Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
JanaSankalpaYatre – I am BJP https://iambjp.in Making Bharat Vishwa Guru Wed, 19 Oct 2022 11:50:29 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png JanaSankalpaYatre – I am BJP https://iambjp.in 32 32 ಬಿಜೆಪಿಗೆ ಮತ್ತೊಮ್ಮೆ ಜನಾಶೀರ್ವಾದ ಖಚಿತ- ಬೈರತಿ ಬಸವರಾಜು https://iambjp.in/archives/1007 https://iambjp.in/archives/1007#respond Wed, 19 Oct 2022 11:50:29 +0000 https://iambjp.in/?p=1007 ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ. ಬಿಜೆಪಿ ಮೇಲೆ ಜನಾಶೀರ್ವಾದ ಇರಬೇಕು ಎಂದು ರಾಜ್ಯದ ಸಚಿವ ಬೈರತಿ ಬಸವರಾಜು ಅವರು ಮನವಿ ಮಾಡಿದರು.

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಒದಗಿಸಲು 180 ಕೋಟಿ ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.

ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಗಳನ್ನು ಬಲಪಡಿಸಲು ಬಿಜೆಪಿಯನ್ನು ಗೆಲ್ಲಿಸಿ ಎಂದು ವಿನಂತಿಸಿದರು.

ಸಚಿವ ಬಿ.ಶ್ರೀರಾಮುಲು ಅವರು ಮಾತನಾಡಿ, ರಾಜುಗೌಡರ ನೇತೃತ್ವದಲ್ಲಿ ಈ ಭಾಗದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಆಗಿವೆ. ನುಡಿದಂತೆ ನಡೆದ ವ್ಯಕ್ತಿ ಅವರು. ಅವರನ್ನು ಮತ್ತೆ ಗೆಲ್ಲಿಸಿ ಎಂದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬೊಮ್ಮಾಯಿಯವರು ಸಂಕಲ್ಪ ಮಾಡಿದ್ದು, ಬಿಜೆಪಿಯ 150 ಶಾಸಕರನ್ನು ಜನತೆ ಗೆಲ್ಲಿಸಬೇಕು. ಇದು 2023ರಲ್ಲಿ ನನಸಾಗುವ ಸಂಕೇತಗಳು ಲಭಿಸಿವೆ ಎಂದರು.

ನಮ್ಮ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಮುಂದಿನ ಬಾರಿ 5 ಸಾವಿರ ಕೋಟಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ಮೀಸಲಾತಿ ವಿಚಾರದಲ್ಲೂ ದಿಟ್ಟ ನಿರ್ಧಾರ ಮಾಡಿದ್ದಾರೆ. ಇದು ಅವರ ಹೃದಯ ಶ್ರೀಮಂತಿಕೆಯ ಸಂಕೇತ ಎಂದು ಮೆಚ್ಚುಗೆ ಸೂಚಿಸಿದರು. ಇವೆಲ್ಲವನ್ನೂ ಗಮನಿಸಿ ಈ ಭಾಗದಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರುಗುಂದಿ ಅವರು ಮಾತನಾಡಿ, ರಾಜು ಗೌಡರು ಶಾಸಕರಾಗಿ ಸತತ ಆಯ್ಕೆಯಾಗಿದ್ದಾರೆ. ಇವರು ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಆದರೆ, ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದರು. ಹಾಲುಮತ ಸಮಾಜಕ್ಕೆ ರಾಜಕೀಯದಲ್ಲೂ ವಿಶೇಷ ಅವಕಾಶ ನೀಡಿದ ರಾಜು ಗೌಡರನ್ನು ಮತ್ತೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಡೆಯಾಪುರ ಬಸನಗೌಡ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು 3 ದಶಕಗಳ ಸೇವೆಗೆ ಬೆಲೆ ಕೊಟ್ಟಿರಲಿಲ್ಲ. ಆದರೆ, ಬಿಜೆಪಿ, ಶಾಸಕ ರಾಜುಗೌಡರು ನನಗೆ ಅವಕಾಶ ನೀಡಿದರು ಎಂದು ವಿವರಿಸಿದರು. 2023ರಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ನುಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಸಚಿವ ಮುರುಗೇಶ್ ನಿರಾಣಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದರು, ಶಾಸಕರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/1007/feed 0
ಬಿಜೆಪಿ ಸರಕಾರದಿಂದ ಸಮಗ್ರ ಅಭಿವೃದ್ಧಿ- ಶಾಸಕ ರಾಜು ಗೌಡ https://iambjp.in/archives/1004 https://iambjp.in/archives/1004#respond Wed, 19 Oct 2022 10:43:47 +0000 https://iambjp.in/?p=1004 ಬೆಂಗಳೂರು: ಕೋವಿಡ್ ಅವಧಿಯಲ್ಲಿ ಯಡಿಯೂರಪ್ಪ ಅವರ ಸರಕಾರವು ಗರಿಷ್ಠ ಅನುದಾನವನ್ನು ನೀಡಿದೆ ಎಂದು ಶಾಸಕ ರಾಜುಗೌಡ ಅವರು ತಿಳಿಸಿದರು.

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಭಾಗದ ನೀರಾವರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸರಕಾರವು ಹೆಚ್ಚಿನ ಅನುದಾನ ಕೊಟ್ಟಿದೆ ಎಂದು ಮೆಚ್ಚುಗೆ ಸೂಚಿಸಿದರು. ಬಸವರಾಜ ಬೊಮ್ಮಾಯಿಯವರು ಎಲ್ಲ ಸಮಾಜಗಳನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ. ಮೀಸಲಾತಿಯ ನಾಲ್ಕು ದಶಕಗಳ ವಿನಂತಿಯನ್ನು ಈಡೇರಿಸಿದ್ದಾರೆ ಎಂದು ಧನ್ಯವಾದ ಸಮರ್ಪಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರು ಏಕವಚನದಿಂದ ಮಾತನಾಡುವ ತಮ್ಮ ಮುಖಂಡರನ್ನು ನಿಯಂತ್ರಣದಲ್ಲಿ ಇಡಬೇಕು ಎಂದು ಅವರು ಒತ್ತಾಯಿಸಿದರು. ಇಲ್ಲಿ ಸಕ್ಕರೆ ಕಾರ್ಖಾನೆಯನ್ನು ತೆರೆಯುವೆ. ಗಾರ್ಮೆಂಟ್ ಫ್ಯಾಕ್ಟರಿ, ಉತ್ತಮ ಆಸ್ಪತ್ರೆ, ಶಾಲೆ ತೆರೆಯುವೆ ಎಂದು ಸವಾಲೆಸೆದರು. ಸಾಮಾನ್ಯ ಚಹಾ ಮಾರುವವರು ಪ್ರಧಾನಿ ಆಗಿದ್ದಾರೆ. ನಾನು ಇನ್‍ಸ್ಪೆಕ್ಟರ್ ಮಗ. ನಮ್ಮದು ಬಿಜೆಪಿ; ಸಾಮಾನ್ಯರಿಗೆ ಅಧಿಕಾರ ನೀಡುವ ಪಕ್ಷ. ವಂಶಾಡಳಿತದ ಪಕ್ಷ ಅಲ್ಲ ಎಂದು ಕಾಂಗ್ರೆಸ್ಸಿಗರಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ಸಿಗರು ಪಾಂಡಿಚೇರಿ ವಾಹನದಲ್ಲಿ (ಪಿವೈ) ಓಡಾಡುತ್ತಾರೆ. ನಾವು ತೆರಿಗೆ ವಂಚಿಸಿದ ಆರೋಪ ಮಾಡುತ್ತಾರೆ. ನನ್ನದು ಕಳಂಕರಹಿತ ಆಡಳಿತ ಎಂದು ತಿಳಿಸಿದರು. ನನ್ನ ಉತ್ತಮ ಕಾರ್ಯಗಳನ್ನು ಜನರಿಗೆ ತಿಳಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಜಿಲ್ಲೆಯ 4 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿ ಎಂದು ವಿನಂತಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/1004/feed 0
ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸಮಗ್ರ ಅಭಿವೃದ್ಧಿ: ಸಿಎಂ ಬಸವರಾಜ ಬೊಮ್ಮಾಯಿ https://iambjp.in/archives/1001 https://iambjp.in/archives/1001#respond Wed, 19 Oct 2022 10:40:43 +0000 https://iambjp.in/?p=1001 ಬೆಂಗಳೂರು: ಕಾಂಗ್ರೆಸ್ ಪಕ್ಷದ 5 ವರ್ಷಗಳ ಆಡಳಿತದ ಅವಧಿಯಲ್ಲಿ ರಾಜ್ಯದ ಸ್ಥಿತಿಗೆ ಅಧೋಗತಿಗೆ ತಲುಪಿತ್ತು. ಆದರೆ, ಬಿಜೆಪಿ ಸರಕಾರವು ಕೋವಿಡ್ ಸಂಕಷ್ಟದ ನಡುವೆಯೂ ಗರಿಷ್ಠ ಅಭಿವೃದ್ಧಿಯನ್ನು ಸಾಧಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಈ ಭಾಗಕ್ಕೆ 1,500 ಕೋಟಿ ನೀಡಿ ಅದರಡಿ ಕಾಮಗಾರಿ ನಡೆಸಿದರು. ಈ ವರ್ಷ ನಾನು 3 ಸಾವಿರ ಕೋಟಿಯ ಕ್ರಿಯಾಯೋಜನೆ ಮಾಡಿಸಿದ್ದೇನೆ. 2 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸುತ್ತಿದ್ದೇವೆ. 51 ಪಿಎಚ್‍ಸಿ ಕೇಂದ್ರ ನಿರ್ಮಿಸಲಾಗುವುದು. ಅಪ್ಪರ್ ಕೃಷ್ಣ ಯೋಜನೆಯಡಿ 5 ಸಾವಿರ ಕೋಟಿಗಿಂತ ಹೆಚ್ಚು ಅನುದಾನ ನೀಡುತ್ತೇವೆ ಎಂದರು.

ಅಪ್ಪರ್ ಕೃಷ್ಣದಡಿ ಹೆಚ್ಚುವರಿ ನೀರು ಲಭಿಸುವ ವಿಶ್ವಾಸ ಇದೆ. ಈ ಭಾಗದ ಯೋಜನೆಗಳು ಈಡೇರಿಸುವ ಸಂಕಲ್ಪ ನಮ್ಮದು. 5 ಸಾವಿರ ಕೋಟಿ ಅದಕ್ಕಾಗಿ ವಿನಿಯೋಗ ಮಾಡಲಾಗುವುದು. ಮಲ್ಲಾಬಾದ್ ಏತ ನೀರಾವರಿ ಯಾರು ಮಾಡಿದವರು ಸ್ವಾಮಿ? ಹೈಕ ಮತದಿಂದ ಗೆದ್ದು ಅಧಿಕಾರ ಪಡೆದ ಕಾಂಗ್ರೆಸ್ ನವರು ಕಲ್ಯಾಣ ಕರ್ನಾಟಕಕ್ಕಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಈ ಭಾಗದ ಜನರ ನಂಬಿಕೆ, ವಿಶ್ವಾಸ ಇಟ್ಟರೂ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಮರೀಚಿಕೆಯಾಯಿತು. ಕಾಂಗ್ರೆಸ್ ಆಡಳಿತದಲ್ಲಿ ನಂಜುಂಡಪ್ಪ ವರದಿ ದೂಳು ಹಿಡಿದಿತ್ತು. ಅದನ್ನು ಕಸದ ಬುಟ್ಟಿಗೆ ಹಾಕಿದ್ದರು ಎಂದು ಟೀಕಿಸಿದರು.

371 ಜೆ ಬಂದರೂ ಅಭಿವೃದ್ಧಿಯು ಕೇವಲ ಕಾಗದದಲ್ಲೇ ಉಳಿಯಿತು. ಜನ ಮುಗ್ಧರಿದ್ದಾರೆ; ಅವರು ಮತಬ್ಯಾಂಕ್ ಎಂದು ಕಾಂಗ್ರೆಸ್ ಭಾವಿಸಿತ್ತು. ಈಗ ಜನರು ಬುದ್ಧಿವಂತರಾಗಿದ್ದಾರೆ. ಇನ್ನು ಮುಂದೆ ಈ ಭಾಗದ ಜನತೆಗೆ ಕಾಂಗ್ರೆಸ್‍ನವರು ವಿಶ್ವಾಸದ್ರೋಹ ಮಾಡಲು ಅಸಾಧ್ಯ ಎಂದರು.

ಬಿಜೆಪಿ ಈ ಭಾಗದ ಅಭಿವೃದ್ಧಿಗೆ ಬದ್ಧವಾಗಿದೆ. ಕಾಂಗ್ರೆಸ್ ಸರಕಾರವು ಈ ಭಾಗದ ಅಭಿವೃದ್ಧಿಗೆ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಳಿದರು. ಯಾದಗಿರಿಗೆ ಮೆಡಿಕಲ್ ಕಾಲೇಜು ನೀಡಲಿದ್ದೇವೆ. ಕಾಂಗ್ರೆಸ್ ಸರಕಾರ ಯಾಕೆ ಮಾಡಿಲ್ಲ? ಇಚ್ಛಾಶಕ್ತಿ ಇರದುದು ಕಾರಣವಲ್ಲವೇ ಎಂದು ಪ್ರಶ್ನಿಸಿದರು.

ಈ ಭಾಗದ ಜನರ ಋಣದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ, ಅದು ಋಣ ತೀರಿಸಲಿಲ್ಲ. ಬಿಜೆಪಿ ನಿಮ್ಮ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಕಾಂಗ್ರೆಸ್ ಪಕ್ಷದವರ ಸಾಮಾಜಿಕ ನ್ಯಾಯ ಕೇವಲ ಭಾಷಣದಲ್ಲಿತ್ತು. ದಲಿತರು, ಹಿಂದುಳಿದವರ ಕಡೆ ತಿರುಗಿ ನೋಡಲು ಅವರಿಗೆ ಪುರುಸೊತ್ತು ಸಿಗಲಿಲ್ಲ. ಮೀಸಲಾತಿ ಬಗ್ಗೆ ತಲೆ ಕೆಡಿಸಿಕೊಳ್ಳಲೇ ಇಲ್ಲ ಎಂದು ಆಕ್ಷೇಪಿಸಿದರು.

ಬಿಜೆಪಿ, ಮೀಸಲಾತಿ ವಿಚಾರದಲ್ಲಿ ಇಚ್ಛಾಶಕ್ತಿ ಪ್ರದರ್ಶನ ಮಾಡಿದೆ. ಇದೊಂದು ಐತಿಹಾಸಿಕ ತೀರ್ಮಾನ ಎಂದು ವಿವರಿಸಿದರು. ದುಡಿಯುವ ವರ್ಗಕ್ಕೆ ಹೆಚ್ಚಿನ ಅವಕಾಶ ನೀಡಲು ಮತ್ತು ಸ್ವಾವಲಂಬಿ- ಸ್ವಾಭಿಮಾನದ ಜೀವನ ಸಾಗಿಸಲು ಈ ತೀರ್ಮಾನ ಎಂದರು. ಸಾಮಾಜಿಕ ನ್ಯಾಯ ನಮ್ಮ ಧ್ಯೇಯ- ಬದ್ಧತೆ ಎಂದು ತಿಳಿಸಿದರು.

ದೇಶ- ನಾಡಿನ ನಿರ್ಮಾಣಕ್ಕೆ ಶ್ರಮಿಕರ ಕೊಡುಗೆಯೂ ಬೇಕು ಎಂದು ಅವರು ತಿಳಿಸಿದರು. ಕಾಂಗ್ರೆಸ್ ಶಾಸಕರು ಅಭಿವೃದ್ಧಿಯ ಹಣವನ್ನು ನುಂಗಿಹಾಕಿದರು. ಚಾದರ, ದಿಂಬಿನಲ್ಲೂ ಹಣ ನುಂಗಿ ಹಾಕಿದ್ದರು. ಬೆಂಗಳೂರು ನೆಲ, ನೀರಾವರಿ, ಬಂಧುಗಳಿಗೆ ನೌಕರಿ, ಪೊಲೀಸರಿಗೆ ನೌಕರಿ ವಿಷಯದಲ್ಲೂ ಭ್ರಷ್ಟಾಚಾರ ನಡೆಸಿದ್ದರು ಎಂದು ವಿವರಿಸಿದರು.

ಕಾಗಿನೆಲೆ ಅಭಿವೃದ್ಧಿ ಮಾಡಿದ್ದೇವೆ. ಎಸ್‍ಟಿ ಸಮುದಾಯಕ್ಕೆ ನಿಗಮ ಮಾಡಿದ್ದೇವೆ. ವಾಲ್ಮೀಕಿ ಜಯಂತಿ ಆಚರಣೆಗೆ ಸೂಚಿಸಿದ್ದೇವೆ. ನಮ್ಮದು ಮಾತಿನಂತೆ ಕೃತಿಯ ಸರಕಾರ. ಕಾಂಗ್ರೆಸ್‍ನಂತೆ ಕೇವಲ ಮಾತಿನ ಸರಕಾರ ನಮ್ಮದಲ್ಲ ಎಂದು ನುಡಿದರು.

ಕೇಂದ್ರ- ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ಜನಪರ ಕಾರ್ಯಕ್ರಮಗಳನ್ನು ಗಮನಿಸಿ ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು. ರೈತ ವಿದ್ಯಾನಿಧಿ ಆರಂಭಿಸಿದ್ದನ್ನು ವಿವರಿಸಿದ ಅವರು, ರೈತ ಕೂಲಿಕಾರರು, ನೇಕಾರರು, ಮೀನುಗಾರರ ಜನಾಂಗಕ್ಕೂ ಇದನ್ನು ವಿಸ್ತರಿಸಲಾಗಿದೆ ಎಂದರು.

ಎಸ್‍ಸಿ, ಎಸ್‍ಟಿ ಜನಾಂಗಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಕೊಡಲಾಗುತ್ತಿದೆ. ಜಮೀನು ಕೊಳ್ಳಲು ಹಣವನ್ನು ಹೆಚ್ಚಿಸಿದ್ದೇವೆ. 100 ಅಂಬೇಡ್ಕರ್ ಹಾಸ್ಟೆಲ್, 50 ಕನಕದಾಸ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ ಎಂದು ವಿವರಿಸಿದರು. ರಾಯಚೂರಿಗೆ ಏರ್‍ಪೋರ್ಟ್ ಸೇರಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದರು.

ರಾಹುಲ್ ಗಾಂಧಿಗೆ ದೇಶವೂ ಗೊತ್ತಿಲ್ಲ; ಕರ್ನಾಟಕವೂ ಗೊತ್ತಿಲ್ಲ. ಸಿದ್ರಾಮಣ್ಣನವರು ಮಾಡಿದ ಭ್ರಷ್ಟಾಚಾರದ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸುವುದಾಗಿ ಹೇಳಿದ್ದೇನೆ. ರಾಹುಲ್ ಅವರು ಪ್ರಧಾನಿಯಲ್ಲ ಎಂದು ನನಗೆ ಗೊತ್ತಿದೆ. ಸಿದ್ರಾಮಣ್ಣನ ಆಡಳಿತಾವಧಿಯ ಅವ್ಯವಹಾರಗಳ ತನಿಖೆ ನಡೆದಿದೆ. ರಾಹುಲ್ ಗಾಂಧಿ ಇವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೋ ಎಂದು ಕೇಳುತ್ತೇವೆ. ದಾಖಲೆ ಕೊಟ್ಟು ಅವರ ಮೇಲೆ ಕ್ರಮಕ್ಕೆ ಕೋರಲಿದ್ದೇವೆ ಎಂದರು.

ನಾವು ಕುಂಡದ ಗಿಡಗಳಲ್ಲ; ನಾವೂ ಕರ್ನಾಟಕದ ಭೂಮಿಯಲ್ಲಿ ಹೆಮ್ಮರವಾಗಿ ಬೆಳೆದವರು ನಾವು. ಕಾಂಗ್ರೆಸ್ ಸುಳ್ಳನ್ನು ಜನರು ನಂಬುವುದಿಲ್ಲ. ಸ್ವಚ್ಛ- ದಕ್ಷ ಆಡಳಿತ, ಎಲ್ಲ ವರ್ಗಕ್ಕೆ, ಎಲ್ಲ ಪ್ರದೇಶಕ್ಕೂ ನ್ಯಾಯ ಒದಗಿಸಲು ಬಿಜೆಪಿಯನ್ನು ಗೆಲ್ಲಿಸಲು ಸಂಕಲ್ಪ ಮಾಡಿ ಎಂದು ಮನವಿ ಮಾಡಿದರು. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ ಎಂದು ತಿಳಿಸಿದರು. ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/1001/feed 0
ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ : ಬಸವರಾಜ ಬೊಮ್ಮಾಯಿ https://iambjp.in/archives/996 https://iambjp.in/archives/996#respond Tue, 18 Oct 2022 10:05:23 +0000 https://iambjp.in/?p=996 ಬೆಂಗಳೂರು: ಕಾಂಗ್ರೆಸ್ ಭ್ರಷ್ಟಾಚಾರ, ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ- ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲೆಸೆದರು.

ಬೀದರ್ ಜಿಲ್ಲೆಯ ಔರಾದ್­ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯ ಹಗರಣಗಳ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕೊಡಲಿದ್ದೇವೆ. 2016ರ ಶಿಕ್ಷಕರ ನೇಮಕಾತಿ ಹಗರಣ ಸೇರಿ ಎಲ್ಲ ವಿವರ ಕೊಡಲಿದ್ದೇವೆ ಎಂದು ತಿಳಿಸಿದರು. ಅರ್ಜಿ ಹಾಕದೇ ನೇಮಕಾತಿ ನಡೆದಿದೆ ಎಂದು ತಿಳಿಸಿದರು.

ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು. ಎಲ್ಲ ಹಗರಣಗಳನ್ನು ಮುಚ್ಚಿ ಹಾಕಿದ್ದರು. ಇದು ಕಾಂಗ್ರೆಸ್ ಸರಕಾರ ಎಂದು ತಿಳಿಸಿದರು. ನಮ್ಮಲ್ಲಿ ಪಿಎಸ್‍ಐ ನೇಮಕಾತಿ ಆದಾಗ ತಪ್ಪು ಮಾಡಿದ್ದವರನ್ನು ಬಂಧಿಸಿದ್ದೇವೆ. ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರೆ. ಅಬ್ಬರಿಸಿ ಬೊಬ್ಬಿರಿದರೆ ಕೇಳುವವರು ಯಾರಿಲ್ಲ ಎಂದು ಎಚ್ಚರಿಸಿದರು. ಮಾತನಾಡುತ್ತಾರೆ; ಆದರೆ, ಇವರಿಗೆ ದಮ್ಮಿದೆಯೇ ಎಂದು ಕೇಳಿದರು.

ಜನರ ಮೂಲಕ ನಾವೆಲ್ಲರೂ ಆಯ್ಕೆಯಾಗಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. 3 ವರ್ಷಗಳಿಂದ ಬಿಜೆಪಿ ಸರಕಾರವಿದೆ. ಜನಪರ ಆಡಳಿತ ಮತ್ತು ಹತ್ತು ಹಲವಾರು ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಪ್ರವಾಸ- ಕೋವಿಡ್ ನಡುವೆಯೂ ಸತತ ಅಭಿವೃದ್ಧಿಗೆ ಶ್ರಮಿಸಿದ್ದೇವೆ ಎಂದು ಪ್ರಕಟಿಸಿದರು.

ಅತಿವೃಷ್ಟಿ ಸಂಬಂಧ ಪರಿಹಾರವನ್ನು ನಾವು ಹೆಚ್ಚಿಸಿದ್ದೇವೆ. ಮನೆಗಳ ಸಂಬಂಧ ಪರಿಹಾರ ಮೊತ್ತವನ್ನೂ ಹೆಚ್ಚಿಸಿದ್ದು, ಕಾಂಗ್ರೆಸ್ ಸರಕಾರದಲ್ಲಿ ಒಂದರಿಂದ ಒಂದೂವರೆ ವರ್ಷದಲ್ಲಿ ಪರಿಹಾರ ಕೊಡುತ್ತಿತ್ತು. ಈಗ ಕೇವಲ ಒಂದು ತಿಂಗಳಿನಲ್ಲಿ ಪರಿಹಾರ ನೀಡುತ್ತಿದ್ದೇವೆ ಎಂದರು.

ತಾಂಡಾಗಳ ಅಭಿವೃದ್ಧಿ, ಬಡವರಿಗೆ ನೆರವಾಗಿದ್ದೇವೆ. 23 ಸಾವಿರ ತಾಂಡಾಗಳನ್ನು ಗ್ರಾಮಗಳನ್ನಾಗಿ ಆದೇಶ ಮಾಡಲಾಗಿದೆ. ಮನೆಗಳಿಗೆ ಹಕ್ಕಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದರು. ಇದು ಹಲವು ದಶಕಗಳ ಬೇಡಿಕೆ ಎಂದರು. ಕಾಂಗ್ರೆಸ್ ಪಕ್ಷವು, ದೀನದಲಿತರ ಹೆಸರಿನಲ್ಲಿ ಅಧಿಕಾರ ಮಾಡಿದರೂ ಈ ಸಮುದಾಯಗಳ ಅಭಿವೃದ್ಧಿ ಆಗಲಿಲ್ಲ ಎಂದು ಟೀಕಿಸಿದರು.

ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎನ್ನಲು ಆತ್ಮಸಾಕ್ಷಿ ಬೇಕಲ್ಲವೇ ಎಂದ ಅವರು, ನಿರ್ಣಯ ತೆಗೆದುಕೊಂಡವರು ಯಾರು ಎಂದು ಪ್ರಶ್ನಿಸಿದರು. ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಟೀಕಿಸಿದರು.

ಉಚಿತವಾಗಿ ಕೋವಿಡ್ ಲಸಿಕೆ ನೀಡಿದ್ದು, ಉಚಿತ ಪಡಿತರ ವಿತರಣೆ ಮಾಡಿದ್ದಲ್ಲದೆ ಕೋವಿಡ್ ನಡುವೆಯೂ ದೇಶ ಸರ್ವತೋಮುಖ ಅಭಿವೃದ್ಧಿ ಸಾಧಿಸಿದ್ದನ್ನು ಅವರು ವಿವರಿಸಿದರು. ರೈತ ಉಳಿದರೆ ದೇಶ ಉಳಿದೀತು ಎಂಬಂತೆ ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ನೀಡಲಿದ್ದೇವೆ. ಅದಕ್ಕಾಗಿ ಕ್ರಿಯಾ ಯೋಜನೆಯನ್ನೂ ಮಾಡಿದ್ದೇವೆ. 14 ಸಾವಿರ ನೇಮಕಾತಿಗೆ ಅನುಮತಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ನೀರಾವರಿ ಯೋಜನೆಗೆ ವಿಶೇಷ ಅನುದಾನ ಕೊಟ್ಟಿದ್ದೇವೆ ಎಂದರು. ಪ್ರಭು ಚೌಹಾಣ್, ಭಗವಂತ ಖೂಬಾ ಅವರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೀಸಲಾತಿ ಸೇರಿ ಜನರ ನಿರೀಕ್ಷೆಗೆ ಅನುಗುಣವಾಗಿ ನಾವು ಕೆಲಸ ಮಾಡಿದ್ದೇವೆ. ಬೀದರ್, ರಾಜ್ಯದ ಕಿರೀಟಪ್ರಾಯ ಜಿಲ್ಲೆಯಾಗಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದೇವೆ ಎಂದು ತಿಳಿಸಿದರು. ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧತೆ ತೋರಿದ್ದೇವೆ ಎಂದರು.

ಪ್ರಜಾಪ್ರಭುತ್ವದಲ್ಲಿ ಜನರ ಸಂಕಲ್ಪ ಮತ್ತು ಜನಶಕ್ತಿ ಮುಖ್ಯವಾಗಿದೆ. ನರೇಂದ್ರ ಮೋದಿಜಿ ಅವರ ಸಮರ್ಥ ನೇತೃತ್ವ ನಮ್ಮ ಜೊತೆಗಿದೆ. ಕಾಂಗ್ರೆಸ್ ಪಕ್ಷದ ಕನಸನ್ನು ಕನಸಾಗಿಯೇ ಉಳಿಸಿ, ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರೋಣ ಎಂದು ಮನವಿ ಮಾಡಿದರು.

ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮಾತನಾಡಿ, ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಈ ಭಾಗದ ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು. ಇದಕ್ಕಾಗಿ ಬೊಮ್ಮಾಯಿ ಅವರಿಗೆ ಧನ್ಯವಾದ ಸಮರ್ಪಿಸಿದರು.

ಔರಾದ್ ತಾಲ್ಲೂಕಿನ 36 ಕೋಟಿ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮಂಜೂರಾತಿ ನೀಡಿದ್ದಾರೆ. ಬೀದರ್- ನಾಂದೇಡ್ ರೈಲ್ವೆ ಮಾರ್ಗಕ್ಕೆ ಅನುದಾನದ ಬಗ್ಗೆ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸಂಕಲ್ಪ ಯಾತ್ರೆಯು ಸಂಚಲನ ಉಂಟು ಮಾಡಿದೆ ಎಂದರು.

ಕಾಂಗ್ರೆಸ್ ಪಕ್ಷದ ಶಾಸಕರು ಜಿಲ್ಲೆಯ ರೈತರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಜಿಲ್ಲೆಯಲ್ಲಿ 5ರಿಂದ 6 ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಗೆಲ್ಲಿಸಿಕೊಡಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. ಮೋದಿಜಿ ಮತ್ತು ಬೊಮ್ಮಾಯಿಯವರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ರಾಜ್ಯದ ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಈ ಭಾಗದ ನೀರಾವರಿಗೆ ಬಿಜೆಪಿ ಸರಕಾರ ಆದ್ಯತೆ ಕೊಟ್ಟಿದೆ ಎಂದು ತಿಳಿಸಿದರು. ಮೋದಿಜಿ, ಬೊಮ್ಮಾಯಿಯವರ ಸರಕಾರ ಮಾಡಿದ ಜನೋಪಯೋಗಿ ಕಾರ್ಯಗಳನ್ನು ವಿವರಿಸಿದರು.

ಕಾಂಗ್ರೆಸ್ ಪಕ್ಷದ ಜೋಡೋ ಯಾತ್ರೆ ಕೇವಲ ನಾಟಕವಷ್ಟೇ ಎಂದು ಟೀಕಿಸಿದರು. ಇದು ಕೇವಲ ಹಾಸ್ಯಾಸ್ಪದ ಎಂದು ಆಕ್ಷೇಪಿಸಿದರು. ಜನರು ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕರಿಸಲು ಮುಂದಾಗಿದ್ದಾರೆ ಎಂದರು. ಬಿಜೆಪಿ ಗೆಲುವಿಗೆ ಶ್ರಮಿಸಲು ವಿನಂತಿಸಿದರು.

ರಾಜ್ಯದ ಸಚಿವರಾದ ಪ್ರಭು ಚೌಹಾಣ್, ಬೈರತಿ ಬಸವರಾಜ್, ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/996/feed 0
ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಬಿಜೆಪಿ ಶಾಸಕರನ್ನು ಗೆಲ್ಲಿಸಲು ಸಚಿವ ಬಿ. ಶ್ರೀರಾಮುಲು ಮನವಿ https://iambjp.in/archives/992 https://iambjp.in/archives/992#respond Tue, 18 Oct 2022 10:00:33 +0000 https://iambjp.in/?p=992 ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಗರಿಷ್ಠ ಶಾಸಕರÀನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ 150 ಬಿಜೆಪಿ ಶಾಸಕರು ಗೆದ್ದು ಅಧಿಕಾರ ಪಡೆಯುವಂತಾಗಲು ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ರಾಜ್ಯದ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.

ಬೀದರ್ ಜಿಲ್ಲೆಯ ಔರಾದ್­ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಗೋವುಗಳ ಸಂರಕ್ಷಣೆಗಾಗಿ 30 ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣದ ಕೆಲಸ ಮಾಡಿದ್ದಾರೆ. ಇದು ಅತ್ಯಂತ ಶ್ಲಾಘನಾರ್ಹ ಎಂದರು. ಗೋವುಗಳಿಗಾಗಿ ಮೊಬೈಲ್ ಕ್ಲಿನಿಕ್ ತೆರೆದಿದ್ದಾರೆ. ಇದು ಮೆಚ್ಚತಕ್ಕ ಕೆಲಸ ಎಂದರು.

ವಿಜಯ ಸಂಕಲ್ಪಕ್ಕಾಗಿ ಬಿಜೆಪಿ ಯಾತ್ರೆಗಳನ್ನು ನಡೆಸುತ್ತಿದೆ. ಇವತ್ತು ಬೀದರ್ ಜಿಲ್ಲೆಯ ಬಸವಣ್ಣನ ಜನ್ಮಭೂಮಿ- ಕಲ್ಯಾಣ ಭೂಮಿಯಲ್ಲಿ ಪ್ರವಾಸ ಮುಂದುವರಿದಿದೆ. 1.20 ಲಕ್ಷ ಲಂಬಾಣಿ ಹಟ್ಟಿಗಳು, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮವನ್ನಾಗಿ ಸಿಎಂ ಮತ್ತು ಕಂದಾಯ ಸಚಿವರು ಘೋಷಿಸಿದ್ದಾರೆ. ಇದು ಅಭಿವೃದ್ಧಿಗೆ ಪೂರಕ ಎಂದು ನುಡಿದರು.

ಕಲ್ಯಾಣ ಕರ್ನಾಟಕದಲ್ಲಿ 1600 ಹೊಸ ಬಸ್ ಖರೀದಿಸಿ ಓಡಾಟಕ್ಕೆ ಅವಕಾಶ ಮಾಡಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ನಮ್ಮ ಸಿಎಂ ಬಸವರಾಜ ಬೊಮ್ಮಾಯಿಯವರು ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನವನ್ನು ಹೆಚ್ಚಿಸಿ ನೆರವಾಗಿದ್ದಾರೆ ಎಂದು ಪ್ರಶಂಸಿಸಿದರು.

ಬಿಜೆಪಿಯ ಕೇಂದ್ರ- ರಾಜ್ಯ ಸರಕಾರಗಳು ದೇಶದ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಾಂಗ್ರೆಸ್ ಸರಕಾರವು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕನಿಷ್ಠ ಅನುದಾನವನ್ನು ನೀಡಿದ್ದರೆ, ನಮ್ಮ ಸರಕಾರವು ಈ ಅನುದಾನವನ್ನು ದ್ವಿಗುಣಗೊಳಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.

ರಾಜ್ಯದಲ್ಲಿ ಮತ್ತೆ ಗೆಲುವಿನ ವಿಶ್ವಾಸ- ಬೈರತಿ ಬಸವರಾಜ್
ಕೇಂದ್ರದ ನರೇಂದ್ರ ಮೋದಿಜಿ ಅವರ ನೇತೃತ್ವದ ಬಿಜೆಪಿ ಸರಕಾರ ಮತ್ತು ರಾಜ್ಯದ ಬೊಮ್ಮಾಯಿಯವರ ಸರಕಾರದಿಂದ ದೇಶ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗಿದೆ. ಇದನ್ನು ಗಮನಿಸಿ ಜನತೆ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ರಾಜ್ಯದ ಸಚಿವ ಬೈರತಿ ಬಸವರಾಜ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಸವಣ್ಣನ ಪುಣ್ಯಭೂಮಿಯಿಂದ ಹೊರಟ ವಿಜಯ ಯಾತ್ರೆ: ಶಂಕರ ಪಾಟೀಲ ಮುನೇನಕೊಪ್ಪ
ರಾಜ್ಯದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಮಾತನಾಡಿ, ಇದು ಜನಸಂಕಲ್ಪ ಯಾತ್ರೆಯಾಗಿಲ್ಲ; ಬಸವಣ್ಣನ ಪುಣ್ಯಭೂಮಿಯಿಂದ ಹೊರಟ ಚಾಮರಾಜನಗರದ ವರೆಗೆ ನಡೆಯುವ ವಿಜಯ ಯಾತ್ರೆಯಂತಿದೆ ಎಂದು ತಿಳಿಸಿದರು. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಅನುಭವ ಮಂಟಪದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದಾರೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/992/feed 0
ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ- ಸಚಿವ ಪ್ರಭು ಚೌಹಾಣ್ https://iambjp.in/archives/989 https://iambjp.in/archives/989#respond Tue, 18 Oct 2022 09:57:52 +0000 https://iambjp.in/?p=989 ಬೆಂಗಳೂರು: ಕರ್ನಾಟಕದಲ್ಲಿ ಸರ್ವರಿಗೂ ನ್ಯಾಯ ಮತ್ತು ಅಭಿವೃದ್ಧಿ ಪರ್ವವು ಬಿಜೆಪಿ ಸರಕಾರದ ಮೂಲಕ ಈಡೇರುತ್ತಿದೆ ಎಂದು ರಾಜ್ಯದ ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದರು.

ಬೀದರ್ ಜಿಲ್ಲೆಯ ಔರಾದ್­ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪ್ರಮುಖ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ಅವರು ಕೈಗೊಂಡಿದ್ದಾರೆ. ಸುಮಾರು 4 ದಶಕಗಳಲ್ಲಿ ಈ ಬೇಡಿಕೆ ಇತ್ತು. ಅದನ್ನು ಬೊಮ್ಮಾಯಿಯವರು ಈಡೇರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ತಿಳಿಸಿದರು.

ರಾಜ್ಯವು ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಅನೇಕ ಯೋಜನೆಗಳನ್ನು ಬೊಮ್ಮಾಯಿಯವರು ಕೈಗೊಂಡಿದ್ದಾರೆ. ಮಹಿಳಾ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶ್ರಮಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಗರಿಷ್ಠ ಅನುದಾನವನ್ನು ಔರಾದ್‍ಗೆ ನೀಡಿವೆ ಎಂದು ಮೆಚ್ಚುಗೆ ಸೂಚಿಸಿದರು. ಪ್ರತಿ ಮನೆಗೆ ನಳ್ಳಿ ನೀರು ಒದಗಿಸಲು ನಮ್ಮ ಸರಕಾರ ಬದ್ಧವಿದೆ ಎಂದರು.

ಕಿಸಾನ್ ಸಮ್ಮಾನ್ ಸೇರಿ ಅನೇಕ ಯೋಜನೆಗಳ ಮೂಲಕ ಕೇಂದ್ರ ಸರಕಾರವು ದೇಶದ ಎಲ್ಲ ಸಮುದಾಯದವರ ವಿಕಾಸಕ್ಕೆ ಶ್ರಮಿಸಿದೆ. ರಾಜ್ಯ ಸರಕಾರವೂ ಈ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು. ಕಾರಂಜಾದಿಂದ ಔರಾದ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿ ಕೊಡಿ ಎಂದು ಅವರು ಮನವಿ ಮಾಡಿದರು. ಪುರಸಭೆಯನ್ನಾಗಿ ಪ್ರಕಟಿಸಿ ಎಂದು ವಿನಂತಿಸಿದರು. ಮರಾಠಾ ಮೀಸಲಾತಿಯನ್ನು 2 ಎಗೆ ಬದಲಿಸಿ ಎಂದು ಮನವಿ ಮಾಡಿದರು.

ಗೋಶಾಲೆಗಳ ಸಂಬಂಧ 100 ಕೋಟಿ ಅನುದಾನ ನೀಡಲಾಗಿದೆ ಎಂದ ಅವರು ತಮ್ಮ ಸಚಿವಾಲಯದ ಮೂಲಕ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/989/feed 0
ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ: ನಳಿನ್‍ಕುಮಾರ್ ಕಟೀಲ್ https://iambjp.in/archives/974 https://iambjp.in/archives/974#respond Thu, 13 Oct 2022 11:46:09 +0000 https://iambjp.in/?p=974 ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು.

ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು, ಸೈಕಲ್ ಯಾತ್ರೆಗಳು ಮತ್ತು ಹೋರಾಟಗಳನ್ನು ಇವತ್ತು ಯಾರೂ ಮಾಡಿಲ್ಲ. ಅದು ಯಾವ ನಾಯಕರಿಂದಲೂ ಸಾಧ್ಯವೂ ಇಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಇವತ್ತಿನ ಸ್ಥಿತಿಗತಿಗಳನ್ನು ನೋಡಿದಾಗ ಅವರಿಗೆ ಕೇವಲ ಅರಳುಮರಳಲ್ಲ. ಸಿದ್ರಾಮಣ್ಣ ಅಧಿಕಾರ ಕಳಕೊಂಡು ಹುಚ್ಚರಾಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಕೆಟ್ಟ ಕೆಟ್ಟ ಶಬ್ದದಿಂದ ಏಕವಚನದಿಂದ ಮಾತನಾಡಿ ದುರಹಂಕಾರ ತೋರುತ್ತಿದ್ದಾರೆ. ಕಾಂಗ್ರೆಸ್‍ನಲ್ಲಿ ಡಿ.ಕೆ.ಶಿವಕುಮಾರ್ – ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವ ಭಯ ಅವರನ್ನು ಕಾಡುತ್ತಿದೆ. ಅಧಿಕಾರ ಕಳಕೊಂಡು ಹುಚ್ಚರಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು.

ರಾಹುಲ್ ಗಾಂಧಿ ಕೇವಲ ಸಂಸದರಷ್ಟೇ. ಕಾಂಗ್ರೆಸ್ ನಾಯಕರಿರಬಹುದು. ಮೋದಿಯವರು ಈ ದೇಶದ ಪ್ರಧಾನಮಂತ್ರಿ. ಇಂದಿರಾ ಗಾಂಧಿಯವರು ಪ್ರಧಾನಿ ಆಗಿದ್ದಾಗ ಅವರನ್ನು ಬಿಜೆಪಿ ಹಿರಿಯ ಮುಖಂಡ- ವಿರೋಧ ಪಕ್ಷದ ನಾಯಕ ಅಟಲ್ ಬಿಹಾರಿ ವಾಜಪೇಯಿಯವರು ಯಾವತ್ತೂ ಏಕವಚನದಿಂದ ಟೀಕಿಸಿರಲಿಲ್ಲ. ವಿರೋಧ ಪಕ್ಷಗಳ ಮಾದರಿ ನಡವಳಿಕೆಗೆ ಅಟಲ್ ಬಿಹಾರಿ ವಾಜಪೇಯಿ ಅವರು ಮಾದರಿ. ಸಿದ್ರಾಮಣ್ಣನ ವಿರುದ್ಧ ಯಡಿಯೂರಪ್ಪರವರು ಹೇಳಿದ್ದು ಸರಿ ಇದೆ ಎಂದು ಸಮರ್ಥಿಸಿದರು.

ಶಬ್ದಗಳ ಬಳಕೆ ಮಾಡುವುದನ್ನು ಸಿದ್ರಾಮಣ್ಣ ಕಲಿಯಲಿ. ಅವರು ಗೌರವಯುತವಾಗಿ ನಡೆದರೆ ಎಲ್ಲರೂ ಗೌರವದಿಂದ ನಡೆದುಕೊಳ್ಳುತ್ತಾರೆ. ಅವರು ಬೇಜವಾಬ್ದಾರಿಯಿಂದ ನಡೆದರೆ ಅನಿವಾರ್ಯವಾಗಿ ಬೇಜವಾಬ್ದಾರಿ ಉತ್ತರ ಕೊಡಬೇಕಾಗುತ್ತದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಸಿದ್ರಾಮಣ್ಣನನ್ನು ಕಂಡರೆ ನಮಗ್ಯಾಕೆ ಭಯ ಇರಬೇಕು? ಡಿಕೆಶಿ, ಪರಮೇಶ್ವರ್, ಖರ್ಗೆಗೆ ಭಯ ಇರಬೇಕು. ಅವರೆಲ್ಲರ ಭಯ ಇವರಿಗೆ, ಇವರ ಭಯ ಅವರಿಗೆ ಇದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾಂಗ್ರೆಸ್ ಈಗ ಪಾದಯಾತ್ರೆ ಆರಂಭಿಸಿದೆ. ನಮ್ಮ ಪಕ್ಷ ಬೆಳೆದಿರುವುದೇ ಯಾತ್ರೆಯ ಮುಖಾಂತರ. ಸಿದ್ರಾಮಣ್ಣ ಯಾರ್ಯಾರದೋ ಕಾಲು ಹಿಡಿದು, ಭಿಕ್ಷೆ ಬೇಡಿ ಮುಖ್ಯಮಂತ್ರಿ ಆದವರು. ದೇವೇಗೌಡರ ಕಾಲಿಗೆ ಅಡ್ಡ ಬಿದ್ದು, ಬೆಳೆದವರು. ಮೊದಲು ಅವರ ಕಾಲಡಿಯಲ್ಲಿ ಕುಳಿತು ನಂತರ ಕಾಲಿನಲ್ಲಿ ತುಳಿದವರು ಎಂದು ಟೀಕಿಸಿದರು.

ಹಿಜಾಬ್ ವಿಚಾರ ನ್ಯಾಯಾಲಯದ ಮುಂದೆ ಇರುವ ಕಾರಣ ನಾನು ಅದರ ಬಗ್ಗೆ ಚರ್ಚಿಸುವುದಿಲ್ಲ ಎಂದು ಅವರು ತಿಳಿಸಿದರು.

]]>
https://iambjp.in/archives/974/feed 0
ಮೀಸಲಾತಿ ವಿಚಾರದಲ್ಲಿ ದಿಟ್ಟ ನಿರ್ಧಾರ – ಬಸವರಾಜ ಬೊಮ್ಮಾಯಿ https://iambjp.in/archives/971 https://iambjp.in/archives/971#respond Thu, 13 Oct 2022 11:43:49 +0000 https://iambjp.in/?p=971 ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ- ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ ಮಾಡಿಲ್ಲ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದವರು ದೀನ ದಲಿತರು ಮತ್ತು ಎಸ್‍ಸಿ, ಎಸ್ಟಿ ಸಮುದಾಯದವರ ವಿರೋಧಿಗಳು ಎಂದು ಆಕ್ಷೇಪಿಸಿದರು.

ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. ರೈತ ಕೃಷಿ ಕೂಲಿಕಾರರು ಸೇರಿ ಅನೇಕ ಸಮುದಾಯಗಳಿಗೆ ಇದನ್ನು ವಿಸ್ತರಿಸಲಾಗಿದೆ. ಉದ್ಯೋಗ ಹೆಚ್ಚಳಕ್ಕೆ ನಾವು ಆದ್ಯತೆ ಕೊಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ, 5 ಲಕ್ಷ ಯುವಕರಿಗೆ ಕೆಲಸ ಸಿಗುವಂತೆ ಮಾಡುತ್ತಿದ್ದೇವೆ ಎಂದು ವಿವರಿಸಿದ ಅವರು, ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯವು ಕೇವಲ ಭಾಷಣದ ಸರಕಾಗಿತ್ತು ಹಾಗೂ ಮತಬ್ಯಾಂಕ್ ಮಾಡಲು ಇದನ್ನು ಬಳಸಲಾಗುತ್ತಿತ್ತು ಎಂದು ಆಕ್ಷೇಪಿಸಿದರು. ಕನಕದಾಸರ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರಕಾರ ಅನುದಾನ ಕೊಟ್ಟಿದೆ ಎಂದರು.

ಸೋನಿಯಾ ಗಾಂಧಿ ಅವರಿಗೆ ಬಳ್ಳಾರಿ ಕ್ಷೇತ್ರವು ರಾಜಕೀಯವಾಗಿ ಮರುಜನ್ಮ ಕೊಟ್ಟಿತ್ತು. ಆಗ ಕಾಂಗ್ರೆಸ್ ಸರಕಾರವು ಈ ಭಾಗಕ್ಕೆ ಸಾವಿರಾರು ಕೋಟಿ ಅನುದಾನದ ಭರವಸೆ ಕೊಟ್ಟಿತ್ತು. ಆದರೆ, ಅದನ್ನು ಈಡೇರಿಸಲಿಲ್ಲ ಎಂದು ವಿವರಿಸಿದರು. ಈಗ ಮತ್ಯಾಕೆ ಬಂದಿದ್ದೀರಿ? ಏನು ಸುಳ್ಳು ಹೇಳಲು ಬಂದಿದ್ದೀರಿ? ಎಂದು ಪ್ರಶ್ನಿಸಿದರು. ನಾವೆಲ್ಲರೂ ಜಾಗೃತರಾಗಿದ್ದೇವೆ. ನಿಮ್ಮ ಸುಳ್ಳನ್ನು ನಂಬುವುದಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ಸಿಗರಿಗೆ ರವಾನಿಸಿ ಎಂದು ಜನರಲ್ಲಿ ಮನವಿ ಮಾಡಿದರು.

ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡಿತ್ತು. ಕಾಂಗ್ರೆಸ್ ನಾಯಕರು ಕರ್ನಾಟಕವನ್ನು ಪೇಟಿಎಂ ಮಾಡಿಕೊಂಡಿದ್ದರು. ಅದೇ ಸಂಬಂಧ ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷರು ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ನೋಡಿದರೆ ಕನಿಕರ ಎನಿಸುತ್ತದೆ; ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಅವರು ತಿಳಿಸಿದರು.

ರಾಜ್ಯದ ಜನರು ಜಾಗೃತರಾಗಿದ್ದಾರೆ. ನಿಮ್ಮ ಹಳೆಯ ನಾಟಕಗಳನ್ನು ಕರ್ನಾಟಕದ ಜನರು ನಂಬುವುದಿಲ್ಲ. ನುಡಿದಂತೆ ನಡೆದವರಿಗೆ ಮಾತ್ರ ಅವಕಾಶ ಸಿಗಲಿದೆ. ಈ ಭಾಗ್ಯ ಆ ಭಾಗ್ಯ ಎಂದು ತಿಳಿಸಿದರೂ ನಿಮ್ಮನ್ನು ಜನರು ಯಾಕೆ ಮನೆಗೆ ಕಳಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಿಗೆ ಪ್ರಶ್ನೆ ಹಾಕಿದರು.

ಅನ್ನ ಭಾಗ್ಯದಲ್ಲಿ ಕನ್ನ ಭಾಗ್ಯ ಇತ್ತು. ಎಸ್‍ಸಿ, ಎಸ್‍ಟಿ ಜನಾಂಗದವರಿಗೆ ಬೋರ್‍ವೆಲ್ ವಿಚಾರದಲ್ಲೂ ಹಗರಣ ಮಾಡಿದ್ದೀರಿ. ಕಾಂಗ್ರೆಸ್ ತಪ್ಪು ಲೆಕ್ಕಾಚಾರ- ಭ್ರಷ್ಟಾಚಾರದಿಂದ ಕರ್ನಾಟಕದ ಅಭಿವೃದ್ಧಿಗೆ ಹಿನ್ನಡೆ ಆಗಿತ್ತು ಎಂದು ತಿಳಿಸಿದರು. ಇಲ್ಲಿನ ಜನಸ್ತೋಮ ನೋಡಿದಾಗ ಇಲ್ಲಿ ಕಮಲದ ಹೂವು ಅರಳುವುದು ಖಚಿತ ಎಂದು ವಿಶ್ವಾಸವಾಗಿದೆ ಎಂದು ನುಡಿದರು. ಒಗ್ಗಟ್ಟಿನಿಂದ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ನಮ್ಮ ನಾಯಕರಾದ ಯಡಿಯೂರಪ್ಪ ಅವರ ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದರು. 100 ಕೋಟಿ ರೂಪಾಯಿ ಅನುದಾನ ಕೊಟ್ಟರು. ನಾನು ಈ ನಿಗಮಕ್ಕೆ ಈ ಬಾರಿ 100 ಕೋಟಿ ನೀಡಲಿದ್ದೇನೆ ಎಂದು ತಿಳಿಸಿದರು. ಎಸ್‍ಸಿ, ಎಸ್‍ಟಿ ಸಮುದಾಯಗಳ ಅಭಿವೃದ್ಧಿಗೆ 28 ಸಾವಿರ ಕೋಟಿ ಅನುದಾನವನ್ನು ಕೊಡಲಾಗಿದೆ ಎಂದು ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆಗೆ 6 ಸಾವಿರ ಕೋಟಿ ಕೊಡಲಾಗಿದೆ ಎಂದರು.

ಹೂವಿನಹಡಗಲಿಯ ಜನರು ಹೂವಿನಂಥವರು ಎಂದು ಮೆಚ್ಚುಗೆ ಸೂಚಿಸಿದರು. ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಹೆಚ್ಚಿನ ಮಹತ್ವ ನೀಡಿದ್ದರಿಂದ ಇಲ್ಲಿನ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ವಕಾಶ ಲಭಿಸಿದೆ. ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ಬಿಜೆಪಿ ನೀಡಿದೆ ಎಂದು ವಿವರಿಸಿದರು.

ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ.ಅರುಣಾ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

]]>
https://iambjp.in/archives/971/feed 0