og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಹಿಂದೆ ಇದ್ದ ಸಿದ್ದರಾಮಯ್ಯ ಸರ್ಕಾರ PFI ಸಂಘಟನೆಯವರನ್ನು ಬಿಡುಗಡೆ ಮಾಡಿ, ಅವರ ಮೇಲಿದ್ದ ಕೇಸ್ ಖುಲಾಸೆಗೊಳಿಸಿತ್ತು. ಅವರಿಗೆ PFI ಮೇಲೆ ಪ್ರೀತಿ ಜಾಸ್ತಿ ಇತ್ತು. ಕಾಂಗ್ರೆಸ್ ಇವರಿಗೆ ಬೆಂಬಲ ನೀಡಿತ್ತು. ಅವರಿಗೆ ಹಣಕಾಸಿನ ಸಹಾಯ ಕೂಡ ಮಾಡಿತ್ತು.
ಇವರಿಗೆ ವಿದೇಶದಿಂದ ಹಣ ಬರ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇವರು ಪಾಕಿಸ್ತಾನದ ಏಜೆಂಟ್ ಆಗಿ ಭಾರತದಲ್ಲಿ ಕೆಲಸ ಮಾಡ್ತಿದ್ದಾರೆ, ವಿದ್ವಂಸಕ ಕೃತ್ಯ ಮಾಡುತ್ತಿದ್ಧಾರೆ. ಕಾಂಗ್ರೆಸ್ ಡಬಲ್ ಸ್ಟಾಂಡರ್ಡ್ ನೀತಿಗೆ ಹೆಸರುವಾಸಿಯಾಗಿದೆ. ಕೇಂದ್ರ ಸರ್ಕಾರ ಸರಿಯಾದ ಕ್ರಮ ಕೈಗೊಂಡಿದೆ ಎಂದು ಹೇಳಿದರು.
]]>ಪಿಎಫ್‍ಐ ನಾಯಕರು ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿದ್ದರು. ಕೇಂದ್ರ ಸರಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ, ಪಿಎಫ್‍ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳವರೆಗೆ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ನಿಷೇಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿμÉೀಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೆ, ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿμÉೀಧ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಭವಿಷ್ಯದಲ್ಲಿ ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜದ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ಪ್ರಯತ್ನದ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರವು ಇಂಥ ಸಮಾಜವಿದ್ರೋಹಿಗಳ ಮೇಲಿನ ಪ್ರಕರಣಗಳನ್ನು ರದ್ದು ಮಾಡಿ ಅವುಗಳ ಬೆಳವಣಿಗೆಗೆ ಸಹಕರಿಸಿತ್ತು. ಇದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ಮುಂದಿನ ದಿನಗಳಲ್ಲಿ ಕೊಡುವುದು ಖಚಿತ ಎಂದು ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
]]>