og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 3 ಪಾಲಿಕೆಗಳಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಬೆಳಗಾವಿಯಲ್ಲಿ ಮೊದಲ ಬಾರಿಗೆ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಿದ್ದು ರಾಷ್ಟ್ರೀಯ ವಿಚಾರಧಾರೆ, ಬಿಜೆಪಿಯ ಉತ್ತಮ ಆಡಳಿತವನ್ನು ಜನರು ಬೆಂಬಲಿಸಿದ್ದಾರೆ ಎಂದು ವಿವರಿಸಿದರು.
ಹುಬ್ಬಳ್ಳಿ- ಧಾರವಾಡದಲ್ಲಿ ನಮ್ಮ ಆಡಳಿತ ಮುಂದುವರಿಯುತ್ತಿದೆ. ಈ ಅವಳಿ ನಗರಕ್ಕೆ ಶ್ರೀ ಯಡಿಯೂರಪ್ಪ ಅವರು ಅತಿ ಹೆಚ್ಚು ಅನುದಾನ ನೀಡಿದ್ದರು. ಬೆಳಗಾವಿಯಲ್ಲೂ ನಮ್ಮ ಶಾಸಕರು, ಜನಪ್ರತಿನಿಧಿಗಳ, ಕಾರ್ಯಕರ್ತರ ಪ್ರಯತ್ನ ಫಲ ನೀಡಿದೆ ಎಂದರು.
ಕಲಬುರ್ಗಿ ಈ ಹಿಂದೆ ಕಾಂಗ್ರೆಸ್ ಭದ್ರಕೋಟೆಯಂತಿತ್ತು. ಅಲ್ಲಿಯೂ ಅತಿ ಹೆಚ್ಚು ಸ್ಥಾನ ಗಳಿಸಿದ್ದೇವೆ. ಲೋಕಸಭೆ ಮತ್ತು ಇತರ ಚುನಾವಣೆಗಳಲ್ಲಿ ಬಂದ ಫಲಿತಾಂಶದ ಮಾದರಿ ಮುಂದುವರಿದಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರಕಾರದ ಸಾಧನೆಗಳು, ಶ್ರೀ ಯಡಿಯೂರಪ್ಪ ಅವರ ಎರಡು ವರ್ಷಗಳ ಆಡಳಿತ, ಶ್ರೀ ಬಸವರಾಜ ಬೊಮ್ಮಾಯಿ ಅವರ ಕಲ್ಯಾಣ ಕರ್ನಾಟಕದ ಚಿಂತನೆಯ ಆಡಳಿತದಿಂದ ಜನಾಶೀರ್ವಾದ ನಮಗೆ ಸಿಕ್ಕಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಟವೆಲ್ ಹಾಕಬೇಡಿ ಎಂಬ ಸ್ಪಷ್ಟ ಸಂದೇಶವನ್ನು ಜನರು ಕಾಂಗ್ರೆಸ್ ಪಕ್ಷದವರಿಗೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ವಿಫಲರಾಗಿದ್ದಾರೆ ಎಂಬ ಸಂದೇಶ ಹೋಗಬೇಕೆಂಬ ಉದ್ದೇಶದಿಂದ ಸಿದ್ದರಾಮಣ್ಣ ಅವರು ಈ ಬಾರಿ ಹೆಚ್ಚಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿರಲಿಲ್ಲ ಎಂದು ತಿಳಿಸಿದರು.
2 ಸರಕಾರಗಳ ಅಭಿವೃದ್ಧಿ ಕಾರ್ಯಗಳು, ವ್ಯವಸ್ಥಿತ ಚುನಾವಣಾ ತಂತ್ರಗಾರಿಕೆ, ಸಂಘಟನಾ ಪ್ರಯತ್ನ- ನಮಗೆ ಉತ್ತಮ ಫಲ ಕೊಟ್ಟಿದೆ. ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಉಸ್ತುವಾರಿಗಳೂ ಆದ ಶ್ರೀ ನಿರ್ಮಲ್ ಕುಮಾರ್ ಸುರಾಣಾ ಅವರ ನೇತೃತ್ವದಲ್ಲಿ ವಿವಿಧ ತಂಡಗಳ ಜನಪ್ರತಿನಿಧಿಗಳ, ಕಾರ್ಯಕರ್ತರ ಪರಿಶ್ರಮದಿಂದ ನಾವು ಗೆಲುವು ಸಾಧಿಸಿದ್ದೇವೆ ಎಂದರು.
3 ನಗರಪಾಲಿಕೆಗಳು, ಕೆಲವು ಉಪ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದು, ಇದಕ್ಕಾಗಿ ಮತದಾರರನ್ನು ಅಭಿನಂದಿಸುವುದಾಗಿ ಹಾಗೂ ನಮಗೆ ಆಶೀರ್ವಾದ ಮಾಡಿದ ಜನರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದರು.
ಶ್ರೀ ಯಡಿಯೂರಪ್ಪ ಅವರ ಮಾರ್ಗದರ್ಶನದಡಿ ಮತ್ತು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆದಿದೆ. ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನಪರ ಆಡಳಿತ ಮತ್ತು ಶ್ರೀ ಯಡಿಯೂರಪ್ಪ ಅವರ ಮಾರ್ಗದರ್ಶನದಡಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರದ ಜನೋಪಯೋಗಿ ಕಾರ್ಯಗಳಿಗೆ ಜನಮನ್ನಣೆ ದೊರಕಿದೆ. ಈ ಮೂಲಕ ಜನರು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದ್ದಾರೆ ಎಂದರು.
ಶ್ರೀ ಯಡಿಯೂರಪ್ಪ ಅವರು ಮತ್ತು ನಾನು ಜೊತೆಯಾಗಿ ರಾಜ್ಯ ಪ್ರವಾಸ ಮಾಡಲಿದ್ದೇವೆ. ಈ ಕುರಿತ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಶ್ರೀ ಯಡಿಯೂರಪ್ಪ ಅವರ ಮಾರ್ಗದರ್ಶನ, ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಡಿ ಪಕ್ಷವು ತಂಡಸ್ಫೂರ್ತಿಯಿಂದ ಮುಂದಿನ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ ಎಂದರು.
ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಉಸ್ತುವಾರಿಗಳೂ ಆದ ಶ್ರೀ ನಿರ್ಮಲ್ ಕುಮಾರ್ ಸುರಾಣಾ, ರೈತ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಆದ ಶ್ರೀ ಈರಣ್ಣ ಕಡಾಡಿ ಹಾಗೂ ರಾಜ್ಯ ಮಾಧ್ಯಮ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
]]>