Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
karnataka – I am BJP https://iambjp.in Making Bharat Vishwa Guru Wed, 31 Jan 2024 07:13:38 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png karnataka – I am BJP https://iambjp.in 32 32 ಬಿಜೆಪಿ-ಆರ್‌ಎಸ್ಎಸ್ ಸಂವಿಧಾನ ವಿರೋಧಿ ಎಂದ ಸಿದ್ದರಾಮಯ್ಯಗೆ ಗುಮ್ಮಿದ ಗುರ್ಮೆ ಸುರೇಶ್ ಶೆಟ್ಟಿ https://iambjp.in/archives/2167 https://iambjp.in/archives/2167#respond Wed, 31 Jan 2024 07:13:38 +0000 https://iambjp.in/?p=2167 ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಜಾತಿ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳು ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಾ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಬಿಜೆಪಿ-ಆರ್‌ಎಸ್ ವಿರೋಧಿಸುತ್ತಿದೆ, ಮೀಸಲಾತಿ ವಿರೋಧಿ ಬಿಜೆಪಿ ಮತ್ತು ಆರ್‌ಎಸ್ಎಸ್ ಅನ್ನು ತಿರಸ್ಕರಿಸಿ ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು‌ ಸಿದ್ದರಾಮಯ್ಯ ಹೇಳಿಕೆ ಮತ್ತು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಗವತ್ ಅವರ ಹೇಳಿಕೆಯ ಸ್ಕ್ರೀನ್‌ಶಾಟ್‌ ಹಾಕಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಿದ್ದರಾಮಯ್ಯಗೆ ಕೌಂಟರ್ ನೀಡಿದ್ದಾರೆ.

 

ಆರ್‌ಎಸ್‌ಎಸ್ ಮೀಸಲಾತಿ ವಿರೋಧಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಯಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಗವತ್ ಅವರ “ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಮುಂದುವರೆಯಲಿ” ಎಂಬ ಹೇಳಿಕೆಯ ವರದಿಯನ್ನು ಹಾಕಿ ಕುಟುಕಿದ್ದಾರೆ.

ಮೀಸಲಾತಿ ವಿಚಾರವಾಗಿ ಮೋಹನ್‌ ಭಾಗವತ್‌ ಅವರು “ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮದೇ ಸಹಜೀವಿಗಳನ್ನ ಹಿಂದೆ ಇರಿಸಿದ್ದೇವೆ. ನಾವು ಅವರ ಬಗ್ಗೆ ಕಾಳಜಿಯನ್ನೇ ವಹಿಸುತ್ತಿಲ್ಲ. 2000 ವರ್ಷಗಳ ವರೆಗೆ ಈ ಪ್ರಕ್ರಿಯೆ ಹೀಗೆ ಮುಂದುವರಿದಿದೆ. ಹಾಗಾಗಿ ಸಮಾಜದಲ್ಲಿ ಅಸಮಾನತೆಯನ್ನು ತೊಲಗಿಸುವವರೆಗೆ, ಅಸಮಾನತೆಗೆ ಒಳಗಾದವರ ಪುನಶ್ಚೇತನಕ್ಕಾಗಿ ವಿಶೇಷ ಪರಿಹಾರ ನೀಡಬೇಕು. ಅವುಗಳಲ್ಲಿ ಮೀಸಲಾತಿ ಕೂಡ ಒಂದು. ಆದ್ದರಿಂದ ಸಮಾಜದಲ್ಲಿ ತಾರತಮ್ಯ ಇರುವವರೆಗೆ ಮೀಸಲಾತಿ ಅನ್ನೋದು ಮುಂದುವರಿಯಬೇಕು” ಎಂದು ಈ ಹಿಂದೆ ಒತ್ತಾಯಿಸಿದ್ದರು.

]]>
https://iambjp.in/archives/2167/feed 0
ಇದು ಯಾವ ಸೀಮೆ ಸೆಕ್ಯುಲರಿಸಂ?: ಎನ್. ರವಿಕುಮಾರ್ https://iambjp.in/archives/2155 https://iambjp.in/archives/2155#respond Tue, 30 Jan 2024 11:20:47 +0000 https://iambjp.in/?p=2155 ಹಿಂದೂ ಎಂಎಲ್‍ಎಗಳು ಬೇಕು. ಎಂಪಿಗಳೂ ಬೇಕು. ಆದರೆ, ನಮ್ಮ ಊರಿನಲ್ಲಿ, ದೇವಸ್ಥಾನಗಳ ಮೇಲೆ ಹಿಂದೂ ಧ್ವಜ, ಕೇಸರಿ ಧ್ವಜ, ಭಗವಾಧ್ವಜ ಹಾರಿಸುವುದು ಯಾಕೆ ಬೇಡ? ಇದು ಯಾವ ಸೀಮೆಯ ಸೆಕ್ಯುಲರಿಸಂ ಎಂಬ ಹಿನ್ನೆಲೆಯಲ್ಲಿ 12 ಪ್ರಶ್ನೆಗಳನ್ನು ನಾವು ಸಿದ್ದರಾಮಯ್ಯರ ಸರಕಾರಕ್ಕೆ ಕೇಳುತ್ತಿರುವುದಾಗಿ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೊನ್ನೆ ತಾನೇ ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ ಮಾಡಿದ್ದೀರಿ. ಶೋಷಿತರ ಎಲ್ಲ ಮತ ಪಡೆದ ನೀವು ಅವರಿಗೆ ಏನು ಕೊಟ್ಟಿದ್ದೀರಿ ಎಂದು ಕೇಳಿದರು. ನಿಮ್ಮ ಈ ಸಮಾವೇಶ ಕೇವಲ ‘ಚಿಕನ್ ಬಿರಿಯಾನಿಗೆ’ ಸೀಮಿತವಾಗಲಿಲ್ಲವೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಹಿಂದವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಮಾತ್ರ (ಅ) ಅಪ್ಪಿಕೊಂಡಿದ್ದಿರಿ ಎಂದು ಟೀಕಿಸಿದರು.

ಅಂಬೇಡ್ಕರ್ ನಿಗಮ, ಬಂಜಾರ ನಿಗಮ, ಆದಿಜಾಂಬವ ನಿಗಮ, ಅಂಬಿಗರ ಚೌಡಯ್ಯ ನಿಗಮ, ಕಾಡುಗೊಲ್ಲ ಅಭಿವೃದ್ಧಿ ನಿಗಮ ಇತ್ಯಾದಿ ಹಿಂದುಳಿದ ವರ್ಗಗಳಿಗೆ ಎಸ್.ಸಿ., ಎಸ್.ಟಿ. ನಿಗಮಗಳಿಗೆ ಯಾವುದೇ ಹಣಕಾಸಿನ ಅನುದಾನ ನೀಡದಿರುವುದು ಸರಿಯೇ? ಎಂದರು. ಅವುಗಳಿಗೆ ಕೊಡುವ ಎಲ್ಲ ಹಣಕಾಸು ಅನುದಾನ ರದ್ದು ಮಾಡಿದ್ದಾರೆ ಎಂದು ವಿವರಿಸಿದರು.

ಬಿಜೆಪಿಯವರು ಮಾತ್ರ ಹಿಂದುಗಳೇ? ನಾವು ಹಿಂದುಗಳಲ್ಲವೇ ಎಂದು ಮಾನ್ಯ ಸಿದ್ದರಾಮಯ್ಯ ಮತ್ತು ಮಾನ್ಯ ಡಿ.ಕೆ.ಶಿವಕುಮಾರ್ ಅವರು ಕೇಳುತ್ತಿದ್ದಾರೆ. ನೀವೂ ಹಿಂದುಗಳಾಗಿದ್ದರೆ ಕೆರೆಗೋಡಿನಲ್ಲಿ ಹಾಕಿದ ಭಗವಾಧ್ವಜ, ಕೇಸರಿ ಧ್ವಜವನ್ನು ಇಳಿಸಿದಿರಿ? ಎಸ್‍ಸಿ ಎಸ್‍ಟಿ ಅಭಿವೃದ್ಧಿಗೆ ನೀಡಿದ ಹಣ, ಆದಿಜಾಂಬವ ಅಭಿವೃದ್ಧಿ ನಿಗಮ, ಬಂಜಾರ ಅಭಿವೃದ್ಧಿ ನಿಗಮಕ್ಕೆ ನೀಡಿದ ಅನುದಾನವನ್ನು ಸಂಪೂರ್ಣವಾಗಿ ಯಾಕೆ ನಿಲ್ಲಿಸಿದಿರಿ ಎಂದೂ ಅವರು ಪ್ರಶ್ನೆ ಮಾಡಿದರು.

ಇದು ಮುಲ್ಲಾ ಮೌಲ್ವಿ ಸರಕಾರ..
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಘೋಷಿಸಿ 1 ಸಾವಿರ ಕೋಟಿಯ ಕಾರ್ಯಾದೇಶ ಮಾಡಿಸಿದ್ದಾರೆ. ಹಿಂದುಗಳಿಗೇನು ಕೊಟ್ಟಿರಿ? ತೆಂಗಿನಕಾಯಿ ಚಿಪ್ಪು ಕೊಟ್ಟಿರಿ. ಇದ್ಯಾವ ನ್ಯಾಯ ಸಿದ್ದರಾಮಯ್ಯನವರೇ ಎಂದು ಆಕ್ಷೇಪಿಸಿದರು. ಇದು ಸಿದ್ದರಾಮಯ್ಯರ ಸರಕಾರ ಅಲ್ಲ. ಮುಲ್ಲಾ ಮೌಲ್ವಿಗಳ ಸರಕಾರ ಎಂದು ಎನ್.ರವಿಕುಮಾರ್ ಅವರು ಆರೋಪಿಸಿದರು.

ಬಿಜೆಪಿ ಸರ್ಕಾರವಿದ್ದಾಗ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾನೂನುಗಳನ್ನು ಜಾರಿಗೊಳಿಸಲಾಗಿತ್ತು, ಆದರೆ ಈಗ ನಿರಂತರ ಗೋಹತ್ಯೆ ಮತ್ತು ರಾಜಾರೋಷವಾಗಿ ಮತಾಂತರಕ್ಕೆ ಅನುಮತಿ ನೀಡಿರುವುದು ಸರಿಯೇ? ನಿಮ್ಮದು ಹಿಂದೂಗಳ ಸರಕಾರವೇ ಎಂದು ಪ್ರಶ್ನಿಸಿದರು.

ಶಿವನ ದೇವಸ್ಥಾನ, ಕಾಳಮ್ಮನ ದೇವಸ್ಥಾನ, ಬಸವಣ್ಣನ ದೇವಸ್ಥಾನ ಸೇರಿ ರಾಜ್ಯದ ಸಾವಿರಾರು, ಲಕ್ಷಾಂತರ ದೇವಾಲಯಗಳ ಹಣ ಸರ್ಕಾರಕ್ಕೆ ಬೇಕು. ಆದರೆ, ಹಿಂದೂಗಳ ಆರಾಧ್ಯ ದೈವ ಹನುಮ ಧ್ವಜ ಹಾರಿಸುವುದು ಏಕೆ ಬೇಡ? ಇದು ಯಾವ ಸೆಕ್ಯುಲರಿಸಂ? ಎಂದು ಸಿದ್ದರಾಮಯ್ಯರಿಗೆ ಪ್ರಶ್ನೆ ಹಾಕಿದರು.

ಸಮಾಜ ಮುಂದೆ ಬರಲು ಎಸ್.ಸಿ., ಎಸ್.ಟಿ. ಗಳಿಗೆ, ಒಬಿಸಿಗಳಿಗೆ ಆದ್ಯತೆ ಕೊಡಲಾಗುತ್ತದೆ. ಎಸ್.ಸಿ., ಎಸ್.ಟಿ. ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದಲ್ಲಿ 11,114 ಕೋಟಿ ಹಣವನ್ನು ನಿಮ್ಮ ಗ್ಯಾರಂಟಿಗಳಿಗೆ ಬಳಸಿದ್ದೇಕೆ? ಯಾಕೆಂದರೆ ನಿಮ್ಮದು ಮುಲ್ಲಾ ಮೌಲ್ವಿ ಸರಕಾರ ಅಲ್ಲವೇ ಎಂದು ಕೇಳಿದರು.

ಚುನಾವಣೆ ಹತ್ತಿರ ಬಂತೆಂದರೆ ನೀವು ಶೋಷಿತರ ಸಮಾವೇಶ, ಹಿಂದುಳಿದವರ ಸಮಾವೇಶ, ಅಲ್ಪಸಂಖ್ಯಾತರ ಸಮಾವೇಶ ಮಾಡುತ್ತೀರಿ. ಯಾಕೆ ಸಿದ್ದರಾಮಯ್ಯನವರೇ ಈಗ ಅಹಿಂದ ಕೈಬಿಟ್ಟಿದ್ದೀರಿ ಎಂದು ಪ್ರಶ್ನೆ ಕೇಳಿದರು. ಹಿಂದುಳಿದವರಿಗೆ ನೀವು ತೆಂಗಿನಕಾಯಿ ಚಿಪ್ಪು ಕೊಟ್ಟಿರಲ್ಲವೇ? ಎಂದು ಪ್ರಶ್ನಿಸಿದರು.

ಕೆರೆಗೋಡಿನಲ್ಲಿ ಹಿಂದೂ ಧ್ವಜವನ್ನು ತಕ್ಷಣ ಕೆಳಗಿಳಿಸುತ್ತೀರಿ. ಸರಕಾರಿ ಕಚೇರಿಗಳ ಮುಂದೆ, ಸರಕಾರಿ ಸಮುದಾಯ ಭವನದಲ್ಲಿ ಕೋಮುದ್ವೇಷ ಬಿತ್ತದಿರಿ ಎನ್ನುವ ನಿಮ್ಮ ಸರಕಾರವು ಕೋಮು ಸಂಘರ್ಷ ಉಂಟು ಮಾಡುವ ಟಿಪ್ಪು ಸುಲ್ತಾನ ಜಯಂತಿಯನ್ನು ವಿಧಾನಸೌಧದಲ್ಲಿ ಮಾಡಬಹುದೇ? ಬ್ಯಾಂಕ್ವೆಟ್ ಹಾಲ್‍ನಲ್ಲಿ ಮಾಡಬಹುದೇ? ಹಾಗಾಗಿ ನಿಮ್ಮ ಸರಕಾರ ಮುಲ್ಲಾ ಮೌಲ್ವಿ ಸರಕಾರ ಎಂದು ಟೀಕಿಸಿದರು.

ಹಿಂದೂಗಳ ಹೋರಾಟವಾದರೆ ಅವರ ಮೇಲೆ ಲಾಠಿಚಾರ್ಜ್ ಮಾಡುತ್ತಾರೆ. ಅವರ ಮೇಲೆ ಕೇಸು ಹಾಕುತ್ತಾರೆ. ಆದರೆ, ಕೆಎಫ್‍ಡಿ, ಪಿಎಫ್‍ಐ ಮೇಲಿನ ಕೇಸ್ ವಾಪಾಸ್ ಪಡೆಯುತ್ತೀರಿ. ಹಾಗಾಗಿ ಮುಲ್ಲಾ ಮೌಲ್ವಿ ಸರಕಾರ ನಿಮ್ಮದಲ್ಲವೇ ಎಂದರು. 1,600 ಜನ ಪುಂಡ ಪೋಕರಿಗಳು, ಉಗ್ರವಾದಿಗಳನ್ನು ಬಿಡುಗಡೆ ಮಾಡಿದ್ದೀರಿ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯನವರು ಕನ್ನಡ ವ್ಯಾಕರಣ ಮಾಸ್ತರ್. ಯಾರಾದರೂ ಏಕವಚನದಲ್ಲಿ ಮಾತನಾಡಿದರೆ ಅವರಿಗೆ ಕೋಪ ಬರುತ್ತದೆ. ಆದರೆ, ಸಿದ್ದರಾಮಯ್ಯನವರು ಯಾರಿಗೆ ಬೇಕಾದರೂ ಏಕವಚನದಲ್ಲಿ ಮಾತನಾಡಬಹುದು. ಮೋದಿಯವರಿಗೆ ಏಕವಚನ, ಯಡಿಯೂರಪ್ಪನವರಿಗೆ ಏಕವಚನದಲ್ಲಿ ಮಾತನಾಡಬಹುದು. ಮಾನ್ಯ ರಾಷ್ಟ್ರಪತಿ, ಒಬ್ಬ ಮಹಿಳೆಗೂ ಏಕವಚನದಲ್ಲಿ ಸಂಬೋಧನೆ ಸರಿಯೇ ಎಂದು ಕೇಳಿದರು. ಇದು ಸಂಸ್ಕಾರ ಇಲ್ಲದ ಸರಕಾರ ಎಂದು ಆರೋಪಿಸಿದರು.

ಏಕವಚನದಲ್ಲಿ ಮಾತನಾಡಿದ್ದೀರಿ ಎಂದು ಅನಂತಕುಮಾರ್ ಹೆಗಡೆಯವರಿಗೆ ನೀವು ಪಾಠ ಮಾಡುತ್ತೀರಿ. ನಿಮಗೆ ಪಾಠ ಮಾಡುವವರು ಯಾರೂ ಇಲ್ಲವೇ? ಮೌಲ್ವಿ ಸರಕಾರದ ಮುಖ್ಯಸ್ಥರಾದ ಸಿದ್ದರಾಮಯ್ಯನವರೇ ನಿಮಗೆ ಈ ಪ್ರಶ್ನೆ ಕೇಳುತ್ತೇನೆ ಎಂದರು.

ರಾಜ್ಯ ಸರಕಾರವು ಈ 12 ಪ್ರಶ್ನೆಗಳಿಗೆ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದರು. ಇದು ಎಸ್‍ಸಿ, ಎಸ್‍ಟಿಗಳಿಗೆ ನ್ಯಾಯ ಕೊಡತಕ್ಕಂಥ, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡತಕ್ಕಂಥ ಸರಕಾರ ಅಲ್ಲ. ಇದು ಅಹಿಂದ ಸರಕಾರ ಅಲ್ಲ. ಕರ್ನಾಟಕದ 6.5 ಕೋಟಿ ಜನರ ಸರಕಾರ ಅಲ್ಲ. ಇದು ಮುಲ್ಲಾ ಮೌಲ್ವಿಗಳನ್ನು ಮಾತ್ರ ಅಪ್ಪಿಕೊಳ್ಳುವ, ಒಪ್ಪಿಕೊಳ್ಳುವ ಒಂದು ವಿಶಿಷ್ಟವಾದ ಸೆಕ್ಯುಲರಿಸಂ ಬೋಧಿಸುವ ಮುಲ್ಲಾ ಮೌಲ್ವಿಗಳ ಸರಕಾರ ಎಂದು ಪುನರುಚ್ಚರಿಸಿದರು. ಈ ಸರಕಾರದಿಂದ ಕರ್ನಾಟಕಕ್ಕೆ ನ್ಯಾಯ ಸಿಗಲು ಸಾಧ್ಯವಿದೆಯೇ ಎಂದೂ ಕೇಳಿದರು.

]]>
https://iambjp.in/archives/2155/feed 0
ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್‌ ಸರ್ಕಾರ ಪತನ ; ಮಾಜಿ ಸಿಎಂ ಭವಿಷ್ಯ https://iambjp.in/archives/2152 https://iambjp.in/archives/2152#respond Tue, 30 Jan 2024 10:28:19 +0000 https://iambjp.in/?p=2152 ಲೋಕಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿರುವ ಕರ್ನಾಟಕ ರಾಜ್ಯದಿಂದ ಸಾಧ್ಯತೆಯ ಭವಿಷ್ಯವೊಂದು ಹೊರಬಿದ್ದಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ

ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳನ್ನೂ ಬಿಜೆಪಿ ಮೈತ್ರಿ ಗೆದ್ದರೆ ಕಾಂಗ್ರೆಸ್‌ ಸರ್ಕಾರವನ್ನು ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ ಸರ್ಕಾರ ಪತನದ ಸುದ್ದಿ ಹೊರಹಾಕಿದ್ದಾರೆ.

ಕಾಂಗ್ರೆಸ್‌ ನಾಯಕರು ಗ್ಯಾರೆಂಟಿಗಳ ಬಗ್ಗೆ ಹೇಳಿದ್ದೇ ಹೇಳಿದ್ದು, ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಆದರೆ ಈಗ ಕೊಡುತ್ತಿರುವ ಐದು ಕೆಜಿ ಕೂಡ ಮೋದಿ ಸರ್ಕಾರದ್ದು, ಇದು ಜನರಿಗೆ ಮಾಡುತ್ತಿರುವ ಮೋಸ. 200 ಯುನಿಟ್ ಉಚಿತ ವಿದ್ಯುತ್ ಫ್ರೀ ಕೊಡುತ್ತೇವೆ ಹೇಳಿ ಈಗ ಅದಕ್ಕೂ ಕಂಡೀಷನ್‌ ಹಾಕಿದ್ದಾರೆ, ರಾಜ್ಯದಲ್ಲಿ ಒಬ್ಬರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಿರುವ ದಾಖಲೆ ಇದ್ದರೆ ಕೊಡಿ, ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು.

]]>
https://iambjp.in/archives/2152/feed 0
ರಾಜ್ಯ ಸರ್ಕಾರಕ್ಕೆ ಸಂವಿಧಾನದ ಬಗ್ಗೆ ಗೌರವ ಇದೆಯೇ : ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಶ್ನೆ https://iambjp.in/archives/2149 https://iambjp.in/archives/2149#respond Tue, 30 Jan 2024 07:26:16 +0000 https://iambjp.in/?p=2149 ಬೆಂಗಳೂರು: ಸಂವಿಧಾನ ಜಾಗೃತಿ ಸಪ್ತಾಹ ಮಾಡುತ್ತಾರೆ. ಈ ಸರಕಾರದವರು ಸಂವಿಧಾನ ಗೌರವಿಸುತ್ತಾರಾ? ಇವರಿಗೇ ಮೊದಲು ಜಾಗೃತಿ ಮೂಡಿಸಬೇಕಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇವರಿಗೆ ಸಂವಿಧಾನ ಕುರಿತ ಪರಿಜ್ಞಾನ ಇಲ್ಲ. ಇವರು ಜನರ ಭಾವನೆ ಅರ್ಥ ಮಾಡಿಕೊಂಡಿಲ್ಲ. ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಕೆರೆಗೋಡಿನಲ್ಲಿ ಕಾನೂನು ಪ್ರಕಾರ ಅನುಮತಿ ಪಡೆದೇ ಧ್ವಜ ಹಾರಿಸಿದ್ದಾರೆ. ಕಾನೂನು ಪ್ರಕಾರ ತಪ್ಪಾಗಿದ್ದರೆ ನೋಟಿಸ್ ಕೊಡಬೇಕಿತ್ತು ತಾನೇ ಎಂದು ಕೇಳಿದರು. ಈಗಲಾದರೂ ಸರಕಾರ ಗ್ರಾಮಸ್ಥರ ಭಾವನೆಗೆ ಗೌರವ ಕೊಡುವ ಕೆಲಸ ಮಾಡಲಿ ಎಂದು ಒತ್ತಾಯವನ್ನು ಮುಂದಿಟ್ಟರು.

ಏಕಾಏಕಿ ಮುಂಜಾನೆ ಹೋಗಿ ಭಗವಾಧ್ವಜ ಇಳಿಸಿದ್ದು ಸರಿಯೇ? ನಿಯಮ ಮೀರಿ ರಾಷ್ಟ್ರಧ್ವಜ ಹಾರಿಸಿದ್ದು ಸರಿಯೇ ಎಂದೂ ಅವರು ಪ್ರಶ್ನಿಸಿದರು. ಸ್ಥಳೀಯರು ಕೆರೆಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನೂ ಯಾಕೆ ಎಫ್‍ಐಆರ್ ಮಾಡಿಲ್ಲ ಎಂದು ಕೇಳಿದರು.

ರಾಷ್ಟ್ರಧ್ವಜವನ್ನು ಪೂರ್ತಿ ಏರಿಸಿಲ್ಲ. ಇದೇನು ಸರಕಾರವೇ? ಯಾವ ರೀತಿ ನಡವಳಿಕೆ ಇದು ಎಂದು ಕೇಳಿದರು. ಬಿಜೆಪಿ- ಜೆಡಿಎಸ್ ನಡುವೆ ವೈಮನಸ್ಸು ಏನಿಲ್ಲ. ಮತ್ತೊಮ್ಮೆ ಮೋದಿ, ಮತ್ತೊಮ್ಮೆ ಬಿಜೆಪಿ ಎಂಬುದೇ ನಮ್ಮಲ್ಲರ ಗುರಿ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮಾಜಿ ಪ್ರಧಾನಿ ದೇವೇಗೌಡರು ಕೂಡ ಅಭಿಮಾನದಿಂದ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಲಿ ಎನ್ನುತ್ತಿದ್ದಾರೆ ಎಂದು ವಿವರಿಸಿದರು. ಮತ್ತೊಮ್ಮೆ ಬಿಜೆಪಿ, ಮತ್ತೊಮ್ಮೆ ಮೋದಿಜೀ ಬೇಕೆಂದು ಜನರು ಈಗಾಗಲೇ ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದರು.

ಇದೊಂದು ತುಘಲಕ್ ಸರಕಾರ. ಕಾನೂನನ್ನು ಇವರು ಗೌರವಿಸುವುದಿಲ್ಲ ಎಂದು ಟೀಕಿಸಿದರು. ಅದು ಗ್ರಾಮಸ್ಥರೇ ಹಣ ಸೇರಿಸಿ ನಿಲ್ಲಿಸಿದ ಧ್ವಜಸ್ತಂಭ. ಪಂಚಾಯತ್ ಕೂಡ ರಾಷ್ಟ್ರಧ್ವಜ, ನಾಡಧ್ವಜ, ಭಗವಾಧ್ವಜ ಹಾರಿಸಲು ಅನುಮತಿ ಕೊಟ್ಟಿದೆ ಎಂದು ಗಮನ ಸೆಳೆದರು. ಮಾಜಿ ಸಚಿವ ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಇದ್ದರು.

]]>
https://iambjp.in/archives/2149/feed 0
ಕಟೀಲ್‌ಗೆ ಬಿಕ್‌ ಶಾಕ್, ಕ್ಯಾಪ್ಟನ್‌ಗೆ ಟಿಕೆಟ್‌ ಸಿಗತ್ತಾ !? https://iambjp.in/archives/2137 https://iambjp.in/archives/2137#respond Tue, 30 Jan 2024 04:19:59 +0000 https://iambjp.in/?p=2137 ಲೋಕಸಭಾ ಚುನಾವಣೆಯ ರಣರಂಗ ಕಾವೇರುತ್ತಿದೆ. ದೇಶ 2024 ರ ಲೋಕಸಭಾ ಚುನಾವಣೆಗೆ ಸಜ್ಜುಗೊಂಡಿದ್ದು ರಾಜ್ಯದಲ್ಲೂ ಎಲ್ಲಾ ರಾಜಕೀಯ ಪಕ್ಷಗಳ ಪಾಳಯಗಳಲ್ಲಿ ಚುನಾವಣೆಯ ಪೂರ್ವ ಯಾರಿ ನಡೆಯುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿವೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವೂ ಈ ಬಾರಿ ಭಾರೀ ಸದ್ದು ಮಾಡುತ್ತಿದೆ. ಇಲ್ಲಿ ಹಾಲಿ ಸಂಸದರಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ಅಡ್ಡಗಾಲಾಗುತ್ತಿದ್ದಾರೆ. 4ನೇ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಿದ್ಧತೆ ನಡೆಸುತ್ತಿರುವ ಕಟೀಲ್‌ ಅವರಿಗೆ ಈಗ ಬಿಗ್‌ ಶಾಕ್‌ ಎದುರಾಗಿದೆ.

ಕಾರ್ಯಕರ್ತರ ವಿರೋಧ ಎದುರಿಸುತ್ತಿರುವ ಕಟೀಲ್‌ ಅವರ ಬದಲಿಗೆ ಕ್ಯಾ.ಬ್ರಿಜೇಶ್‌ ಚೌಟ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪಾಳಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಸದ್ದಿಲ್ಲದೆ ನಡೆಯುತ್ತಿದೆ. ಕ್ಯಾಪ್ಟನ್‌ ಅವರ ಹೆಸರಿಗೆ ವಿರೋಧ ಪಡಿಸುವ ಯಾವ ಕಾರಣವೂ ಕಟೀಲ್‌ ಬೆಂಬಲಿಗರಲ್ಲಿ ಇಲ್ಲ. ಪರಿವಾರ ಸಂಘಟನೆಗಳು ಕೂಡಾ ಕ್ಯಾಪ್ಟನ್‌ ಹೆಸರಿಗೆ ಸಮ್ಮತಿ ಸೂಚಿಸಿವೆ ಎಂದು ಹೇಳಲಾಗುತ್ತಿದೆ.

ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಸುಶಿಕ್ಷಿತರು, ಸಂಘ ಹಾಗೂ ಸೇನೆಯ ಹಿನ್ನೆಲೆ ಹೊಂದಿರುವ ವ್ಯಕ್ತಿ. ರಾಜಕೀಯ ಜೀವನ ಅಥವಾ ಸಾಮಾಜಿಕ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇವರ ಮೇಲಿಲ್ಲ ಎಂಬುದೇ ಕ್ಯಾಪ್ಟನ್‌ ಪಾಲಿನ ಬಹುದೊಡ್ಡ ಪ್ಲಸ್‌ ಪಾಯಿಂಟ್. 2019 ರ ಲೋಕಸಭಾ ಚುನಾವಣೆಯಲ್ಲಿ ಇವರ ಹೆಸರು ಪ್ರಬಲವಾಗಿ ಕೇಳಿಬಂದಿದ್ದರೂ ಅಂತಿಮವಾಗಿ ನಳಿನ್‌ ಅವರು ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾದರು. ಮುಂದೆ ರಾಜಕೀಯ ತುಳಿತಕ್ಕೊಳಗಾಗಿ ಯಾವುದೇ ಪ್ರಮುಖ ಜವಾಬ್ದಾರಿ ಇಲ್ಲದೆ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪೇರೆಂಟ್‌ ಬಾಡಿಯ ನಿರ್ಲಕ್ಷಕ್ಕೆ ಒಳಗಾಗಿದ್ದರು. ಅದೆಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ, ತಾಳ್ಮೆಯ ಪ್ರತಿರೂಪ ಎಂಬಂತಿದ್ದರು. ಅವರ ಧ್ಯೇಯ ನಿಷ್ಠೆಗೆ ಈಗ ರಾಜ್ಯ ಕಾರ್ಯದರ್ಶಿ ಹುದ್ದೆ ಒಲಿದುಬಂದಿದೆ, ಅದರ ಬೆನ್ನಲ್ಲೇ ಕಾರ್ಯಕರ್ತರ ಲೋಕಸಭಾ ಅಭ್ಯರ್ಥಿಯಾಗಿ ಜನಮಾನಸದಲ್ಲಿ ಸುದ್ದಿಯಲ್ಲಿದ್ದಾರೆ.

ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುತ್ತಿದ್ದ ನಳಿನ್‌ ಕುಮಾರ್‌ ಕಟೀಲ್‌ ಅವರು ಈಗ ಕಾರ್ಯಕರ್ತರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ, ಇದೆಲ್ಲವೂ ಚುನಾವಣಾ ಗಿಮಿಕ್‌ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧದ ಅಲೆಯಿಂದ ಬೇಸತ್ತಿರುವ ಬಿಜೆಪಿ ತನ್ನ ಕಾರ್ಯಕರ್ತರನ್ನು ತಣಿಸುವ ನಿಟ್ಟಿನಲ್ಲಿ ಈ ಬಾರಿ ಟಿಕೆಟ್ ಬದಲಾವಣೆಯ ನಿರ್ಧಾರ ಮಾಡಿರುವುದು ಬಹುತೇಕ ಪಕ್ಕಾ ಆಗಿದೆ.

]]>
https://iambjp.in/archives/2137/feed 0
ಪಿಎಫ್‌ಐ ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವೆ – ಎಸ್. ಟಿ. ಸೋಮಶೇಖರ್ https://iambjp.in/archives/947 https://iambjp.in/archives/947#respond Wed, 28 Sep 2022 06:46:37 +0000 https://iambjp.in/?p=947 ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ವಿಧ್ವಂಸಕ ಕೃತ್ಯಗಳಿಗೆ ಸಂಚುಗಳನ್ನು ರೂಪಿಸಿ, ಸಾರ್ವಜನಿಕರ ಶಾಂತಿಗೆ ಭಂಗ, ತರುತ್ತಿದ್ದ ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಸಹಕಾರ ಸಚಿವರಾದ ಎಸ್.‌ ಟಿ. ಸೋಮಶೇಖರ್‌ ಹೇಳಿದ್ದಾರೆ.

ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಈ ಸಂಘಟನೆಗೆ ನಿಷೇಧ ಹೇರಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು.

ಈ ಸಂಘಟನೆಗಳ ನಿಷೇಧದಿಂದ ಸಮಾಜಘಾತುಕ ಶಕ್ತಿಗಳಿಗೆ ದೇಶದಲ್ಲಿ ಉಳಿಗಾಲ ಇರುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನದಂದೇ ಕೈಗೊಂಡಿರುವ ಈ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

]]>
https://iambjp.in/archives/947/feed 0
ಕಾಂಗ್ರೆಸ್ ಮುಖಂಡರು ಜನರ ಕ್ಷಮೆ ಕೇಳಬೇಕು : ಅರುಣ್ ಸಿಂಗ್ ಆಗ್ರಹ https://iambjp.in/archives/940 https://iambjp.in/archives/940#respond Wed, 28 Sep 2022 06:39:23 +0000 https://iambjp.in/?p=940 ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷವು ಜನಸಾಮಾನ್ಯರ ಮತ್ತು ಸಮಗ್ರ ಕರ್ನಾಟಕದ ಜನರ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಕುಮಾರಕೃಪಾ ಗೆಸ್ಟ್ ಹೌಸ್­ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಣ್ಣತನವನ್ನು ಹೊಂದಿದೆ. ಅವರ ಈ ಸಣ್ಣತನವನ್ನು ಜನರು ಕ್ಷಮಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಸಣ್ಣತನದ ಧೋರಣೆಗೆ ಬಡಜನರು, ರೈತರು ಸೇರಿದಂತೆ ಎಲ್ಲ ಮತದಾರರು ಸಮರ್ಥ ಉತ್ತರ ಕೊಟ್ಟು ಆ ಪಕ್ಷವನ್ನು ರಾಜ್ಯದಲ್ಲಿ ನಾಮಾವಶೇಷಗೊಳಿಸಲಿದ್ದಾರೆ ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿಯವರ ಸರಕಾರವು ರೈತರಿಗೆ ಕಿಸಾನ್ ಸಮ್ಮಾನ್ ಮೂಲಕ ಹೆಚ್ಚುವರಿ ನಿಧಿ, ರೈತ ವಿದ್ಯಾ ನಿಧಿ ಸ್ಕಾಲರ್‍ಶಿಪ್ ಕೊಡುತ್ತಿದೆ. ಎಸ್‍ಸಿ, ಎಸ್‍ಟಿ ವರ್ಗಕ್ಕೆ ವಿಶೇಷ ಪ್ಯಾಕೇಜ್ ಮೂಲಕ ಜನಸಾಮಾನ್ಯರ ಸರಕಾರ ಇಲ್ಲಿದೆ. ಅವರು ಕಾಮನ್ ಮ್ಯಾನ್ ಸಿಎಂ ಆಗಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಎಸ್‍ಸಿ ಹಾಸ್ಟೆಲ್ ಖರೀದಿ ಹಗರಣ, ಪಡಿತರದಲ್ಲೂ ಹಗರಣ, ಅರ್ಜಿ ಹಾಕದ ವ್ಯಕ್ತಿಯನ್ನು ಶಿಕ್ಷಕರನ್ನಾಗಿ ನೇಮಕ ಮಾಡಿದ್ದು, ಪೊಲೀಸರ ನೇಮಕಾತಿಯಲ್ಲೂ ಹಗರಣಗಳು ಸಿದ್ದರಾಮಯ್ಯರ ಅಧಿಕಾರಾವಧಿಯಲ್ಲಿ ನಡೆದಿವೆ. ಕಾಂಗ್ರೆಸ್ ಭ್ರಷ್ಟಾಚಾರದ ತಾಯಿಯಂತಿದೆ. ಭ್ರಷ್ಟರ ಪಕ್ಷವಾದ ಕಾಂಗ್ರೆಸ್, ಸಜ್ಜನ, ಅತ್ಯುತ್ತಮ ಆಡಳಿತ ನೀಡುತ್ತಿರುವ ಬೊಮ್ಮಾಯಿಯವರ ಹೆಸರನ್ನು ಹಾಳು ಮಾಡಲು ವ್ಯರ್ಥ ಆರೋಪ ಮಾಡುತ್ತಿದೆ ಎಂದು ಟೀಕಿಸಿದರು.

ಪಂಜಾಬ್‍ನಲ್ಲಿ ಕಾಂಗ್ರೆಸ್ ಪಕ್ಷ ಒಡೆಯಿತು. ಗೋವಾದಲ್ಲೂ 8 ಶಾಸಕರು ಪಕ್ಷ ತೊರೆದರು. ರಾಜಸ್ಥಾನದಲ್ಲೂ ಕಾಂಗ್ರೆಸ್ ಒಳಜಗಳ ಮುಂದುವರಿದಿದೆ. ಕರ್ನಾಟಕದಲ್ಲೂ ಎರಡು ಮುಖಂಡರ ನಡುವೆ ಭಿನ್ನಮತ ಭುಗಿಲೇಳಲಿದೆ. ನೀವು ನೋಡುತ್ತಿರಿ ಎಂದು ತಿಳಿಸಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಒಂದೆಡೆ ನಡೆದಿದೆ. ಇನ್ನೊಂದೆಡೆ ‘ಕಾಂಗ್ರೆಸ್ ಚೋಡೋ’ ಮುಂದುವರಿದಿದೆ. ಕರ್ನಾಟಕದಲ್ಲೂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಡುವಿನ ಜಗಳ ಮುಂದುವರಿಯಲಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಷಡ್ಯಂತ್ರದ, ಭ್ರಷ್ಟಾಚಾರದ ಪಕ್ಷ. ಫೋನ್ ಟ್ಯಾಪಿಂಗ್, ವಿಡಿಯೋ ಟೇಪ್ ಮಾಡುವುದು, ಇಲ್ಲಸಲ್ಲದ ಆರೋಪ ಮಾಡುವುದು ಈ ಪಕ್ಷದ ನಾಯಕರ ಸಣ್ಣತನವನ್ನು ತೋರಿಸುತ್ತದೆ. ವಿಚಾರಶೂನ್ಯವಾದ ಕಾಂಗ್ರೆಸ್‍ನವರು ಇಂಥ ಆರೋಪ ಮಾಡುತ್ತಾರೆ. ಹಗಲಿರುಳು ರಾಜ್ಯದ ಅಭಿವೃದ್ಧಿಗೆ ಶ್ರಮಿಸುವ ಬೊಮ್ಮಾಯಿಯವರ ವಿರುದ್ಧ ಇಂಥ ಆಧಾರರಹಿತ ಆರೋಪ ಮಾಡುವ ಕಾಂಗ್ರೆಸ್ಸಿಗರನ್ನು ಎಂದೂ ಕ್ಷಮಿಸುವುದಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಪಿಎಫ್‍ಐ ಪ್ರಕರಣಗಳ ರದ್ದು ಕುರಿತಂತೆ ರಾಜ್ಯದ ಬಿಜೆಪಿ ಸರಕಾರ ಪುನರ್ ಪರಿಶೀಲಿಸಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ನಾಯಕರೇ ಇಲ್ಲದ, ದೂರದೃಷ್ಟಿರಹಿತ ಕಾಂಗ್ರೆಸ್ ಪಕ್ಷವು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆಯಿಂದ ನಾಮಾವಶೇಷ ಆಗಲಿದೆ ಎಂದು ನುಡಿದರು. ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಪಡೆಯಲಿದೆ ಎಂದು ತಿಳಿಸಿದರು.

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್- ಸಚಿನ್ ಪೈಲಟ್ ಅವರ ನಡುವೆ ತಳವಾರು ಕಾಳಗ ಮುಂದುವರಿಯುತ್ತಿದೆ ಎಂದ ಅವರು, ಆ ರಾಜ್ಯದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಆಡಳಿತ ವಿರೋಧಿ ಅಲೆ ಅಲ್ಲಿದೆ. ಮುಂದಿನ ವರ್ಷ ನಾವು ಅಲ್ಲಿ ಸರಕಾರ ರಚಿಸುತ್ತೇವೆ ಎಂದು ತಿಳಿಸಿದರು.

ದೇಶದ ಏಕತೆ ಮತ್ತು ಅಖಂಡತೆಗಾಗಿ ಸಂಕಲ್ಪ, ರಾಜ್ಯದ ಗೌರವಕ್ಕೆ ಬದ್ಧತೆಯ ಸಂಕಲ್ಪವನ್ನು ಕಾರ್ಯಕರ್ತರು ಮಾಡಲಿದ್ದಾರೆ. ಕೇಂದ್ರದ ಮೋದಿಜಿ ಮತ್ತು ರಾಜ್ಯದ ಬೊಮ್ಮಾಯಿಯವರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಸಂಕಲ್ಪವನ್ನು ಕಾರ್ಯಕರ್ತರು ಮಾಡಲಿದ್ದಾರೆ. ಡಬಲ್ ಎಂಜಿನ್ ಸರಕಾರಗಳನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪವೂ ನಡೆಯಲಿದೆ ಎಂದು ತಮ್ಮ ಕಲ್ಯಾಣ ಕರ್ನಾಟಕದ ಪ್ರವಾಸದ ಉದ್ದೇಶದ ಸಂಬಂಧದ ಪ್ರಶ್ನೆಗೆ ಉತ್ತರ ನೀಡಿದರು.

ರಾಜ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ ಕುರಿತಂತೆ ಬೊಮ್ಮಾಯಿಯವರು ಸಕಾಲದಲ್ಲಿ ಸಮರ್ಪಕ ನಿರ್ಣಯ ಮಾಡಲಿದ್ದಾರೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ದೇಶಾದ್ಯಂತ ಗಲಭೆ, ದಂಗೆ ಕಾರ್ಯದಲ್ಲಿ ಪಿಎಫ್‍ಐ ನಿರತವಾಗಿತ್ತು. ಸಮಾಜವಿದ್ರೋಹಿ ಕೆಲಸಗಳಲ್ಲಿ ತೊಡಗಿಕೊಂಡಿತ್ತು. ಆತಂಕವಾದಿ ಘಟನೆಗಳಲ್ಲೂ ಅದು ಒಳಗೊಂಡಿತ್ತು. ದೇಶವನ್ನು ಅಸ್ಥಿರಗೊಳಿಸಲು ವಿದೇಶದಿಂದ ಹಣ ಪಡೆಯುತ್ತಿದ್ದ ಈ ಸಂಸ್ಥೆಯನ್ನು ನಿಷೇಧಿಸಿದ್ದು, ಅತ್ಯಂತ ಉತ್ತಮ ನಿರ್ಧಾರ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.

ರಾಜಸ್ಥಾನದಲ್ಲೂ ಹಲವು ಜಿಲ್ಲೆಗಳಲ್ಲಿ ನಡೆದ ದಂಗೆ, ಗಲಭೆಗಳಲ್ಲಿ ಪಿಎಫ್‍ಐ ಒಳಗೊಂಡಿತ್ತು. ಕರೋಲಿ, ಜೋಧಪುರ, ಉದಯಪುರ ಜಿಲ್ಲೆಗಳಲ್ಲಿ ಈ ಗಲಭೆಗಳು, ಹಿಂದೂಗಳ ಹತ್ಯೆಗಳು ಆಗಿದ್ದವು ಎಂದ ಅವರು, ಕರ್ನಾಟಕದಲ್ಲೂ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ಯೋಜಿತ ರೀತಿಯಲ್ಲಿ ಹಿಂದೂಗಳ ಹತ್ಯೆಗಳು ಆಗಿದ್ದವು. ದೇಶವನ್ನು ಅಖಂಡವಾಗಿಡಲು ಪಿಎಫ್‍ಐ ನಿಷೇಧ ಅನಿವಾರ್ಯವಾಗಿತ್ತು ಎಂದರು.

ರಾಜಸ್ಥಾನ, ಹೈದರಾಬಾದ್, ಕರ್ನಾಟಕದ ವಿವಿಧೆಡೆ ನಡೆದ ಹಿಂದೂಗಳ ಹತ್ಯೆಯಲ್ಲಿ ಪಿಎಫ್‍ಐ ಕೈವಾಡ ಮತ್ತು ಷಡ್ಯಂತ್ರ ಇದೆ ಎಂಬುದು ಪತ್ತೆಯಾಗಿತ್ತು. ಹಲವು ರಾಜ್ಯಗಳಲ್ಲಿ ಇಂಥ ಹಿಂಸಾಚಾರ ನಡೆದ ಕಾರಣ ಎನ್‍ಐಎ ಈ ದಾಳಿ ನಡೆಸಿದೆ ಎಂದು ವಿವರಿಸಿದರು.

]]>
https://iambjp.in/archives/940/feed 0
ಜನವರಿ 12 ರಿಂದ ನಡೆಯಲಿರುವ ಯುವ ಸಪ್ತಾಹ ಯಶಸ್ವಿಗೊಳಿಸಿ : ಸಚಿವ ಡಾ. ನಾರಾಯಣಗೌಡ   https://iambjp.in/archives/758 https://iambjp.in/archives/758#respond Thu, 06 Jan 2022 10:31:30 +0000 https://iambjp.in/?p=758 ಬೆಂಗಳೂರು : ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ವಾರ ಯುವ ಸಪ್ತಾಹ ಹಮ್ಮಿಕೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು.

ಜನವರಿ 12 ರಿಂದ 18 ವರೆಗೂ ಯುವ ಸಪ್ತಾಹ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯ ಮಟ್ಟದಿಂದ ಗ್ರಾಮ ಮಟ್ಟದವರೆಗೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಇಂದು ಸಚಿವ ಡಾ.ನಾರಾಯಣಗೌಡ ಅವರು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಯುವ ಸಪ್ತಾಹವನ್ನು ಯಶಸ್ವಿಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜನವರಿ 12- ಎಲ್ಲಾ ಶಾಲೆಗಳು-ಕಾಲೇಜುಗಳಲ್ಲಿ ‘ಯುವ ಸಂಸದ್’ ಮತ್ತು ಗ್ರಾಮ ಮಟ್ಟದಲ್ಲಿ ಯುವ ಗ್ರಾಮ ಸಭೆಗಳನ್ನು ನಡೆಸುವುದು.

ಜನವರಿ-13: ಸ್ವಾಮಿ ವಿವೇಕಾನಂದರ ವಿಚಾರಧಾರೆ, ಉದ್ದೇಶಗಳು ಮತ್ತು ತಾತ್ವಿಕ ಆಶಯಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ.

ಜನವರಿ 14: ಪೌಷ್ಟಿಕಾಂಶ ಮತ್ತು ಆರೋಗ್ಯ ಶಿಬಿರಗಳು, ರಸ್ತೆ ಸುರಕ್ಷತೆ ಕುರಿತು ಜಾಗೃತಿ.

ಜನವರಿ15: ಸ್ಥಳೀಯ ಗ್ರಾಮೀಣ ಕ್ರೀಡಾ ಉತ್ಸವ.

ಜನವರಿ 16: ಮಾದಕ ವ್ಯವನ, ಮಹಿಳಾ ದೌರ್ಜನ್ಯ ಮತ್ತು ಸೈಬರ್ ಅಪರಾಧಗಳ ತಡೆಗಟ್ಟುವ ಬಗ್ಗೆ ಜಾಗೃತಿ.

ಜನವರಿ 17: ಕಾನೂನು ನೆರವು ಸೇವೆಗಳ ಬಗ್ಗೆ ಜಾಗೃತಿ.

ಜನವರಿ 18: ಕೌಶಲ್ಯ ಕರ್ನಾಟಕದ ಅಡಿಯಲ್ಲಿ ಘನತ್ಯಾಜ್ಯ ನಿರ್ವಹಣೆ ತಂತ್ರಜ್ಞಾನ , ಉದ್ಯಮಶೀಲತರ ಅಭಿವೃದ್ಧಿ ಮತ್ತು ಸಾಫ್ಟ್ ಸ್ಕಿಲ್ ತರಬೇತಿ ಕುರಿತು ಕೌಶಲ್ಯ ಅಭಿವೃದ್ಧಿ ಕುರಿತು ತರಬೇತಿ.

ಯುವ ಸಪ್ತಾಹದ ಹಿನ್ನೆಲೆಯಲ್ಲಿ ಜನವರಿ 12 ರಿಂದ 18 ರವರೆಗೂ ಯುವ ಗ್ರಾಮ ಸಭೆ, ಯುವ ಸಂಸದ್, ಸ್ವಾಮಿ ವಿವೇಕಾನಂದರ ವಿಚಾರಧಾರೆ, ಉದ್ದೇಶಗಳ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಪ್ರತಿದಿನ ಒಂದೊಂದು ರೀತಿಯ ಕಾರ್ಯಕ್ರಮ, ಜಾಗೃತಿ ಅಭಿಯಾನ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ‌.

ಇವತ್ತು ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಲಾಗಿದೆ. ಯುವ ಸಪ್ತಾಹವನ್ನು ಯಶಸ್ವಿಗೊಳಿಸಲಾಗುತ್ತದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಸರ್ಕಾರದಿಂದ ಸಾವಿರಾರು ಯೋಜನೆಗಳಿದ್ದು ಇದರಲ್ಲಿ 540 ಯೋಜನೆಗಳು ಯುವ ಸಮುದಾಯದ ಯೋಜನೆಗಳಿವೆ. ಆದರೆ ಅವುಗಳ ಬಗ್ಗೆ ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ಯುವ ಸಪ್ತಾಹ ಅಭಿಯಾನದ ಸಂದರ್ಭದಲ್ಲಿ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಇಲಾಖೆಗಳು ಕೈಜೋಡಿಸಿದರೆ ಯಶಸ್ವಿಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

]]>
https://iambjp.in/archives/758/feed 0
ಕೊಪ್ಪಳದಲ್ಲಿ ಜನಸ್ವರಾಜ್ ಸಮಾವೇಶ ಆರಂಭ https://iambjp.in/archives/692 https://iambjp.in/archives/692#respond Thu, 18 Nov 2021 10:22:48 +0000 https://iambjp.in/?p=692 ಕೊಪ್ಪಳದಲ್ಲಿ ಜನಸ್ವರಾಜ್ ಯಾತ್ರೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಿತು.

ಪಕ್ಷವನ್ನು ಸದೃಢಗೊಳಿಸುವುದು ಮತ್ತು ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ದೃಷ್ಟಿಯಿಂದ ನಾಲ್ಕು ತಂಡಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯುತ್ತಿದೆ ಎಂದು ಮುಖಂಡರು ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಅವರು ಮನವಿ ಮಾಡಿದರು.

ಕೇಂದ್ರಮಂತ್ರಿಗಳಾದ ಭಗವಂತ ಖೂಬಾ ರಾಜ್ಯಸಚಿವರಾದ ಹಾಲಪ್ಪ ಆಚಾರ್ ಮುರುಗೇಶ್ ನಿರಾಣಿ ಸಂಸದರಗಳಾದ ಕರಡಿ ಸಂಗಣ್ಣ ಪ್ರತಾಪ್ ಸಿಂಹ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು.

]]>
https://iambjp.in/archives/692/feed 0
ಡಿಸೆಂಬರ್ ಅಂತ್ಯದ ವೇಳೆಗೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಪುನಾರಂಭ : ಸಚಿವ ಡಾ.ನಾರಾಯಣ ಗೌಡ https://iambjp.in/archives/686 https://iambjp.in/archives/686#respond Thu, 18 Nov 2021 10:12:35 +0000 https://iambjp.in/?p=686 ವಾರಣಾಸಿ : ವಾರಣಾಸಿಗೂ ಕರ್ನಾಟಕ ನಡುವಿನ ರೇಷ್ಮೆ ಬಾಂಧವ್ಯಕ್ಕೆ ಮತ್ತೆ ಮರುಜೀವ ಸಿಕ್ಕಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ‌.

ವಾರಣಾಸಿಯ ಬನಾರಸ್ ವಿಶ್ವವಿದ್ಯಾಲಯದಲ್ಲಿ ಇಂದು ಉತ್ತರ ಪ್ರದೇಶದ ರೇಷ್ಮೆ ಇಲಾಖೆ, ಟೆಕ್ಸ್‌ಟೈಲ್ ಇಲಾಖೆ ಅಧಿಕಾರಿಗಳು, ರೀಲರ್ಸ್‌ಗಳ ಜೊತೆ ಸಚಿವ ಡಾ.ನಾರಾಯಣಗೌಡ ಸಭೆ ನಡೆಸಿದರು. ಕರ್ನಾಟಕ ರೇಷ್ಮೆ ಗುಣಮಟ್ಟ, ಪೂರೈಕೆ ಹಾಗೂ ರೇಷ್ಮೆ ಮಾರಾಟಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಕರ್ನಾಟಕದ ರೇಷ್ಮೆ ಮಾರುಕಟ್ಟೆ ವ್ಯವಸ್ಥೆ ಹಾಗೂ ರೇಷ್ಮೆ ಬೆಳೆಗಾರರಿಗೆ‌ ಹೆಚ್ಚಿನ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಾರುಕಟ್ಟೆ ವಿಸ್ತರಿಸಲು ಕ್ರಮಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವ ಡಾ.ನಾರಾಯಣಗೌಡ ಅವರು ವಿವರಿಸಿದರು.

ವಾರಣಾಸಿಯಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದೆ. ಸದ್ಯ ಚೀನಾದಿಂದ ರೇಷ್ಮೆ ಆಮದು ಸ್ಥಗಿತಗೊಳಿಸಲಾಗಿದೆ. ಕರ್ನಾಟಕವು ಕಚ್ಚಾ ರೇಷ್ಮೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ಹೆಚ್ಚಿನ ಸ್ವಯಂ ಚಾಲಿತ ರೀಲಿಂಗ್ ಯಂತ್ರ(ಎಂಆರ್‌ಎಂ)ಗಳನ್ನು ಹೊಂದಿದ್ದು ಅತ್ಯುತ್ತಮ ತಂತ್ರಜ್ಞಾನದೊಂದಿಗೆ ಗುಣಮಟ್ಟದ ಬೈವೊಲ್ಟಿನ್ ದಾರವನ್ನು ಉತ್ಪಾದಿಸುತ್ತಿದೆ. ಇದು ಚೀನಾ ರೇಷ್ಮೆಗಿಂತಲೂ ಉತ್ತಮವಾಗಿದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕದಲ್ಲಿ ಮೈಸೂರು ಸಿಲ್ಕ್ ನಂತೆಯೇ ಉತ್ತರ ಪ್ರದೇಶದ ಬನರಾಸ್ ಸೀರೆ ಪ್ರಸಿದ್ಧಿಯಾಗಿದೆ. ವಾರಣಾಸಿಯ ಬನಾರಸ್‌ಗೂ ಕರ್ನಾಟಕಕ್ಕೂ ಅವಿನಾವಭಾವ ಸಂಬಂಧವಿದೆ. 1997ರಲ್ಲೇ ಕೆಎಸ್‌ಎಂಬಿ ವತಿಯಿಂದ ವಾರಣಾಸಿಗೆ ಕರ್ನಾಟಕದ ರೇಷ್ಮೆ ಪೂರೈಸಲಾಗುತ್ತಿತ್ತು. ಆದರೆ, ಕಾರಣಾಂತರಗಳಿಂದ 2003ರಿಂದ ವಾರಣಾಸಿಗೆ ರೇಷ್ಮೆ ಸರಬರಾಜು ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ಮತ್ತೆ ವಾರಣಾಸಿಯಲ್ಲಿ ರೇಷ್ಮೆ ಮಾರುಕಟ್ಟೆ ಆರಂಭಿಸಲು ನಮ್ಮ ಸರ್ಕಾರ ನಿರ್ಧರಿಸಿದೆ‌. ಬನಾರಸ್ ನೇಕಾರರಿಗೆ ಅಗತ್ಯ ಇರುವ ಗುಣಮಟ್ಟದ ರೇಷ್ಮೆಯನ್ನು ಪೂರೈಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ವಾರಣಾಸಿಯಲ್ಲಿ ನಮ್ಮ ಮಾರುಕಟ್ಟೆ/ ರೇಷ್ಮೆ ಬ್ಯಾಂಕ್ ಸ್ಥಾಪಿಸಲು ವ್ಯವಸ್ಥೆ ಕಲ್ಪಿಸಿ, ಕರ್ನಾಟಕ ಮತ್ತು ವಾರಣಾಸಿ ನಡುವಿನ ಹಳೇ ಸಂಬಂಧ ಮತ್ತೆ ವೃದ್ದಿಸಲು ಸಹಕರಿಸುವಂತೆ ಡಾ.ನಾರಾಯಣಗೌಡ ಅವರು ಮನವಿ ಮಾಡಿದರು.

ಕರ್ನಾಟಕದ ರೇಷ್ಮೆ ಗುಣಮಟ್ಟಕ್ಕೆ ಉತ್ತರ ಪ್ರದೇಶದ ಅಧಿಕಾರಿಗಳು ಹಾಗೂ ರೀಲರ್ಸ್‌ಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕದ ರೇಷ್ಮೆ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಈ ಹಿಂದೆ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯಿಂದ ರೇಷ್ಮೆ ಖರೀದಿಸಲಾಗಿದೆ. ವಾರಣಾಸಿಯಲ್ಲಿ ನೇಯ್ಗೆಗೆ ವಿವಿಧ ಏಜೆನ್ಸಿಗಳ ಮೂಲಕ 99% ರೇಷ್ಮೆಯನ್ನು ಕರ್ನಾಟಕದಿಂದಲೇ ಖರೀದಿಸಲಾಗುತ್ತಿದೆ. ನಮಗೆ ಅಗತ್ಯವಿರುವ ಗುಣಮಟ್ಟದ ರೇಷ್ಮೆಯನ್ನು ನೀಡಿದರೇ NHDC ಮುಖಾಂತರ ಕೆಎಸ್‌ಎಂಬಿಯಿಂದಲೇ ಖರೀದಿಸಲು ಕ್ರಮವಹಿಸಲಾಗುವುದು ಎಂದು ಉತ್ತರ ಪ್ರದೇಶದ ಅಧಿಕಾರಿಗಳು ಹಾಗೂ ರೀಲರ್ಸ್‌ಗಳು ತಿಳಿಸಿದರು‌‌.

ವಾರಣಾಸಿಯಲ್ಲಿ ಕೆಎಸ್‌ಎಂಬಿ ಬ್ರಾಂಚ್ ಆರಂಭಿಸಲು‌ ಹಾಗೂ ಗೋದಾಮಿಗೆ ಅಗತ್ಯವಿರುವ ಜಾಗವನ್ನು ಒದಗಿಸಲಾಗುವುದು ಎಂದು ಉತ್ತರ ಪ್ರದೇಶ ರೇಷ್ಮೆ ಇಲಾಖೆ ಕಾರ್ಯದರ್ಶಿ ನರೇಂದ್ರ ಸಿಂಗ್ ಪಟೇಲ್ ಭರವಸೆ ನೀಡಿದರು.

ಕರ್ನಾಟಕದಿಂದ ಬರುತ್ತಿದ್ದ ರೇಷ್ಮೆಗೆ ಹಿಂದೆ ವಾರಣಾಸಿಯಲ್ಲಿ ಗ್ರಾಹಕರಿದ್ದರು. ಆದರೆ, ಮಧ್ಯೆದಲ್ಲಿ ರೇಷ್ಮೆ ಸರಬರಾಜು ಸ್ಥಗಿತಗೊಂಡಿದ್ದರಿಂದ ಬನರಾಸ್ ನೇಕಾರರು ಬೇರೆ ಏಜೆನ್ಸಿಗಳ ಕಡೆ ಮುಖ ಮಾಡಿದ್ದಾರೆ. ಹಾಗಾಗಿ, ಮತ್ತೆ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ಮಾರುಕಟ್ಟೆಯನ್ನು ಪುನರ್ ಸ್ಥಾಪಿಸಿ, ಗುಣಮಟ್ಟದ ರೇಷ್ಮೆ ನೀಡುವ ಮೂಲಕ ಗ್ರಾಹಕರನ್ನ ಸೆಳೆಯಬೇಕಾಗುತ್ತದೆ. ಜೊತೆಗೆ ಚಿಲ್ಲರೆ ಮಾರಾಟಕ್ಕೂ ಅವಕಾಶ ಮಾಡಿಕೊಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ಹಾಗೂ ನೇಕಾರ ಸಂಘದ ಪದಾಧಿಕಾರಿಗಳು ಸಲಹೆ ನೀಡಿದರು.

ಇದೆ ವೇಳೆ ಉತ್ತರ ಪ್ರದೇಶದಲ್ಲಿ ರೇಷ್ಮೆ ಉತ್ಪಾದನೆ ಹೆಚ್ಚಿಸಲು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಸಿದ್ದಪಡಿಸಿದ್ದ ವರದಿಯನ್ನು ಸಲ್ಲಿಸಲಾಯಿತು.

ಕರ್ನಾಟಕದಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನ, ಎಆರ್‌ಎಂ ಯಂತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು. ರೇಷ್ಮೆಯಿಂದ ಉತ್ಪಾದಿಸಲಾಗುತ್ತಿರುವ ಉಪ ಉತ್ಪನ್ನಗಳ ಬಗ್ಗೆ ಉತ್ತರ ಪ್ರದೇಶದ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪ್ರದರ್ಶಿಸಲಾಯಿತು. ಕರ್ನಾಟಕದಿಂದ ಎಲ್ಲಾ ರೀತಿಯ ತಂತ್ರಜ್ಞಾನದ ನೆರವನ್ನು ನೀಡಲಾಗುವುದು. ಇದು ಉತ್ತರ ಪ್ರದೇಶ ಹಾಗೂ ಕರ್ನಾಟಕ ನಡುವಿನ ಸಂಬಂಧ ವೃದ್ಧಿಸಲು ಮತ್ತಷ್ಟು ಸಹಕಾರಿ ಆಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಪ್ರಧಾನಿ ಮೋದಿ ಕನಸಿನಂತೆ ರೈತರ ಆದಾಯ ದ್ವಿಗುಣಕ್ಕೆ ಬದ್ಧ 

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ರೈತರ ಆದಾಯ ದ್ವಿಗುಣ ಆಗಬೇಕು. ಆ ನಿಟ್ಟಿನಲ್ಲಿ ಕರ್ನಾಟಕದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಯತ್ನಿಸುತ್ತಿದ್ದೇನೆ. ರೇಷ್ಮೆ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಒದಗಿಸಿಕೊಡುವ ಕೆಲಸ ಮಾಡಲಾಗುತ್ತಿದೆ‌. ದೇಶದಲ್ಲೇ ‌48% ರೇಷ್ಮೆಯನ್ನು ಕರ್ನಾಟಕದಲ್ಲಿ ಬೆಳೆಯುತ್ತಿದ್ದು, ಕರ್ನಾಟಕದ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಾರಣಾಸಿಯಲ್ಲಿ ನಮ್ಮ ರೇಷ್ಮೆ ಮಾರುಕಟ್ಟೆಯನ್ನು ಮತ್ತೆ ಆರಂಭಿಸಲು ನಿರ್ಧರಿಸಿದ್ದು, ಅದರ ಭಾಗವಾಗಿ ಇವತ್ತು ಸಭೆ ನಡೆಸಲಾಯಿತು. ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ವಾರಣಾಸಿಯಲ್ಲಿ ರೇಷ್ಮೆ ಮಾರಾಟ ಪ್ರಕ್ರಿಯೆ ಆರಂಭಿಸಲಾಗುವುದು. ಇದರಿಂದ ರೇಷ್ಮೆಗೆ ಬೇಡಿಕೆ ಹೆಚ್ಚಲಿದ್ದು, ನಮ್ಮ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಸಭೆಯಲ್ಲಿ ಕೆಎಸ್‌ಎಂಬಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಆಯುಕ್ತ ಪೆದ್ದಪ್ಪಯ್ಯ, ಕೆಎಸ್‌ಎಂಬಿ ಎಂಡಿ ಅನುರಾಧ, ಉತ್ತರ ಪ್ರದೇಶ ಸರ್ಕಾರದ ರೇಷ್ಮೆ ಇಲಾಖೆ ನರೇಂದ್ರ ಸಿಂಗ್ ಪಟೇಲ್, IIHT ನಿರ್ದೇಶಕ ಥೆನ್ನಾ ರೆಶ್ಯೂ, ವಾರಣಾಸಿ ಡಿಸಿ(ಕೈಗಾರಿಕೆ)- ವೀರೇಂದ್ರ ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

]]>
https://iambjp.in/archives/686/feed 0