og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಿ ಮಾತನಾಡುತ್ತಿದ್ದರು.
ಕೆಪಿಟಿಸಿಎಲ್ನ 1899 ಹುದ್ದೆಗಳಿಗೆ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಅಂದಿನಿಂದ ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು, ಈ ಬಗ್ಗೆ ಅನೇಕರು ನನ್ನ ಗಮನ ಸೆಳೆದಾಗ ನಾನು ಕೂಡಲೇ ಅಗತ್ಯವಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ಆದೇಶ ಪತ್ರ ನೀಡುವಂತೆ ಸೂಚನೆ ನೀಡಿದ್ದೆ, ಅದರಂತೆ ಇಂದು 21 ಜನ ಕಿರಿಯ ಪವರ್ ಮ್ಯಾನ್ಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ, ಅತ್ಯಂತ ಶೀಘ್ರದಲ್ಲೇ ಉಳಿದ 1878 ಜನರಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಅವರು ತಿಳಿಸಿದರು. ನಮ್ಮ ಸರ್ಕಾರ ಬಂದ ನಂತರ ಅತಿ ದೊಡ್ಡ ಪ್ರಮಾಣದಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿರುವುದು ವೈಯಕ್ತಿಕವಾಗಿ ನನಗೆ ಸಂತೋಷ ತಂದಿದೆ ಎಂದರು.
ಕೆಪಿಟಿಸಿಎಲ್ನಲ್ಲಿ ಖಾಲಿ ಇರುವ ಇತರ ಹುದ್ದೆಗಳ ಭರ್ತಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಹಾಗೂ ಕೆಪಿಟಿಸಿಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಂ. ಮಂಜುಳಾ ಅವರು ಉಪಸ್ಥಿತರಿದ್ದರು.
]]>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸುವ ದೃಷ್ಟಿಯಿಂದ ಹಾಗೂ ರಾಜ್ಯದ ಎಲ್ಲೆಡೆಯಿಂದ ಸಾಹಿತಿಗಳು, ಕಲಾವಿದರು, ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕೇಂದ್ರ ಕಚೇರಿಗೇ ಬರುವ ಅನಿವಾರ್ಯತೆಯನ್ನು ತಪ್ಪಿಸಿ ಆಯಾ ವಲಯವಾರು ಜಂಟಿ ನಿರ್ದೇಶಕರುಗಳ ಬಳಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬ ದೃಷ್ಟಿಯಿಂದ ಬೆಂಗಳೂರು, ಕಲಬುರ್ಗಿ, ಬೆಳಗಾವಿ ಮತ್ತು ಮೈಸೂರು ವಲಯಗಳಲ್ಲಿ ವಲಯವಾರು ಜಂಟಿ ನಿರ್ದೇಶಕರನ್ನು ನೇಮಕ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಹಾಗೂ ಅಧಿಕಾರ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಈ ವಲಯವಾರು ಜಂಟಿ ನಿರ್ದೇಶಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದರು.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಒಳಗೆ ಎಲ್ಲಾ ಜಂಟಿ ನಿರ್ದೇಶಕರು ತಮಗೆ ಸೂಚಿಸಿದ ವಲಯ ಕಚೇರಿಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಹಾಗೂ ನೂರು ದಿನಗಳ ಕಾರ್ಯಯೋಜನೆ ಸಿದ್ಧಪಡಿಸಬೇಕೆಂದು ಆದೇಶದಲ್ಲಿ ಹೇಳಲಾಗಿದೆ.
ವಿವರ
• ಕೇಂದ್ರ ಕಚೇರಿಯಲ್ಲಿ ಇದ್ದ (ಸುವರ್ಣ ಕರ್ನಾಟಕ) ಜಂಟಿ ನಿರ್ದೇಶಕರ ಹುದ್ದೆ ಬೆಂಗಳೂರಿನಲ್ಲಿಯೇ ಮುಂದುವರೆಯುತ್ತದೆ.
• ಆಡಳಿತಾಧಿಕಾರಿ, ರಂಗಾಯಣ, ಧಾರವಾಡ ಈ ಹುದ್ದೆಯನ್ನು ಕೇಂದ್ರ ಕಚೇರಿ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ.
• ಜಂಟಿ ನಿರ್ದೇಶಕರು (ಸಾಮಾನ್ಯ) ಹುದ್ದೆಯನ್ನು ಬೆಂಗಳೂರು ವಿಭಾಗ ಜಂಟಿ ನಿರ್ದೇಶಕರಾಗಿ ಸ್ಥಳಾಂತರಿಸಲಾಗಿದೆ.
• ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರು (ಆಡಳಿತ) ಹುದ್ದೆಯನ್ನು ಮೈಸೂರು ವಿಭಾಗದ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ.
• ಕೇಂದ್ರ ಕಚೇರಿಯ ಜಂಟಿ ನಿರ್ದೇಶಕರು (ಕಾರ್ಯಕ್ರಮ) ಈ ಹುದ್ದೆಯನ್ನು ಕಲಬುರ್ಗಿ ವಲಯದ ಜಂಟಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
• ಜಂಟಿ ನಿರ್ದೇಶಕರು, ಶಿವಮೊಗ್ಗ ರಂಗಾಯಣ ಈ ಹುದ್ದೆಯನ್ನು ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ.
• ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿಯ ಹುದ್ದೆಗೆ ರಿಜಿಸ್ಟ್ರಾರ್ ಸಂಗೀತ ನೃತ್ಯ ಅಕಾಡೆಮಿ ಹುದ್ದೆಯನ್ನು ಸ್ಥಳಾಂತರಿಸಲಾಗಿದೆ.
• ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಹುದ್ದೆಗೆ ಕೇಂದ್ರ ಕಚೇರಿಯಲ್ಲಿದ್ದ ಸಹಾಯಕ ನಿರ್ದೇಶಕರ ಹುದ್ದೆಯನ್ನು ಸ್ಥಳಾಂತರಿಸಿದೆ.
• ಹಾಗೆಯೇ ಧಾರವಾಡ ರಂಗಾಯಣ ಆಡಳಿತಾಧಿಕಾರಿ ಹುದ್ದೆಗೆ ರಿಜಿಸ್ಟ್ರಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಹುದ್ದೆಯನ್ನು ಸ್ಥಳಾಂತರಿಸಲಾಗಿದೆ.
• ಹಾಗೆಯೇ ರಿಜಿಸ್ಟ್ರಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಹುದ್ದೆಗೆ ಕೇಂದ್ರ ಕಚೇರಿಯ ಸಹಾಯಕ ನಿರ್ದೇಶಕರು (ಕಾರ್ಯಕ್ರಮ) ಹುದ್ದೆಯನ್ನು ಸ್ಥಳಾಂತರಿಸಿದೆ.
ಈ ಎಲ್ಲಾ ಹುದ್ದೆಗಳಿಗೆ ಸಂಬಂಧಪಟ್ಟ ಅಧಿಕೃತ ಆದೇಶವನ್ನು ನೆನ್ನೆ ಹೊರಡಿಸಲಾಗಿದೆ. ಈ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಡಳಿತ ವಿಕೇಂದ್ರೀಕರಣ ಹಾಗೂ ಸುಧಾರಣೆಗೆ ದೃಢ ಹೆಜ್ಜೆ ಇಡಲಾಗಿದೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಸುಧಾರಣಾ ಕ್ರಮ ಅನುಷ್ಠಾನಕ್ಕೆ ತರುವಲ್ಲಿ ಸಚಿವ ಸುನಿಲ್ ಕುಮಾರ್ ದೃಢ ಹೆಜ್ಜೆ ಇಟ್ಟಿದ್ದಾರೆ.
]]>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲ್ಲ ಜಿಲ್ಲಾ ಕೇಂದ್ರಗಳು, ಪ್ರವಾಸೋದ್ಯಮ ಕೇಂದ್ರಗಳಲ್ಲಿ ರಿಚಾರ್ಜ್ ಸೆಂಟರ್ ತೆರೆಯಲು ಬೇರೆ ಬೇರೆ ಎಸ್ಕಾಂಗಳಿಗೆ ಗುರಿ ನೀಡಲಾಗುವುದು. ರಾಜ್ಯದ ಸರಕಾರಿ ಕಛೇರಿಗಳಲ್ಲಿ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಉತ್ತರ ಕರ್ನಾಟಕದಲ್ಲಿ ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಬೇಕೆಂಬ ಬೇಡಿಕೆ ಇತ್ತು. ಇದಕ್ಕಾಗಿ ವಿವಿಧೆಡೆ 60ಕ್ಕೂ ಹೆಚ್ಚು ಸಬ್ ಸ್ಟೇಷನ್‍ಗಳನ್ನು ಇನ್ನು 100 ದಿನಗಳ ಒಳಗೆ ಕೆಪಿಟಿಸಿಎಲ್ ಮೂಲಕ ನಿರ್ಮಿಸಲಾಗುವುದು. ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಇದರಿಂದ ಸಾಧ್ಯವಾಗಲಿದೆ ಎಂದು ವಿವರಿಸಿದರು.
ಜೆಇ, ಲೈನ್‍ಮ್ಯಾನ್ ನೇಮಕಾತಿ, ಜೆಇ ಹುದ್ದೆಗೆ ಬಡ್ತಿ ಸಮಸ್ಯೆಯನ್ನೂ ಬಗೆಹರಿಸಲಾಗುವುದು. ವರ್ಗಾವಣೆ ದಂಧೆಯನ್ನು ಯಾವುದೇ ಅಧಿಕಾರಿಗಳು ಮಾಡುವಂತಿಲ್ಲ. ವರ್ಷಪೂರ್ತಿ ವರ್ಗಾವಣೆ ಇರುವುದಿಲ್ಲ ಎಂದು ತಿಳಿಸಿದರು.
ಎರಡೂ ಇಲಾಖೆಗಳಲ್ಲಿ 100 ದಿನಗಳ ಕಾರ್ಯಕ್ರಮ ಯೋಜಿಸಿದ್ದೇವೆ. ಈ 100 ದಿನಗಳಲ್ಲಿ ಗ್ರಾಮಾಂತರದಲ್ಲಿ ಮನೆಗಳನ್ನು ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗದ ಮನೆಯವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇದನ್ನು ಮುಖ್ಯಮಂತ್ರಿಗಳ ಆಶಯದಂತೆ “ಬೆಳಕು” ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಅತ್ಯಂತ ನಾದರುಸ್ತಿ ಸ್ಥಿತಿಯಲ್ಲಿರುವ ಟ್ರಾನ್ಸ್‍ಫಾರ್ಮರ್ ಬದಲಾವಣೆಗೆ ಟ್ರಾನ್ಸ್‍ಫಾರ್ಮರ್ ಬ್ಯಾಂಕ್ ಸ್ಥಾಪಿಸಲಾಗುವುದು. ಕೇವಲ 24 ಗಂಟೆಗಳಲ್ಲಿ ಹಾಳಾದ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಬದಲಾವಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಗಂಗಾಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆದಿದ್ದು, ತುಂಬಾ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ವಿಳಂಬವಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಬೋರ್‍ವೆಲ್ ಸಿದ್ಧವಾದ 30 ದಿನಗಳ ಒಳಗಾಗಿ ವಿದ್ಯುತ್ ಸಂಪರ್ಕ ನೀಡಲಾಗುವುದು. ಅನಗತ್ಯವಾಗಿ ರೈತರ ಓಡಾಟವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಗಾಗಿ ಅರ್ಜಿ ಹಾಕುವುದು ನಿಧಾನವಾಗಿ ಕಡಿಮೆ ಆಗಬೇಕೆಂಬ ಚಿಂತನೆ ಇದೆ. ಸಾಧಕರನ್ನು ಗುರುತಿಸುವ ಪರಂಪರೆ ನಾಡಿನಾದ್ಯಂತ ನಿರ್ಮಾಣವಾಗಬೇಕು. ಎಲೆಯ ಮರೆ, ತೆರೆಯ ಮರೆಯಲ್ಲಿರುವ ಸಾಧಕರನ್ನು ಗುರುತಿಸುವ ಯೋಜನೆ ಇದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಸಾವಿರಾರು ಕಲಾವಿದರಿದ್ದಾರೆ. ಕೆಲವು ಕಲಾವಿದರು ಮಂತ್ರಿಗಳ ವರೆಗೆ ಬಂದರೆ, ಇನ್ನೂ ಕೆಲವರು ಅಧಿಕಾರಿಗಳವರೆಗೆ ಬರುತ್ತಾರೆ. ಇನ್ನೂ ಕೆಲವರು ಬೆಂಗಳೂರಿಗೆ ಬರುತ್ತಾರೆ. ಯಾವುದೇ ಶಕ್ತಿ ಇಲ್ಲದ ನೂರಾರು ಕಲಾವಿದರು ಗ್ರಾಮೀಣ ಪ್ರದೇಶದಲ್ಲಿ ಉಳಿದಿದ್ದಾರೆ. ಹಾಗಾಗಿ ಕಲಾವಿದರ ಡಾಟಾ ಬ್ಯಾಂಕ್ ಹೊಂದಬೇಕೆಂಬ ಯೋಜನೆ ಇದೆ. ಈ ವಿವರ ಸಂಗ್ರಹ ಕಾರ್ಯ ಮುಂದಿನ 100 ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ ಎಂದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಚೆನ್ನಾಗಿ ಆಗಬೇಕು. ಸ್ವಾತಂತ್ರ್ಯ ಚಳವಳಿಗೆ ಕರ್ನಾಟಕದ ಕೊಡುಗೆ ಎಲ್ಲರಿಗೂ ತಿಳಿಯಬೇಕು. ನೂರಾರು ಜನರ ಬಲಿದಾನ ಆಗಿದ್ದು, ನೂರಾರು ಗ್ರಾಮಗಳು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮದೇ ಆದ ಶೌರ್ಯ ಪ್ರದರ್ಶನ ಮಾಡಿವೆ. ಇಂಥ ಗ್ರಾಮಗಳನ್ನು ಗುರುತಿಸಿ ಅದನ್ನು ನಾಡಿಗೆ ಪರಿಚಯಿಸಲಾಗುವುದು ಎಂದರು.
]]>ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರೊ. ಎಂ. ಅಬ್ದುಲ್ ರೆಹಮಾನ್ ಪಾಷ , ರೋಹಿತ್ ಚಕ್ರತೀರ್ಥ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ ಉಪಸ್ಥಿತರಿದ್ದರು.
]]>ಬೆಂಗಳೂರು : ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು.
ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.
ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ 2019 ಮತ್ತು 20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಗೆ ಆಯ್ಕೆ ಆದ ಶ್ರೀಮತಿ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹಾಗೂ ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆಆದ ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಕಲಾಕ್ಷೇತ್ರದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಿದರು.
ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಕುಳಿತು ಇಲಾಖೆಯ ಕಡತಗಳಿಗೆ ಸಹಿಮಾಡಿ ಅಧಿಕೃತ ಕಾರ್ಯಾರಂಭ ಮಾಡಿದರು.
ಆ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ, ಪುಸ್ತಕ ಹಾಗೂ ಡಿ ವಿ ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು.
ಆನಂತರ ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು.
ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಡಿಯಿಟ್ಟ ಸಚಿವ ಸುನಿಲ್ ಕುಮಾರ್ ಇಡೀ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಸಾಂಸ್ಕೃತಿಕ ವಾತಾವರಣಕ್ಕೆ ಮೆರುಗು ಕೊಟ್ಟರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾಕ್ಟರ್ ಎಂ ಎನ್ ನಂದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಸಂತಕುಮಾರ್ ಬಿವಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ನಾಟಕಕಾರ ಬಿ ವಿ ರಾಜಾರಾಮ್ , ಕಲಾನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸುಮ್ಮನೆ ಸಮನ್ವಯಾಧಿಕಾರಿ ಎಂ ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೇ. ರವಿಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ ರಂಗಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
]]>