Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Byrati Basavaraj – I am BJP https://iambjp.in Making Bharat Vishwa Guru Sun, 05 Sep 2021 07:39:28 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Byrati Basavaraj – I am BJP https://iambjp.in 32 32 ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ಉತ್ತಮ ಶಿಕ್ಷಕ-ಶಿಕ್ಷಕಿಯರನ್ನು ಪ್ರತಿ ವರ್ಷ ಗುರುತಿಸಿ ಸನ್ಮಾನಿಸಲಾಗುವುದು : ಸಚಿವ ಬಿ. ಎ. ಬಸವರಾಜ https://iambjp.in/archives/499 https://iambjp.in/archives/499#respond Sun, 05 Sep 2021 07:34:38 +0000 https://iambjp.in/?p=499 ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ (ಬೈರತಿ) ಅವರು ದಿನಾಂಕ 5-9-2021 ರಂದು ದಾವಣಗೆರೆ ನಗರದ ವಿದ್ಯಾ ನಗರದ ರಸ್ತೆಯಲ್ಲಿ ಇರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಕನ್ನಡ ಭವನದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ ನೀಡಿದರು.

ಇದೇ ವೇಳೆ ದಾವಣಗೆರೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪಡೆದ ಪುರಸ್ಕೃತರನ್ನು ಸನ್ಮಾನಿಸಿ, ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನಲು ಉತ್ತಮ ಶಿಕ್ಷಕ-ಶಿಕ್ಷಕಿಯನ್ನು ಜಿಲ್ಲಾಡಳಿತ ಪ್ರತಿವರ್ಷ ಗುರುತಿಸಿ ಪಟ್ಟಿ ನೀಡಿದರೆ, ಅವರಿಗೆ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಈ ಕಾರ್ಯ ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿನಾಗಿರುವ ತನಕ ಮಾಡುತ್ತೇನೆ ಎಂದು ಭರವಸೆ ನೀಡುವ ಮೂಲಕ ಶಿಕ್ಷಕರಲ್ಲಿ ಅತ್ಮಸ್ಥೈರ್ಯ ತುಂಬಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ‌ ಶ್ರೀ ಎಸ.ಎ.ರವೀಂದ್ರನಾಥ ವಹಿಸಿದ್ದರು. ಜಿಲ್ಲಾಧಿಕಾರಿ ಶ್ರೀ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

]]>
https://iambjp.in/archives/499/feed 0
ಮಹಾನಗರ ಪಾಲಿಕೆಗಳಲ್ಲಿ ಸಮರ್ಪಕ ಆಡಳಿತಕ್ಕೆ ಬೈರತಿ ಬಸವರಾಜ ಸೂಚನೆ https://iambjp.in/archives/338 https://iambjp.in/archives/338#respond Mon, 16 Aug 2021 10:40:44 +0000 https://iambjp.in/?p=338 ಬೆಂಗಳೂರು : ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮತ್ತೆ ನಗರಾಭಿವೃದ್ಧಿ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ ಶ್ರೀ ಬಿ.ಎ.ಬಸವರಾಜ (ಬೈರತಿ) ಅವರು ಎಲ್ಲಾ ಮಹಾನಗರ ಪಾಲಿಕೆ ಪ್ರದೇಶದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಯುಕ್ತರಿಗೆ ಸೂಚಿಸಿದರು.

ಪ್ರತಿ ದಿನ ಒಂದು ಗಂಟೆಗಳ ಕಾಲ ನಗರದಲ್ಲಿ ಆಯುಕ್ತರು ಸಂಚರಿಸುವ ಮೂಲಕ ಸ್ವಚ್ಚತಾ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಸರ್ಕಾರದ ಅನುಮೋದನೆ ದೊರೆತಿದ್ದು, ಆದಷ್ಟು ಬೇಗ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಯೋಜನೆಯನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಬೀದಿ ದೀಪಗಳ ದುರಸ್ತಿ ಮತ್ತು ನಿರ್ವಹಣೆ ಸರಿಯಾಗಿ ಆಗಬೇಕು. ಹಲ ಹೊಸ ಬಡಾವಣೆ, ಪ್ರದೇಶಗಳಲ್ಲಿ ಬೀದಿ ದೀಪಗಳು ಇಲ್ಲ ಎಂಬ ದೂರುಗಳು ಬಂದಿದ್ದು, ಅದನ್ನು ನಿವಾರಣೆ ಮಾಡಬೇಕು ಎಂದು ತಾಕೀತು ಮಾಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಸ್ವತ್ತುಗಳ ಅಸ್ತಿ ತೆರಿಗೆಯನ್ನು ಸರಿಯಾಗಿ ಸಂದಾಯ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡುವ ಮೂಲಕ ವಸೂಲಿಗೆ ಮುಂದಾಗಬೇಕು. ಯಾವುದೇ ರೀತಿಯ ಒತ್ತಡಕ್ಕೆ ಮಣಿಯಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರುತ್ತಿದೆ. ಅವರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಬೇಕು. ಸ್ಥಳೀಯ ಸಮಸ್ಯೆಗಳು ವಿಧಾನ ಸೌಧದ ಸಚಿವರ ಕಚೇರಿಯವರೆಗೆ ಬರದ ಹಾಗೆ ಪಾಲಿಕೆ ಆಯುಕ್ತರು ಸ್ಥಳೀಯ ಮಟ್ಟದಲ್ಲಿ ಅದನ್ನು ಪರಿಹರಿಸಬೇಕು. ಸಂಬಂಧ ಕಲ್ಪಿಸುವ ಅಧಿಕಾರಿ ವರ್ಗದವರು ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ತಾಕೀತು ಮಾಡಿದರು.

ಸೋಮವಾರ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಶ್ರೀ ಎಂ.ಎನ್. ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಶ್ರೀಮತಿ ಬಿ.ಬಿ.ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಂ.ಟಿ. ರೇಜು, ದಾವಣಗೆರೆ, ಶಿವಮೊಗ್ಗ, ‌ಮಂಗಳೂರು, ತುಮಕೂರು, ಬಳ್ಳಾರಿ, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಇಲಾಖೆಯ ಹಿರಿಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

]]>
https://iambjp.in/archives/338/feed 0