og
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121wp-post-author
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home3/buntss5v/iambjp.in/wp-includes/functions.php on line 6121ಬೆಂಗಳೂರು : ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು.
ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.
ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ 2019 ಮತ್ತು 20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಗೆ ಆಯ್ಕೆ ಆದ ಶ್ರೀಮತಿ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹಾಗೂ ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆಆದ ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಕಲಾಕ್ಷೇತ್ರದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಿದರು.
ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಕುಳಿತು ಇಲಾಖೆಯ ಕಡತಗಳಿಗೆ ಸಹಿಮಾಡಿ ಅಧಿಕೃತ ಕಾರ್ಯಾರಂಭ ಮಾಡಿದರು.
ಆ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ, ಪುಸ್ತಕ ಹಾಗೂ ಡಿ ವಿ ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು.
ಆನಂತರ ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು.
ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಡಿಯಿಟ್ಟ ಸಚಿವ ಸುನಿಲ್ ಕುಮಾರ್ ಇಡೀ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಸಾಂಸ್ಕೃತಿಕ ವಾತಾವರಣಕ್ಕೆ ಮೆರುಗು ಕೊಟ್ಟರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾಕ್ಟರ್ ಎಂ ಎನ್ ನಂದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಸಂತಕುಮಾರ್ ಬಿವಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ನಾಟಕಕಾರ ಬಿ ವಿ ರಾಜಾರಾಮ್ , ಕಲಾನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸುಮ್ಮನೆ ಸಮನ್ವಯಾಧಿಕಾರಿ ಎಂ ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೇ. ರವಿಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ ರಂಗಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
]]>