಾದನೆಗೆ ಉತ್ಸಾಹ ತೋರುತ್ತಿದ್ದಾರೆ ಎಂದು ವಿವರಿಸಿದರು.
ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ನೆರವು ಪಡೆಯಲಾಗುವುದು ಎಂದ ಅವರು, ಈ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದ ಸಚಿವನಾಗಿ ಗರಿಷ್ಠ ಪ್ರಯತ್ನ ಮಾಡಲಿದ್ದೇನೆ ಎಂದು ತಿಳಿಸಿದರು.
ಜಿಲ್ಲೆಯ ಆರು ಶಾಸಕರು ಪಕ್ಷಭೇದ ಮರೆತು ಜಿಲ್ಲೆಗೆ ಅವಶ್ಯಕ ಯೋಜನೆಗಳ ಜಾರಿಗೆ ಶ್ರಮಿಸಬೇಕಿದೆ. ರಾಜಕಾರಣ ಮಾಡಲು ಹತ್ತಾರು ವಿಷಯ ಇರುತ್ತದೆ. ಆದರೆ, ಅಭಿವೃದ್ಧಿ ಯೋಜನೆ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಕಿವಿಮಾತು ಹೇಳಿದರು. ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಹಿರೇಮನಿ, ವಿಭಾಗ ಸಹಪ್ರಭಾರಿಗಳಾದ ಶ್ರೀ ಈಶ್ವರ್ ಸಿಂಗ್ ಠಾಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಹೊಕ್ರಾಣೆ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
]]>ಪಕ್ಷವು ನನಗೆ ಈಗ ಹೆಚ್ಚಿನ ಜವಾಬ್ದಾರಿ ನೀಡಿದೆ. ಆದ್ದರಿಂದ ಪಕ್ಷಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ನಮನ ಸಲ್ಲಿಸಿದ್ದಾಗಿ ಅವರು ಭಾವಪೂರ್ಣರಾಗಿ ನುಡಿದರು. ಬಳಿಕ ಅವರು ಕಾರ್ಯಾಲಯದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.
]]>ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಫ್ಕೋ ಕಂಪೆನಿಯು ಕರ್ನಾಟಕದಲ್ಲಿ ನ್ಯಾನೊ ಯೂರಿಯಾ ಉತ್ಪಾದನಾ ಘಟಕ ಆರಂಭಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ರಾಜ್ಯ ಸರಕಾರವು ಮೂಲಸೌಕರ್ಯ ನೀಡಿದ ಬಳಿಕ ಅದು ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.
ಜುಲೈ 7ರಂದು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವನಾಗಲು ಅವಕಾಶ ನೀಡಿದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷಕ್ಕೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು. ಕಳೆದ 22 ವರ್ಷಗಳಿಂದ ಪಕ್ಷದಲ್ಲಿ ದುಡಿದಿದ್ದೇನೆ. ಅದಕ್ಕಿಂತ ಮೊದಲು ಸಂಘ ಪರಿವಾರದಲ್ಲಿ ಕೆಲಸ ಮಾಡಿದ್ದೇನೆ. ಪಕ್ಷದಲ್ಲೂ ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗ ಹೊಸ ಜವಾಬ್ದಾರಿ ಸಿಕ್ಕಿದ್ದು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದರು.
ಕೇಂದ್ರ ಸರಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 7 ವರ್ಷಗಳ ಅಧಿಕಾರಾವಧಿಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಮಾಡಿದೆ. ಭಾರತದ ಹೆಮ್ಮೆ, ಗರಿಮೆ ವಿಶ್ವಮಾನ್ಯವಾಗಿ ಹೊರಹೊಮ್ಮುತ್ತಿದೆ ಎಂದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನೇತೃತ್ವವನ್ನು ನಮ್ಮ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ವಹಿಸುತ್ತಿದ್ದಾರೆ. ಇದು ಅತ್ಯಂತ ಹೆಮ್ಮೆಯ ವಿಚಾರ ಎಂದರು. ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯಗಳ ಅಧಿಕಾರವನ್ನು ಮರು ಸ್ಥಾಪಿಸುವ ಮಸೂದೆಗೆ ರಾಜ್ಯಸಭೆಯು ಒಪ್ಪಿಗೆ ನೀಡಿದ್ದು, ಇದೊಂದು ಮಹತ್ವದ ಕ್ರಮ ಎಂದು ಅವರು ಶ್ಲಾಘಿಸಿದರು.
ರಸ್ತೆ, ರೈಲ್ವೆ, ವಿಮಾನಿಲ್ದಾಣ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ಅಭೂತಪೂರ್ವ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಮಾಡಿದೆ. ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಿದ್ದರಿಂದ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದರು. ಪಕ್ಷ ಮತ್ತು ಪ್ರಧಾನಿ ಮೋದಿ ಅವರ ಕೀರ್ತಿ ಹೆಚ್ಚಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.
ಮೈಸೂರು ಸಂಸದರಾದ ಪ್ರತಾಪ ಸಿಂಹ, ಕೋಲಾರ ಸಂಸದರಾದ ಎಸ್. ಮುನಿಸ್ವಾಮಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನಿ, ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಡಾ. ಸಂದೀಪ್ ಮತ್ತಿತರ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
]]>