og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಮೋರ್ಚಾದ ರಾಜ್ಯಾಧ್ಯಕ್ಷರಾದ ತಿಪ್ಪರಾಜು ಹವಾಲ್ದಾರ್ ಅವರು ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಎಸ್.ಟಿ. ಸಮುದಾಯಗಳ ಜನಸಂಖ್ಯೆ ಸುಮಾರು 75 ಲಕ್ಷಕ್ಕೂ ಅಧಿಕವಿದ್ದು ನಮ್ಮ ಸಮುದಾಯಕ್ಕೆ ಶೇ 3 ಮೀಸಲಾತಿ ನಿಗದಿಯಾಗಿದೆ. ಸಂವಿಧಾನದ ಪ್ರಕಾರ ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕಾದ ಪ್ರಮಾಣಕ್ಕಿಂತ ಇದು ಕಡಿಮೆ ಇರುತ್ತದೆ. ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸುವ ಕುರಿತು ಸಮುದಾಯದಿಂದ ರಾಜ್ಯಾದ್ಯಂತ ಬೇಡಿಕೆ ಹಾಗೂ ಹೋರಾಟ ಮಾಡಿದ್ದರಿಂದ ಅಂದು ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ನ್ಯಾಯಮೂರ್ತಿ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ್ದರು ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.
ಸದರಿ ನ್ಯಾಯಮೂರ್ತಿಗಳು ಸಲ್ಲಿಸಿರುವ ವರದಿಯು ಸರ್ಕಾರದ ಪರಿಶೀಲನೆ ಹಂತದಲ್ಲಿದೆ. ತಾವು ಈ ಸಮುದಾಯದ ಬಹುದಿನಗಳ ಬೇಡಿಕೆಯನ್ನು ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ಈ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕಾಗಿ ಮನವಿ ಕೋರಿದೆ.
ತಾವು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಪ್ರತ್ಯೇಕವಾಗಿ ಸಚಿವಾಲಯವನ್ನು ಘೋಷಣೆ ಮಾಡಿದ್ದು, ಇದರಿಂದ ಬಹುದಿನಗಳ ಈ ಸಮುದಾಯದ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ತಿಪ್ಪರಾಜು ಹವಾಲ್ದಾರ್ ಅವರು ಇನ್ನೊಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದರಿಂದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಹಾಯ ಮಾಡಿದಂತಾಗಿದೆ. ಅದಕ್ಕಾಗಿ ಈ ನಾಡಿನ ಸಮಗ್ರ ಎಸ್.ಟಿ. ಸಮುದಾಯಗಳ ಪರವಾಗಿ ಹಾಗೂ ರಾಜ್ಯ ಎಸ್.ಟಿ.ಮೋರ್ಚಾದ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ಈ ಸಮುದಾಯದ ಇನ್ನೊಂದು ಪ್ರಮುಖ ಬೇಡಿಕೆಯಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಆದಿಕವಿ ಶ್ರೀ ವಾಲ್ಮೀಕಿ ಅಧ್ಯಯನ ಪೀಠವನ್ನು ಪ್ರಾರಂಭಿಸಿದ್ದೀರಿ. ಇದರಿಂದ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಬದುಕಿನ ಅಧ್ಯಯನಕ್ಕೆ ಚಾಲನೆ ಲಭಿಸಿದೆ. ಜಗತ್ತಿನ ಮೊದಲ ಬೃಹತ್ ಆದಿ ಕಾವ್ಯವನ್ನು ರಚಿಸಿದ ಮಹಾನ್ ಮಹರ್ಷಿಗೆ ಗೌರವ ತೋರಿದ್ದೀರಿ. ಅದಕ್ಕಾಗಿ ಈ ನಾಡಿನ ಸಮಗ್ರ ವಾಲ್ಮೀಕಿ ಸಮುದಾಯಗಳ ಪರವಾಗಿ ಹಾಗೂ ರಾಜ್ಯ ಎಸ್.ಟಿ. ಮೋರ್ಚಾದ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುವುದಾಗಿ ಅವರು ತಿಳಿಸಿದ್ದಾರೆ.
ಎಸ್.ಟಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಓಲೆಕಾರ, ನರಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿಗಳಾದ ಮಹಾಂತೇಶ ನಾಯಕ, ಪದಾಧಿಕಾರಿಗಳಾದ ವಿಕ್ರಮ್ ಗಂಗಾಧರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
]]>ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ ಹೇಳಿದರು.
ಅಂಕಿತ ಅವರು ಮಡಿಕೇರಿ ಮೂಲದವರು. ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ. ಹಲವಾರು ವರ್ಷಗಳ ಬಳಿಕ ಓಲಂಪಿಕ್ ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಭೂತಪೂರ್ವ ಅಮೋಘ ಸಾಧನೆ ಮಾಡಿದೆ. ಒಟ್ಟು ಮೂರು ಜನ ಕೋಚ್ ಗಳ ಪೈಕಿ ಅಂಕಿತಾ ಒಬ್ಬರು. ಅವರು ಕನ್ನಡಿಗರು ಅಂಬುದು ಶ್ಲಾಘನೀಯ ಮತ್ತು ಹೆಮ್ಮೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟರು.
]]>]]>
ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗೌರವ ವಂದನೆಯಿಂದ ಜನರಿಗೆ ಉಂಟಾಗುವ ತೊಂದರೆ ಗಮನಿಸಿ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಗೌರವ ವಂದನೆ ಸಲ್ಲಿಸುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡುವುದಾಗಿ ತಿಳಿಸಿದ್ದ ಸಿಎಂ ಬೊಮ್ಮಾಯಿ, ಈಗ ಉಡುಪಿ ಪ್ರವಾಸದ ಸಂದರ್ಭದಲ್ಲಿ ಶುಭಕೊರುವ ಕಟೌಟ್ ಯಾರೂ ಹಾಕಬೇಡಿ ಎಂದು ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ ಮನವಿ ಮಾಡಿ ಮತ್ತೊಮ್ಮೆ ಸರಳತೆಯಿಂದ ಮಾದರಿಯಾಗಿದ್ದಾರೆ.
ಅಧಿಕಾರ ವಹಿಸುತ್ತಲೇ ಅನೇಕ ಕ್ರಾಂತಿಕಾರಕ ಬದಲಾವಣೆಗಳನ್ನು ಬಿಜೆಪಿ ಮುಖ್ಯಮಂತ್ರಿಯೋರ್ವರು ಜಾರಿಗೆ ತರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇತ್ತೀಚೆಗಷ್ಟೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ಹೂಗುಚ್ಛಗಳನ್ನು ನಿಷೇಧಿಸಿ ಸರಳವಾಗಿ ಕಾರ್ಯಕ್ರಮ ನಡೆಸಿಕೊಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದರು.
]]>ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣದಲ್ಲಿಂದು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೃಷ್ಣ ಮೇಲ್ದಂಡೆ ಯೋಜನೆ ಹಂತ-3 ರಡಿಯ ಭೂಸ್ವಾಧೀನ ಪ್ರಕ್ರಿಯೆ ಮತ್ತು ಪುನರ್ ನಿರ್ಮಾಣ ಮತ್ತು ಪುನರ್ವಸತಿ ಕುರಿತು ಕೈಗೊಳ್ಳಬೇಕಾಗಿರುವ ಕ್ರಮಗಳು, ಆರ್ಥಿಕ ಹೊಂದಾಣಿಕೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ರೂಪುರೇಷೆಗಳ ಕುರಿತು ಚರ್ಚಿಸಿದರು.
ಪ್ರಸ್ತುತ ಅನುಷ್ಠಾನಕ್ಕೆ ಕೈಗೊಂಡಿರುವ ಸೂಕ್ಷ್ಮ ನೀರಾವರಿ ಪದ್ದತಿಯಲ್ಲಿನ ರೂಪುರೇಷೆಗಳನ್ನು ಮರು ಪರಿಶೀಲಿಸುವ ಅವಶ್ಯಕತೆ, ನೀರಾವರಿ ಯೋಜನೆಗಳಿಗೆ ಖರ್ಚು ಮಾಡಲಾದ ವೆಚ್ಚಕ್ಕೆ ಪೂರಕವಾಗಿ ನಿರ್ಮಾಣಗೊಳಿಸಲಾದ ಯೋಜನೆಗಳ ಭೌತಿಕ ಪ್ರಗತಿ ಮತ್ತು ಕಲ್ಪಿಸಲಾದ ನೀರಾವರಿ ಸಾಮರ್ಥ್ಯ ಕುರಿತು ಮೌಲ್ಯಮಾಪನ ಕೈಗೊಳ್ಳುವ ಬಗ್ಗೆ ಚರ್ಚಿಸಿದರು. ಕೃಷ್ಣ ಮೇಲ್ದಂಡೆ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ, ನವಿಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಹಾಗೂ ಯೋಜನೆಗಳಡಿ ಕಲ್ಪಿಸಲಾಗುತ್ತಿರುವ ನೀರಾವರಿ ಸಾಮರ್ಥ್ಯದ ಬಗ್ಗೆ ಮತ್ತು ಪ್ರಸಕ್ತ ಸಾಲಿನ ಆಯವ್ಯಯ ಅನುದಾನ, ವೆಚ್ಚಗಳ ಕುರಿತು ಚರ್ಚಿಸಿದರು. ನೀರಾವರಿ ಯೋಜನೆಗಳಡಿ ಅನುಷ್ಟಾನಗೊಳಿಸುತ್ತಿರುವ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ ಕಾರಜೋಳ ಅವರು ಮಾತನಾಡಿ, ಗ್ರಾಮಗಳ ಸಮೀಪದಲ್ಲಿ ಹಾದುಹೋಗುವ ನದಿಗಳ ಪಾತ್ರಗಳ ಬಳಿ ತಡೆಗೋಡೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ಕೃಷಿಹೊಂಡ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಂದ ಅಂತರ್ ಜಲ ವೃದ್ಧಿಯಾಗುವುದರ ಜೊತೆಗೆ ರೈತರಿಗೆ ಅನುಕೂಲವಾಗುತ್ತದೆ.ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಕೃಷ್ಣ ಮೇಲ್ದಂಡೆ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಯುಕೆಪಿಗೆ ಪೂರ್ಣ ಪ್ರಮಾಣದಲ್ಲಿ ಆಯುಕ್ತರನ್ನು ನೇಮಕ ಮಾಡಬೇಕು. ವಿಶೇಷ ಭೂಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಿ, ಭೂಸ್ವಾಧೀನ ಪ್ರಕ್ರಿಯೆಯು ತ್ವರಿತವಾಗಿ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಗಮನ ನೀಡಬೇಕು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ ಕಾರಜೋಳ ಅವರು ಮುಖ್ಯಮಂತ್ರಿಗಳಿಗೆ ಕೋರಿದರು.
ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಎನ್. ಲಕ್ಷಣರಾವ್ ಪೇಶ್ವೆ, ಯುಕೆಪಿಯ ಪುನರ್ ವಸತಿ ಮತ್ತು ನಿರ್ಮಾಣ ಯೋಜನೆಯ ಆಯುಕ್ತರಾದ ಶಿವಯೋಗಿ ಕಳಸದ ಅವರು ಯೋಜನೆಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಐಎಸ್‌ಎಸ್ ಪ್ರಸಾದ್, ಕೆಎನ್‌ಎನೆಲ್ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಚಿವರ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
]]>