Notice: Function _load_textdomain_just_in_time was called incorrectly. Translation loading for the og domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Notice: Function _load_textdomain_just_in_time was called incorrectly. Translation loading for the wp-post-author domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121

Warning: Cannot modify header information - headers already sent by (output started at /home3/buntss5v/iambjp.in/wp-includes/functions.php:6121) in /home3/buntss5v/iambjp.in/wp-includes/feed-rss2.php on line 8
Shivaram Hebbar – I am BJP https://iambjp.in Making Bharat Vishwa Guru Sat, 14 Aug 2021 08:51:33 +0000 en-US hourly 1 https://wordpress.org/?v=6.8.1 https://iambjp.in/wp-content/uploads/2021/08/cropped-Smal-Logo-32x32.png Shivaram Hebbar – I am BJP https://iambjp.in 32 32 ಆಶಾ ಕಾರ್ಯಕರ್ತೆಯರಿಗೆ ಶ್ರಮಿಕ ಸೇವಾ ಟ್ರಸ್ಟ್ ಮೂಲಕ ಮೊಬೈಲ್‌ ಒದಗಿಸಿದ ಹರೀಶ್‌ ಪೂಂಜಾ https://iambjp.in/archives/311 https://iambjp.in/archives/311#respond Sat, 14 Aug 2021 08:51:12 +0000 https://iambjp.in/?p=311 ಕೋವಿಡ್ 19ರ ಸಂಕಷ್ಟದ ಸಂದರ್ಭದಲ್ಲಿ ಅವಿರತವಾಗಿ ಜನರ ಆರೋಗ್ಯದ ಹಿತದೃಷ್ಟಿಯಿಂದ ರಾತ್ರಿ ಹಗಲೆನ್ನದೆ ಶ್ರಮಿಸಿದ ನಮ್ಮ ಬೆಳ್ತಂಗಡಿ ತಾಲೂಕಿನ 246 ಆಶಾ ಕಾರ್ಯಕರ್ತೆಯರಿಗೆ ಶಾಸಕ ಹರೀಶ್‌ ಪೂಂಜಾ ಮುಂದಾಳುತ್ವದ ಶ್ರಮಿಕ ಸೇವಾ ಟ್ರಸ್ಟ್ ಮುಖಾಂತರ ಮೊಬೈಲ್‌ ವಿತರಣಾ ಕಾರ್ಯಕ್ರಮ ನಡೆಯಿತು.

ಕರ್ನಾಟಕ ರಾಜ್ಯದ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು. ಕೋವಿಡ್ 3ನೆ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ಸಹಕಾರಿಯಾಗಲಿದೆ ಎನ್ನುವ ನಿಟ್ಟಿನಲ್ಲಿ ಮೊಬೈಲ್‌ ನೀಡಲಾಗಿದೆ ಎಂದು ಹರೀಶ್‌ ಪೂಂಜಾ ಅವರು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್,ತಾಲೂಕು ವೈದ್ಯಧಿಕಾರಿಗಳಾದ ಡಾ.ಕಲಾಮಧು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಶೆಟ್ಟಿ, ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥರಾದ ಶ್ರೀ ರಾಜೇಶ್ ಪೈ ಹಾಗೂ ಮೋಹನ್ ಉಜಿರೆ,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್ ರಾವ್ ಧರ್ಮಸ್ಥಳ ಹಾಗೂ ಗಣೇಶ್ ನಾವರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.

]]>
https://iambjp.in/archives/311/feed 0
ರಾಜ್ಯದ ಶ್ರಮಿಕ ವರ್ಗದ ಸರ್ವಾಂಗೀಣ ಅಭಿವೃದ್ಧಿ ಕುರಿತು ಕಾರ್ಮಿಕ ಸಚಿವರಿಂದ ಸುದ್ದಿಗೋಷ್ಠಿ https://iambjp.in/archives/304 https://iambjp.in/archives/304#respond Sat, 14 Aug 2021 05:28:26 +0000 https://iambjp.in/?p=304 ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ  ಶಿವರಾಮ ಹೆಬ್ಬಾರ್ ಅವರು ವಿಕಾಸಸೌಧದ ಕಾರ್ಯಾಲಯದಲ್ಲಿ ಮುಂದಿನ ದಿನಗಳಲ್ಲಿ ಕಾರ್ಮಿಕ ಇಲಾಖೆಯ ಮೂಲಕವಾಗಿ ರಾಜ್ಯದ ಶ್ರಮಿಕ ವರ್ಗದ ಸರ್ವಾಂಗೀಣ ಅಭಿವೃದ್ಧಿಗೆ ಹಮ್ಮಿಕೊಳ್ಳಲಿರುವ ಕಾರ್ಯಕ್ರಮದ ಕುರಿತು ಸುದ್ದಿಗೋಷ್ಠಿ ನಡೆಸಿದರು.

ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳಾದ ಆಟೋ, ಟ್ಯಾಕ್ಸಿ, ಮಾಕ್ಸಿಕ್ಯಾಬ್, ಬಸ್, ಲಾರಿ, ಇತ್ಯಾದಿ ವಾಹನಗಳ ಚಾಲಕರು ಹಾಗೂ ಕಾರ್ಮಿಕರ ಸಾಮಾಜಿಕ ಹಾಗೂ ಆರ್ಥಿಕವಾಗಿ ದುರ್ಬಲರಾಗಿದ್ದು, ಅವರ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣಕ್ಕಾಗಿ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಮೋಟಾರು ಕಾಯ್ದೆ ಹಾಗೂ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಹಾಗೂ ಇದಕ್ಕಾಗಿ ಮೋಟಾರು ವಾಹನಗಳ ತೆರಿಗೆಯ ಮೇಲೆ ಶೇ. 05 % ರಷ್ಟು ಸುಂಕ ಸಂಗ್ರಹ ಮಾಡಿ ಸಂಪನ್ಮೂಲವನ್ನು ಕ್ರೋಡೀಕರಿಸಲಾಗುವುದು ಎಂದರು.

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ (Out Source ) ಮಾನವ ಸಂಪನ್ಮೂಲ ಒದಗಿಸುತ್ತಿರುವ ಸಂಸ್ಥೆಗಳ ನಿಯಂತ್ರಣಕ್ಕಾಗಿ ವಿಶೇಷ ಕಾನೂನು ಜಾರಿಗೊಳಿಸಲಾಗುವುದು ಸೆಪ್ಟೆಂಬರ್ 15, 2021 ರ ಒಳಗಾಗಿ ಕಟ್ಟಡ ಕಾರ್ಮಿಕರ ವಿವಿಧ ಸಾಮಾಜಿಕ ಭದ್ರತಾ ಸೇವೆಗಳಿಗಾಗಿ ಅರ್ಜಿ ಸಲ್ಲಿಸಿ, ಬಾಕಿ ಉಳಿದಿರುವ ಪ್ರಕರಣಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಇತ್ಯರ್ಥಪಡಿಸಲು ಕಾರ್ಮಿಕ ಅದಾಲತ್ ನಡೆಸಲಾಗುವುದು ಎಂದರು.

ಕಾರ್ಮಿಕ ಇಲಾಖೆಯಲ್ಲಿ ಬೋನಸ್, ಗ್ರಾಚ್ಯುಟಿ, ಮೆಟರ್ನಿಟಿ, ಗುತ್ತಿಗೆ ಕಾರ್ಮಿಕರ ಪ್ರಕರಣಗಳು, ಸಂಘಟನೆ ಹಾಗೂ ಆಡಳಿತ ಮಂಡಳಿ ನಡುವೆ ಉಂಟಾಗುವ ವಿವಾದಾಸ್ಪದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಾಗೂ ಅಪೀಲುಗಳನ್ನು ಇತ್ಯರ್ಥಪಡಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗುವುದು ಮತ್ತು ಈ ಬಗ್ಗೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾರ್ಮಿಕ ಆಯುಕ್ತರಿಗೆ ಪ್ರತಿ ತಿಂಗಳು ಗುರಿ ನಿಗದಿಪಡಿಸಲಾಗುವುದು ಎಂದರು.

ವಲಸೆ ಕಾರ್ಮಿಕರಿಗೆ ಬೆಂಗಳೂರು, ಬೆಳಗಾವಿ, ಕಲಬುರಗಿ, ಹಾಸನ, ಶಿವಮೊಗ್ಗ, ದಾವಣಗೆರೆ, ಮಂಗಳೂರು, ಮೈಸೂರು ಮುಂತಾದ ಕಡೆ ತಾತ್ಕಾಲಿಕ ವಸತಿ ವ್ಯವಸ್ಥೆ ನಿರ್ಮಿಸಲು ಆಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಹಾಗೂ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಒಳಪಡುವ ಸುಮಾರು 101 ವರ್ಗಗಳನ್ನು ಗುರುತಿಸಲಾಗಿದ್ದು, ಅವರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಕ್ರಮ ವಹಿಸಲಾಗುವುದು ಎಂದರು.

ಇ.ಎಸ್.ಐ ವ್ಯಾಪ್ತಿಗೆ ಒಳಪಡುವ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಹಾಗೂ ಪ್ರತಿ ಜಿಲ್ಲೆಗೆ ಒಂದು ಇ.ಎಸ್.ಐ ಆಸ್ಪತ್ರೆಯನ್ನು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ ಅಲ್ಲದೆ ಸದರಿ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗವನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರುವ ಕಾರ್ಮಿಕರಿಗೆ ತುರ್ತಾಗಿ ಕೋವಿಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಕೋಟಾದಲ್ಲಿ ಪಡೆದುಕೊಂಡು ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

]]>
https://iambjp.in/archives/304/feed 0
ಸಚಿವ ಶಿವರಾಮ ಹೆಬ್ಬಾರ್ ಅವರ ಭಾವಚಿತ್ರ ಬಿಡಿಸಿ ಅಭಿಮಾನ ವ್ಯಕ್ತಪಡಿಸಿದ ಕಲಾವಿದ https://iambjp.in/archives/136 https://iambjp.in/archives/136#respond Tue, 10 Aug 2021 09:32:01 +0000 https://iambjp.in/?p=136 ಗದಗ :  ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕಲಾವಿದ ಕಾರ್ಮಿಕ ಖಾತೆ ಸಚಿವರಾದ  ಶಿವರಾಮ ಹೆಬ್ಬಾರ್ ಹಾಗೂ ಯುವ ನಾಯಕರಾದ ವಿವೇಕ್ ಹೆಬ್ಬಾರ್ ಅವರ ಭಾವಚಿತ್ರವನ್ನು ಬಿಡಿಸುವುದರ ಮೂಲಕವಾಗಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.

ಇಂದು ಲಕ್ಷ್ಮೇಶ್ವರದ ಸ್ಥಳೀಯ ಮುಖಂಡರು ಭಾವಚಿತ್ರವನ್ನು ಸಚಿವರಾದ ಶಿವರಾಮ ಹೆಬ್ಬಾರ್ ಅವರಿಗೆ ಹಾಗೂ ಯುವ ನಾಯಕರಾದ ವಿವೇಕ್ ಹೆಬ್ಬಾರ್ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ಡಾ‌. ಚಂದ್ರು ಲಮಾಣಿ, ನವೀನ ಲಕ್ಷ್ಮೇಶ್ವರ ಹಾಗೂ ಲಕ್ಷ್ಮೀಶ್ವರದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

]]>
https://iambjp.in/archives/136/feed 0